ಕನ್ನಡಪ್ರಭ ವಾರ್ತೆ ಕೊಲ್ಹಾರ

ತಾಲೂಕಿನ ಕುಬಕಡ್ಡಿ ಗ್ರಾಮದ ಹೊರವಲಯದ ಜಮೀನಿನಲ್ಲಿ ನೀರಿನ ಹೊಂಡದಲ್ಲಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ಪಟ್ಟಣದ ಎರಡನೇ ವಾರ್ಡಿನ ನಿವಾಸಿ ಈರಣ್ಣ ಸಂಗಪ್ಪ ಟಕ್ಕಳಕಿ (20) ಮೃತ. ಕುಡಿಯುವ ನೀರು ತರಲು ತೆರಳಿದ್ದ ವೇಳೆ ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ ಪರಿಣಾಮ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕೊಲ್ಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.