ಮಾದಕ ವ್ಯಸನಕ್ಕೆ ಯುವಕರೇ ಹೆಚ್ಚು ಬಲಿ

| Published : Nov 18 2025, 12:15 AM IST

ಸಾರಾಂಶ

ಭವಿಷ್ಯತ್ತಿನ ಉತ್ತಮ ಪ್ರಜೆಗಳು ಹಾಗೂ ಉತ್ತಮ ಸಮಾಜ ನಿರ್ಮಿಸಲು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನಹರಿಸಬೇಕು. ಯಾವುದೇ ಕಾರಣಕ್ಕೂ ಮಾದಕ ವಸ್ತುಗಳ ವ್ಯಸನಿಗಳಾಗಬಾರದು. ಕುಟುಂಬದ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ಮಾದಕ ವಸ್ತುಗಳಿಂದ ಹೆಚ್ಚು ದೂರ ಇರಬೇಕಿದೆ ಆಗ ಮಾತ್ತ ಸ್ವಸ್ಥ ಸಮಾಜದಲ್ಲಿ ಆರೋಗ್ಯವಂತ ಜೀವನವನ್ನು ನಡೆಸಲು ಸಾದ್ಯವೆಂದರು. ಮಾದಕ ವಸ್ತುಗಳಿಗೆ, ದುಶ್ಚಟಗಳಿಗೆ ಮಕ್ಕಳು ಮತ್ತು ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ ಎಂದು ಹೆಚ್ಚುವರಿ ನ್ಯಾಯಾಧೀಶರಾದ ಎ.ಎಸ್. ಸಲ್ಮಾ ಬೇಸರ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಬೇಲೂರುಮಾದಕ ವಸ್ತುಗಳಿಗೆ, ದುಶ್ಚಟಗಳಿಗೆ ಮಕ್ಕಳು ಮತ್ತು ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ ಎಂದು ಹೆಚ್ಚುವರಿ ನ್ಯಾಯಾಧೀಶರಾದ ಎ.ಎಸ್. ಸಲ್ಮಾ ಬೇಸರ ವ್ಯಕ್ತಪಡಿಸಿದರು.ಪಟ್ಟಣದಲ್ಲಿ ತಾಲೂಕು ಕಾನೂನು ಸೇವೆಗಳ‌ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಕೆ. ರೋಟರಿ ಮತ್ತು ಲಯನ್ಸ್ ಕ್ಲಬ್ ಸೇರಿದಂತೆ ವಿವಿಧ ಸಂಸ್ಥೆಗಳ‌ ಸಹಯೋಗದೊಂದಿಗೆ ಹಮ್ಮಿಕೊಂಡ ವಿಶ್ವ ಮಾದಕ ವ್ಯಸನ ವಿರೋಧಿ ಮಾಸಾಚರಣೆ ಜಾಗೃತಿ ಜಾಥಾ ಮತ್ತು ಮಾನವ ಸರಪಳಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣೆ ಕಾನೂನು ಬಾಹಿರ ಎಂದು ಗೊತ್ತಿದ್ದರೂ ಇದರ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಮಾದಕ ವಸ್ತುಗಳ ಹತೋಟಿಗೆ ತರಲು ವಿಶ್ವದೆಲ್ಲೆಡೆ ಕಾನೂನು ಪ್ರಯತ್ನಗಳು ನಡೆಯುತ್ತಿವೆ. ಆದರೆ ಇದನ್ನು ಬುಡ ಸಮೇತ ಕಿತ್ತು ಹಾಕಲು ಸಾರ್ವಜನಿಕರ ಸಹಕಾರ ಅಷ್ಟೇ ಪ್ರಮುಖವಾಗಿದೆ ಎಂದರು.

