ಸಾರಾಂಶ
ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಗುರುವಾರ ನಾಮಪತ್ರ ಸಲ್ಲಿಸಿದರು.
ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಗುರುವಾರ ನಾಮಪತ್ರ ಸಲ್ಲಿಸಿದರು.
ಗುರುವಾರ ಮಧ್ಯಾಹ್ನ ಒಂದು ಗಂಟೆ ವೇಳೆಗೆ ನಗರದ ತಾಲೂಕು ಕಚೇರಿಗೆ ಆಗಮಿಸಿದ ಅವರು, ಮೂರು ಪ್ರತ್ಯೇಕ ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಗಂಗಾಧರ್ ಅವರೊಂದಿಗೆ ಒಂದು ಪ್ರತಿ ನಾಮಪತ್ರ, ಮಾಜಿ ಸಂಸದ ಡಿ.ಕೆ.ಸುರೇಶ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ, ಮದ್ದೂರು ಶಾಸಕ ಉದಯ್, ಮಾಜಿ ಶಾಸಕ ಎಂ.ಸಿ.ಅಶ್ವತ್ಥ್ ಅವರೊಂದಿಗೆ ಒಂದು ಪ್ರತಿ ನಾಮಪತ್ರ, ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ, ಮುಖಂಡ ವಿ.ಬಿ.ಚಂದ್ರು ಮತ್ತಿರರೊಂದಿಗೆ ಇನ್ನೊಂದು ನಾಮಪತ್ರ ಸಲ್ಲಿಸಿದರು.ಕೋಟ್.............
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಿಡುವಿಲ್ಲದ ಕಾರ್ಯಕ್ರಮಗಳ ನಡುವೆಯೂ ನಾನು ನಾಮಪತ್ರ ಸಲ್ಲಿಸುವ ವೇಳೆ ಚನ್ನಪಟ್ಟಣಕ್ಕೆ ಆಗಮಿಸಿ ನನಗೆ ಬಲ ತಂಬಿದ್ದಾರೆ. ಡಿ.ಕೆ.ಶಿವಕುಮಾರ್ ಹಾಗೂ ಸುರೇಶ್ ತಾಲೂಕಿನ ಅಭಿವೃದ್ಧಿಗೆ ಮಾಡಿರುವ ಚಿಂತನೆಯನ್ನು ಕಂಡು ಅವರೊಂದಿಗೆ ಕೈಜೋಡಿಸಲು ನಾನು ಕಾಂಗ್ರೆಸ್‌ಗೆ ಬಂದಿದ್ದೇನೆ. ನಿಮ್ಮ ಬೆಂಬಲ ಇರಲಿ. ದಾಖಲೆ ಮತಗಳ ಅಂತರದಿಂದ ನನ್ನನ್ನು ಆಶೀರ್ವದಿಸಿ ಗೆಲ್ಲಿಸಬೇಕು.-ಸಿ.ಪಿ.ಯೋಗೇಶ್ವರ್, ಕಾಂಗ್ರೆಸ್ ಅಭ್ಯರ್ಥಿ,
ಚನ್ನಪಟ್ಟಣ ಉಪಚುನಾವಣೆಪೊಟೋ೨೪ಸಿಪಿಟಿ೧:
ಚನ್ನಪಟ್ಟಣ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗುರುವಾರ ನಾಮಪತ್ರ ಸಲ್ಲಿಸಿದರು.