ಸಾರಾಂಶ
ಮಲ್ಪೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ರಾಷ್ರ್ರೀಯ ಸೇವಾ ಯೋಜನಾ ಘಟಕ ಹಾಗೂ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಉಡುಪಿ ವತಿಯಿಂದ ಆಯೋಜಿಸಿದ ಪ್ರಸಕ್ತ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಎನ್‌ಎಸ್‌ಎಸ್‌ನಂತಹ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ಕರೆ ನೀಡಿದರು.ಅವರು ಬುಧವಾರ ಮಲ್ಪೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ರಾಷ್ರ್ರೀಯ ಸೇವಾ ಯೋಜನಾ ಘಟಕ ಹಾಗೂ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಉಡುಪಿ ವತಿಯಿಂದ ಆಯೋಜಿಸಿದ ಪ್ರಸಕ್ತ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.ಯುವಜನರು ಸ್ವಯಂ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕೆಂಬುದು ಮಹಾತ್ಮ ಗಾಂಧೀಜಿಯವರ ಆಶಯವಾಗಿತ್ತು. ಸೇವಾ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಎನ್‌ಎಸ್‌ಎಸ್ ಶಿಬಿರಗಳು ವಿದ್ಯಾರ್ಥಿಗಳ ಜೀವನದಲ್ಲಿ ನಾಯಕತ್ವ, ಶಿಸ್ತಿನ ಜತೆಗೆ ಸಾರ್ವತ್ರಿಕ ಪ್ರಜ್ಞೆಯನ್ನು ಬೆಳೆಸಲು ಸಹಕಾರಿಯಾಗಿದೆ ಎಂದರು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್ ಮಾತನಾಡಿ, ಇಂಥಹ ಶಿಬಿರಗಳು ನೀಡುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡ ವಿದ್ಯಾರ್ಥಿಗಳು ಸಮಾಜಸೇವಕರಾಗಿ ಪರಿವರ್ತನೆಗೊಂಡು ಸಮಾಜದ ಏಳಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ ಎಂದರು.ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸಂಧ್ಯಾ, ಕಾಲೇಜಿನ ಶಿಕ್ಷಣ ಸೇವಾ ಸಮಿತಿಯ ಖಜಾಂಚಿ ಶೇಖರ್ ಕೋಟ್ಯಾನ್, ಮಲ್ಪೆಯ ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯ ಸದಾನಂದ ಸಾಲ್ಯಾನ್, ಖಜಾಂಚಿ ಚಂದ್ರಶೇಖರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಯಾನಂದ, ಶಿಕ್ಷಣ ತಜ್ಞ ವಿಶ್ವನಾಥ ಬಾಯರಿ, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವರ್ಗೀಸ್ ಪಿ., ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ) ವಿಭಾಗದ ಮುಖ್ಯೋಪಾಧ್ಯಾಯಿನಿ ಇಂದಿರಾ, ಉಪನ್ಯಾಸಕರು, ಶಿಬಿರದ ನಾಯಕಿ ಸಹನಾ, ಶಿಬಿರಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಉಪನ್ಯಾಸಕಿ ಶುಭಗೀತಾ ಸ್ವಾಗತಿಸಿದರು. ಪ್ರಕಾಶ್ ಶೆಟ್ಟಿ ನಿರೂಪಿಸಿದರು. ಉಪನ್ಯಾಸಕಿ ಭವ್ಯಾ ವಂದಿಸಿದರು.