ಸಾಧನೆ ಆಧಾರದಲ್ಲಿ ಯೋಗಿ ಗೆಲ್ಲಬೇಕು

| Published : Nov 04 2024, 12:17 AM IST

ಸಾರಾಂಶ

ಚನ್ನಪಟ್ಟಣ: ತಮ್ಮ ಊರಿನಲ್ಲೇ ಒಂದು ಅಂಬೇಡ್ಕರ್ ಭವನ ನಿರ್ಮಿಸದವರು ಚನ್ನಪಟ್ಟಣಕ್ಕೆ ಬಂದು ದಲಿತರ ಕುರಿತು, ಅಂಬೇಡ್ಕರ್ ಭವನದ ಕುರಿತು ಮಾತನಾಡುತ್ತಿದ್ದಾರೆ ಎಂದು ಮಳವಳ್ಳಿ ಮಾಜಿ ಶಾಸಕ ಅಂದಾನಿ ವಿರುದ್ಧ ಮಳವಳ್ಳಿ ಹಾಲಿ ಶಾಸಕ ನರೇಂದ್ರಸ್ವಾಮಿ ವಾಗ್ದಾಳಿ ನಡೆಸಿದರು.

ಚನ್ನಪಟ್ಟಣ: ತಮ್ಮ ಊರಿನಲ್ಲೇ ಒಂದು ಅಂಬೇಡ್ಕರ್ ಭವನ ನಿರ್ಮಿಸದವರು ಚನ್ನಪಟ್ಟಣಕ್ಕೆ ಬಂದು ದಲಿತರ ಕುರಿತು, ಅಂಬೇಡ್ಕರ್ ಭವನದ ಕುರಿತು ಮಾತನಾಡುತ್ತಿದ್ದಾರೆ ಎಂದು ಮಳವಳ್ಳಿ ಮಾಜಿ ಶಾಸಕ ಅಂದಾನಿ ವಿರುದ್ಧ ಮಳವಳ್ಳಿ ಹಾಲಿ ಶಾಸಕ ನರೇಂದ್ರಸ್ವಾಮಿ ವಾಗ್ದಾಳಿ ನಡೆಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದಾನಿ ತಮ್ಮ ಕ್ಷೇತ್ರದಲ್ಲೇ ಕೆಲಸ ಮಾಡಲಿಲ್ಲ. ಆದರೆ, ಇಲ್ಲಿಗೆ ಬಂದು ಅಭಿವೃದ್ಧಿ ಕುರಿತು ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿ, ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ನೀರಾವರಿ ಯೋಜನೆಯ ಅನುಷ್ಠಾನ ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಆದರೆ, ಎನ್‌ಡಿಎ ಅಭ್ಯರ್ಥಿಗೆ ಏನು ಅನುಭವವಿದೆ ಎಂದು ಪ್ರಶ್ನಿಸಿದ ಅವರು, ಚನ್ನಪಟ್ಟಣ ಉಪಚುನಾವಣೆ ಕಣ್ಣೀರಿನ ಮೇಲೆ ನಡೆಯದೇ ಸಾಧನೆ ಆಧಾರದಲ್ಲಿ ನಡೆದರೆ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಗೆಲ್ಲಬೇಕು ಎಂದು ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಹೇಳಿದರು.

ಮಂಡ್ಯ, ರಾಮನಗರ ಜಿಲ್ಲೆಗೆ ಕುಮಾರಸ್ವಾಮಿ ಅವರ ಕೊಡುಗೆ ಶೂನ್ಯ. ಚುನಾವಣೆ ಬಂದಾಗ ಮಾತ್ರ ಇವರು ಬರುತ್ತಾರೆ. ಚುನಾವಣೆ ಮಾಡಲಿ. ಅದಕ್ಕಾಗಿ ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ. ಇನ್ನು ಮುಂದೆ ಕಾಂಗ್ರೆಸ್ ವಿರುದ್ಧ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಲಿ ಎಂದರು.ಈ ವೇಳೆ ಕಾಂಗ್ರೆಸ್ ಮುಖಂಡರಾದ ಎಸ್.ಸಿ.ಶೇಖರ್, ಕೋಟೆ ಸಿದ್ದರಾಮು, ನೀಲಸಂದ್ರ ಸದಾನಂದ, ತಾಲೂಕು ಎಸ್ಸಿ-ಎಸ್ಟಿ ವಿಭಾಗದ ಅಧ್ಯಕ್ಷ ವೈ.ಟಿ.ಹಳ್ಳಿ ಶಿವು, ಎಸ್ಸಿ ವಿಭಾಗದ ಜಿಲ್ಲಾಧ್ಯಕ್ಷ ನರಸಿಂಹಮೂರ್ತಿ, ಕಾಳಯ್ಯ ಹಾಜರಿದ್ದರು.

ಪೊಟೋ೩ಸಿಪಿಟಿ೨:

ಚನ್ನಪಟ್ಟಣದಲ್ಲಿ ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಕಾಂಗ್ರೆಸ್‌ ಅಭ್ಯರ್ಥಿ ಯೋಗೇಶ್ವರ್‌ ಪರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.