ಯುವ ಪೀಳಿಗೆಗೆ ಹಿರಿಯರ ಮಾರ್ಗದರ್ಶನ ಅಗತ್ಯ: ಶಾಸಕ ಪಾಟೀಲ

| Published : Mar 12 2024, 02:08 AM IST

ಯುವ ಪೀಳಿಗೆಗೆ ಹಿರಿಯರ ಮಾರ್ಗದರ್ಶನ ಅಗತ್ಯ: ಶಾಸಕ ಪಾಟೀಲ
Share this Article
  • FB
  • TW
  • Linkdin
  • Email

ಸಾರಾಂಶ

ಮುದ್ದೇಬಿಹಾಳ: ಯುವ ಪೀಳಿಗೆಗೆ ಹಿರಿಯರ ಮಾರ್ಗದರ್ಶನ ಅಗತ್ಯ. ಅನುಭವದಿಂದ ಹೇಳುವ ಮಾತು ಕೇಳುವ ಪದ್ಧತಿಯನ್ನು ಯುವಕರು ರೂಢಿಸಿಕೊಳ್ಳಬೇಕು ಎಂದು ಶಾಸಕ, ಸಾಬೂನ ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲೂಕು ಪಂಚಾಯತಿ ವಸತಿ ಗ್ರಹಗಳ ಆವರಣದಲ್ಲಿ ರಾಜ್ಯ ನಿವೃತ್ತ ನೌಕರರ ಸಂಘ ಹಮ್ಮಿಕೊಂಡಿದ್ದ 75ವರ್ಷ ಪೂರೈಸಿದ ಸಂಘದ ಸದಸ್ಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುದ್ದೇಬಿಹಾಳ: ಯುವ ಪೀಳಿಗೆಗೆ ಹಿರಿಯರ ಮಾರ್ಗದರ್ಶನ ಅಗತ್ಯ. ಅನುಭವದಿಂದ ಹೇಳುವ ಮಾತು ಕೇಳುವ ಪದ್ಧತಿಯನ್ನು ಯುವಕರು ರೂಢಿಸಿಕೊಳ್ಳಬೇಕು ಎಂದು ಶಾಸಕ, ಸಾಬೂನ ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲೂಕು ಪಂಚಾಯತಿ ವಸತಿ ಗ್ರಹಗಳ ಆವರಣದಲ್ಲಿ ರಾಜ್ಯ ನಿವೃತ್ತ ನೌಕರರ ಸಂಘ ಹಮ್ಮಿಕೊಂಡಿದ್ದ 75ವರ್ಷ ಪೂರೈಸಿದ ಸಂಘದ ಸದಸ್ಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಹಿರಿಯರನ್ನು ನಿರ್ಲಕ್ಷ್ಯಿಸುವ ಪರಿಪಾಟ ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿ. ಕೌಟುಂಬಿಕ ವ್ಯವಸ್ಥೆ ಹಾಳಾಗುತ್ತಿದೆ. ಮನೆಯಲ್ಲಿ ಹಿರಿಯರಿದ್ದರೆ ಸಂಬಂಧಗಳು ಗಟ್ಟಿಯಾಗಿರುತ್ತವೆ ಎಂದರು.

ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹಿರಿಯ ನಾಗರಿಕರನ್ನು, ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು. ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಂ.ವಿ.ಮಾಟಲದಿನ್ನಿ, ಗುರುರಾಜ ದೊಡ್ಡಿಹಾಳ, ತಾಲೂಕ ನೌಕರರ ಸಂಘದ ಅಧ್ಯಕ್ಷ ಎಸ್.ಆರ್.ಕಟ್ಟಿಮನಿ, ಎಸ್‌ಬಿಐ ಬ್ಯಾಂಕ್‌ ವ್ಯವಸ್ಥಾಪಕ ದೀಪಕ.ಆರ್ ಬಿ, ಪ್ರವೀಣ ಸುಣಕಲ್ಲ, ನಿವೃತ್ತ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ಎ.ಬಿ.ಮಲಗೌಡರ, ರಾಜಶೇಖರ ಮ್ಯಾಗೇರಿ, ಸದಾಶಿವ ಮಾಗಿ, ಎಂ.ಬಿ.ಸಗರಿ, ಬಿ.ವಿ.ಕೋರಿ, ಎಸ್.ಸಿ.ಚೌಧರಿ, ಎಸ್.ಎ.ಬೇವಿನಗಿಡದ, ಬಿ.ಎಚ್.ಬಳಬಟ್ಟಿ ಸೇರಿದಂತೆ ಹಲವರು ಇದ್ದರು.

೧೧ಎಂಬಿಎಲ್೧: ಮುದ್ದೇಬಿಹಾಳ ಪಟ್ಟಣದ ತಾಲೂಕು ಪಂಚಾಯತ ವಸತಿ ಗ್ರಹಗಳ ಆವರಣದಲ್ಲಿ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ೭೫ವರ್ಷ ವಸಂತ ಪೂರೈಸಿದ ಸಂಘದ ಸದಸ್ಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಹಾಗೂ ನೂತನ ಸದಸ್ಯರ ಸ್ವಾಗತ ಸಮಾರಂಭವನ್ನು ಶಾಸಕ ಹಾಗೂ ಕರ್ನಾಟಕ ಸರಕಾರದ ಸಾಭೂನ ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ ಸೋಮವಾರ ಉದ್ಘಾಟಿಸಿದರು