ಭವಿಷ್ಯತ್ತಿನ ಉತ್ತಮ ಪ್ರಜೆಗಳು ಹಾಗೂ ಉತ್ತಮ ಸಮಾಜ ನಿರ್ಮಿಸಲು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನಹರಿಸಬೇಕು. ಯಾವುದೇ ಕಾರಣಕ್ಕೂ ಮಾದಕ ವಸ್ತುಗಳ ವ್ಯಸನಿಗಳಾಗಬಾರದು. ಕುಟುಂಬದ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ಮಾದಕ ವಸ್ತುಗಳಿಂದ ಹೆಚ್ಚು ದೂರ ಇರಬೇಕಿದೆ ಆಗ ಮಾತ್ತ ಸ್ವಸ್ಥ ಸಮಾಜದಲ್ಲಿ ಆರೋಗ್ಯವಂತ ಜೀವನವನ್ನು ನಡೆಸಲು ಸಾದ್ಯವೆಂದರು.

ಪೊಲೀಸ್ ಇಲಾಖೆ ಸಿಪಿಐ ರೇವಣ್ಣ ಮಾತನಾಡಿ, ಸಮಾಜದ ಜವಾಬ್ದಾರಿಯುತ ಪ್ರಜೆಯಾಗಿ ಮಾದಕ ವಸ್ತುಗಳ ಮಾರಾಟ ಮತ್ತು ಅಕ್ರಮ ಸಾಗಾಟದಂತಹ ಪ್ರಕರಣಗಳು ಕಂಡುಬಂದರೆ ತಕ್ಷಣ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು. ಇತ್ತೀಚಿನ ದಿನಗಳಲ್ಲಿ ನಡೆಯುವ ಬಹುತೇಕ ಅಪಘಾತ ಮತ್ತು ‌ಅಹಿತಕರ ಘಟಕಗಳನ್ನು ಸೂಕ್ಷ್ಮವಾಗಿ ಪರಿಗಣಿಸಿದ ಸಂದರ್ಭದಲ್ಲಿ ಡ್ರಗ್ಸ್ ಜಾಲ ಕಂಡು ಬರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯೊಂದಿಗೆ ಇಂತಹ ಜಾಲಗಳು ಕಂಡುಬಂದರೆ ತಿಳಿಸುವ ಮೂಲಕ ಕಡಿವಾಣ ಹಾಕಬಹುದು ಎಂದರು.

ಆರೋಗ್ಯಾಧಿಕಾರಿ ಡಾ. ವಿಜಯ್ ಮಾತನಾಡಿ, ಮಾದಕ ವಸ್ತುಗಳ ವ್ಯಸನ ಯುವಜನತೆ ಮೇಲೆ ಪರಿಣಾಮ ಬೀರುತ್ತಿದೆ. ಸಂತೋಷ, ಗೆಳೆಯರ ಒತ್ತಡ, ನೋವು ನಿವಾರಣೆ ನೆಪ, ಆಧುನಿಕ ಜೀವನಶೈಲಿ ಅನುಕರುಣೆ ಮಾಡಲು ವ್ಯಸನಕ್ಕೆ ತುತ್ತಾಗುತ್ತಾರೆ. ಇದರಿಂದ ಹಿಂಸಾತ್ಮಕ ನಡವಳಿಕೆ, ಉದ್ಯೋಗ ಮತ್ತು ಕೌಟುಂಬಿಕ ಸಮಸ್ಯೆಗಳು, ಆತ್ಮಹತ್ಯೆ, ಕಾನೂನುಬಾಹಿರ ಕೃತ್ಯಗಳು, ದೈಹಿಕ, ಮಾನಸಿಕ ಕಾಯಿಲೆಗಳು, ರೋಗಗಳಿಗೆ ದಾಸರಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬೃಹತ್ ಪ್ರಮಾಣದಲ್ಲಿ ಮಾನವ ಸರಪಳಿ ರಚಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ವಕೀಲರ ಸಂಘದ ಅಧ್ಯಕ್ಷ ನಟರಾಜ್, ರೋಟರಿ ಕ್ಲಬ್ ಅಧ್ಯಕ್ಷ ರಂಗನಾಥ, ಲಯನ್ಸ್ ಕ್ಲಬ್ ಅಧ್ಯಕ್ಷೆ ತಾರಾಮಣಿ ಸುರೇಶ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಬಿ.ಶಿವರಾಜ್, ಆಟೋ ಸಂಘದ ಅಧ್ಯಕ್ಷ ದೀಪು, ಶಿವಮರಿಯಪ್ಪ ಮುಂತಾದವರು ಹಾಜರಿದ್ದರು.