ಸಾರಾಂಶ
ಚನ್ನಪಟ್ಟಣ: ಬಡವರಿಗೆ ಸೂರು ಸೇರಿದಂತೆ ಮೂಲ ಸೌಕರ್ಯಗಳನ್ನು ಚನ್ನಪಟ್ಟಣ ಕ್ಷೇತ್ರಕ್ಕೆ ಕಲ್ಪಿಸುತ್ತಿರುವ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ಹಾಗಾಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ರವರು ಗೆಲುವು ನಿಶ್ಚಿತ ಎಂದು ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಪುಟ್ಟರಾಜು ವಿಶ್ವಾಸ ವ್ಯಕ್ತಪಡಿಸಿದರು.

ಚನ್ನಪಟ್ಟಣ ನಗರಸಭೆ ವ್ಯಾಪ್ತಿಯ ಮಳೂರು ಭಾಗದಲ್ಲಿ ಮಂಗಳವಾರ ಯೋಗೇಶ್ವರ್ ಪರ ಮತಯಾಚಿಸಿದ ಅವರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಚನ್ನಪಟ್ಟಣ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲು 490 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ. ಸಾವಿರಾರು ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರು, ಆಟೋ ಚಾಲಕರು, ಬಡವರು ನಿವೇಶನಗಳಿಲ್ಲದೆ ಬಾಡಿಗೆ ಮನೆಯಲ್ಲಿ ಜೀವನ ನಡೆಸುವವರ ಕಷ್ಟವನ್ನರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರು ಹಂತದಲ್ಲಿ ಅರ್ಹರಿಗೆ ಒಂದು ಸಾವಿರ ನಿವೇಶನಗಳನ್ನು ವಿತರಣೆ ಮಾಡಿದ್ದಾರೆ ಎಂದರು.ಬಡವರ ಧ್ವನಿಯಾಗಿ ಕೆಲಸ ಮಾಡುವ ಪಕ್ಷ ಎಂದರೆ ಅದು ಕಾಂಗ್ರೆಸ್. ಮೊದಲಿನಿಂದಲೂ ದೀನ ದಲಿತರು, ಕೂಲಿಕಾರ್ಮಿಕರು, ರೈತ ಪರವಾಗಿ ಕೆಲಸ ಮಾಡುತ್ತಾ ಬಂದಿದೆ. ಹಾಗಾಗಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಅವರನ್ನು ಅತ್ಯಧಿಕ ಬಹುಮತಗಳಿಂದ ಆಯ್ಕೆ ಮಾಡಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಕೈ ಬಲಪಡಿಸುವಂತೆ ಮತದಾರರಲ್ಲಿ ಮನವಿ ಮಾಡುತ್ತಿರುವುದಾಗಿ ಪುಟ್ಟರಾಜು ಹೇಳಿದರು.
ಈ ವೇಳೆ ಚನ್ನಪಟ್ಟಣ ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷ ರಾಜ್ಮಹೇಂದ್ರ, ನಗರ ಮಹಿಳಾ ಘಟಕದ ಅಧ್ಯಕ್ಷೆ ಜಯಲಕ್ಷ್ಮಮ್ಮ ಸೇರಿದಂತೆ ಕಾರ್ಮಿಕ ಘಟಕದ ಪದಾಧಿಕಾರಿಗಳು ಹಾಜರಿದ್ದರು.5ಕೆಆರ್ ಎಂಎನ್ 5.ಜೆಪಿಜಿ
ಚನ್ನಪಟ್ಟಣ ನಗರಸಭೆ ವ್ಯಾಪ್ತಿಯ ಮಳೂರು ಭಾಗದಲ್ಲಿ ಮಂಗಳವಾರ ಯೋಗೇಶ್ವರ್ ಪರವಾಗಿ ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಪುಟ್ಟರಾಜು ಮತಯಾಚನೆ ಮಾಡಿದರು.