ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪುಸ್ತಕಗಳನ್ನು ಕೊಂಡು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಅದರಲ್ಲಿರುವ ಗುಣಾತ್ಮಕ ಅಂಶಗಳನ್ನು ತಮ್ಮಲ್ಲಿ ಅಳವಡಿಸಿಕೊಂಡರೆ ನಿಮ್ಮ ಬದುಕನ್ನು ಹಸನು ಮಾಡಿಕೊಳ್ಳಬಹುದು ಎಂದು ವಿಶ್ವಚೇತನ ನವೋದಯ ತರಬೇತಿ ಕೇಂದ್ರದ ಅಧ್ಯಕ್ಷರಾದ ಮಂಜುನಾಥ ಕಳ್ಳಿಹಾಳ್ ಹೇಳಿದರು.
ಹಿರೇಕೆರೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪುಸ್ತಕಗಳನ್ನು ಕೊಂಡು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಅದರಲ್ಲಿರುವ ಗುಣಾತ್ಮಕ ಅಂಶಗಳನ್ನು ತಮ್ಮಲ್ಲಿ ಅಳವಡಿಸಿಕೊಂಡರೆ ನಿಮ್ಮ ಬದುಕನ್ನು ಹಸನು ಮಾಡಿಕೊಳ್ಳಬಹುದು ಎಂದು ವಿಶ್ವಚೇತನ ನವೋದಯ ತರಬೇತಿ ಕೇಂದ್ರದ ಅಧ್ಯಕ್ಷರಾದ ಮಂಜುನಾಥ ಕಳ್ಳಿಹಾಳ್ ಹೇಳಿದರು.ಪಟ್ಟಣದ ವಿಶ್ವಚೇತನ ನವೋದಯ ತರಬೇತಿ ಕೇಂದ್ರ ಹಿರೇಕೆರೂರಿನಲ್ಲಿ ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಜಿಲ್ಲಾ ಜಾಗೃತ ಸಮಿತಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕ ಸಂಯುಕ್ತಾಶ್ರಯದಲ್ಲಿ ಮನೆಗೊಂದು ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಧ್ಯಕ್ಷತೆಯನ್ನು ಹಿರೇಕೆರೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎನ್. ಸುರೇಶ್ ಕುಮಾರ್ ಮಾತನಾಡಿ, ಇಂದಿನ ವಿದ್ಯಾರ್ಥಿಗಳಲ್ಲಿ ಇತ್ತೀಚಿನ ದಿನಗಳಲ್ಲಿ ಓದುವ ಹವ್ಯಾಸ ಕಡಿಮೆಯಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದರು. ಪ್ರತಿಯೊಬ್ಬ ವ್ಯಕ್ತಿ, ವಿದ್ಯಾರ್ಥಿ ಪ್ರತಿನಿತ್ಯ ಪುಸ್ತಕಗಳನ್ನು ಓದುವುದರಿಂದ ಜ್ಞಾನಾರ್ಜನೆ ಜೊತೆಗೆ ಸಂಸ್ಕಾರವು ಸಹ ಬೆಳೆಯುತ್ತದೆ ಎಂದರು. ಕಾರ್ಯಕ್ರಮಕ್ಕೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮನೆಗೊಂದು ಪುಸ್ತಕ ಅನುಷ್ಠಾನ ಕಾರ್ಯಕ್ರಮಕ್ಕೆ 60 ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು.ಈ ವೇಳೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಸತೀಶ್ ಕುಲಕರ್ಣಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಲಿಂಗಯ್ಯ ಹಿರೇಮಠ್, ಹಿರೇಕೆರೂರು ತಾಲೂಕು ಕಸಾಪದ ಕೋಶಾಧ್ಯಕ್ಷ ಮಹೇಂದ್ರ ಎಚ್. ಬಡಳ್ಳಿ ಅನಿತಾ ಮಂಜುನಾಥ್, ಎಸ್.ಆರ್. ಹಿರೇಮಠ್, ಪ್ರಕಾಶ್ ಹಿತ್ಲಳ್ಳಿ, ಪಾರ್ವತಿ ಮಂಜುನಾಥ್, ಸುಭಾಷ್ ಮಡಿವಾಳರ್ ಹಾಗೂ ಇತರರಿದ್ದರು. ಕಸಾಪ ಗೌರವ ಕಾರ್ಯದರ್ಶಿ ಎಂ.ಎಂ. ಮತ್ತೂರು ನಿರ್ವಹಿಸಿದರು.