ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದರೆ ವಿಶ್ವಾಸ ಗಳಿಸಲು ಸಾಧ್ಯ

| Published : Oct 04 2025, 12:00 AM IST

ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದರೆ ವಿಶ್ವಾಸ ಗಳಿಸಲು ಸಾಧ್ಯ
Share this Article
  • FB
  • TW
  • Linkdin
  • Email

ಸಾರಾಂಶ

ವಿಜಯದಶಮಿ ಹಬ್ಬದ ಅಂಗವಾಗಿ ಹಳೆ ತಾಲೂಕು ಕಚೇರಿಯಲ್ಲಿ ಕಂದಾಯ ಇಲಾಖೆಯಿಂದ ಏರ್ಪಡಿಸಿದ್ದ ಕಸಬಾ ವಲಯದ ಜಮಾಬಂಧಿ ಕಾರ್ಯಕ್ರಮದಲ್ಲಿ ಮಾತನಾಡಿ, ವಿಜಯದಶಮಿ ಹಬ್ಬವು ಸತ್ಯ, ಧರ್ಮ ಮತ್ತು ನ್ಯಾಯದ ಜಯವನ್ನು ಪ್ರತಿಬಿಂಬಿಸುತ್ತದೆ. ಈ ಹಬ್ಬದ ಹಿನ್ನೆಲೆಯಲ್ಲಿ, ನಾವು ಕೂಡಾ ಸಾರ್ವಜನಿಕರಿಗೆ ನ್ಯಾಯಯುತ, ಪಾರದರ್ಶಕ ಹಾಗೂ ಸಮರ್ಥ ಸೇವೆ ನೀಡಲು ಬದ್ಧರಾಗಿರಬೇಕು. ನಾವು ನಮ್ಮ ಕರ್ತವ್ಯಕ್ಕೆ ಸದಾ ನಿಷ್ಠೆಯಿಂದ ಕೆಲಸ ಮಾಡಿದರೆ, ಹಬ್ಬದ ಸಾರ್ಥಕತೆ ಹೆಚ್ಚಾಗುತ್ತದೆ. ಪ್ರತಿ ಹಬ್ಬವು ನಮ್ಮ ಸೇವೆ ಮನೋಭಾವವನ್ನು ಸುಧಾರಿಸಲು ಪ್ರೇರಣೆ ನೀಡಬೇಕು ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಬೇಲೂರು ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಮಾಡಿದರೆ ಸಾರ್ವಜನಿಕರ ವಿಶ್ವಾಸ ಹೆಚ್ಚಾಗುತ್ತದೆ, ಜನರಿಗೆ ದೋಷ ಇಲ್ಲದೆ, ಸುಲಭವಾಗಿ ಸೇವೆ ದೊರಕುವಂತೆ ಕ್ರಮಗಳನ್ನು ಕೈಗೊಳ್ಳುವುದು ನಮ್ಮ ಧ್ಯೇಯವಾಗಿರಬೇಕು ಎಂದು ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಹೇಳಿದರು.ವಿಜಯದಶಮಿ ಹಬ್ಬದ ಅಂಗವಾಗಿ ಹಳೆ ತಾಲೂಕು ಕಚೇರಿಯಲ್ಲಿ ಕಂದಾಯ ಇಲಾಖೆಯಿಂದ ಏರ್ಪಡಿಸಿದ್ದ ಕಸಬಾ ವಲಯದ ಜಮಾಬಂಧಿ ಕಾರ್ಯಕ್ರಮದಲ್ಲಿ ಮಾತನಾಡಿ, ವಿಜಯದಶಮಿ ಹಬ್ಬವು ಸತ್ಯ, ಧರ್ಮ ಮತ್ತು ನ್ಯಾಯದ ಜಯವನ್ನು ಪ್ರತಿಬಿಂಬಿಸುತ್ತದೆ. ಈ ಹಬ್ಬದ ಹಿನ್ನೆಲೆಯಲ್ಲಿ, ನಾವು ಕೂಡಾ ಸಾರ್ವಜನಿಕರಿಗೆ ನ್ಯಾಯಯುತ, ಪಾರದರ್ಶಕ ಹಾಗೂ ಸಮರ್ಥ ಸೇವೆ ನೀಡಲು ಬದ್ಧರಾಗಿರಬೇಕು. ನಾವು ನಮ್ಮ ಕರ್ತವ್ಯಕ್ಕೆ ಸದಾ ನಿಷ್ಠೆಯಿಂದ ಕೆಲಸ ಮಾಡಿದರೆ, ಹಬ್ಬದ ಸಾರ್ಥಕತೆ ಹೆಚ್ಚಾಗುತ್ತದೆ. ಪ್ರತಿ ಹಬ್ಬವು ನಮ್ಮ ಸೇವೆ ಮನೋಭಾವವನ್ನು ಸುಧಾರಿಸಲು ಪ್ರೇರಣೆ ನೀಡಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಕಸಬಾ ವಲಯದ ಅಧಿಕಾರಿಗಳು, ಕಂದಾಯ ಇಲಾಖೆಯ ಸಿಬ್ಬಂದಿ, ಸ್ಥಳೀಯ ನೌಕರರು ಮತ್ತು ಸಾರ್ವಜನಿಕರು ಭಾಗವಹಿಸಿದರು. ಈ ಸಂದರ್ಭದಲ್ಲಿ ಜನರಿಗೆ ಕಂದಾಯ ಇಲಾಖೆಯಿಂದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು ಹಾಗೂ ಹಲವಾರು ಸೌಲಭ್ಯಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸಮರ್ಥವಾಗಿ ಹೇಗೆ ಮಾಡುವುದು ಎಂಬುದರ ಬಗ್ಗೆ ಸೂಚನೆ ನೀಡಲಾಯಿತು.