ಸಾರಾಂಶ
ಸಭಾಂಗಣದಲ್ಲಿ ಮಕ್ಕಳ ದಿನಾಚರಣೆ ಹಾಗೂ ಕಲಾ ಮತ್ತು ವಿಜ್ಞಾನ ವಸ್ತು ಪ್ರದರ್ಶನ ನಡೆಯಿತು.
ಕನ್ನಡಪ್ರಭವಾರ್ತೆ ಮೂಲ್ಕಿ
ಯುವ ಜನಾಂಗ ತಮ್ಮಲ್ಲಿರುವ ಸಾಮರ್ಥ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮೂಲ್ಕಿಯ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶರತ್ ಹೇಳಿದರು.ಮೂಲ್ಕಿಯ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಸಂಸ್ಥೆಯ ಲೀಲಾವತಿ ಜಯ ಸುವರ್ಣ ತೆರೆದ ಸಭಾಂಗಣದಲ್ಲಿ ನಡೆದ ಮಕ್ಕಳ ದಿನಾಚರಣೆ ಹಾಗೂ ಕಲಾ ಮತ್ತು ವಿಜ್ಞಾನ ವಸ್ತು ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.
ಸಂಸ್ಥೆಯ ಹಳೆ ವಿದ್ಯಾರ್ಥಿನಿ ಹಾಗೂ ಬಿಸಿನೆಸ್ ಎನಾಲಿಸ್ಟ್ ದಿಶಾ ಚಂದ್ರಶೇಖರ್ ಶುಭಾಶಂಸನೆಗೈದರು. ಬಿರುವೆರ್ ಕುಡ್ಲ ಸಂಸ್ಥೆಯ ಮೂಲ್ಕಿ ಘಟಕದ ಅಧ್ಯಕ್ಷ ಕಿಶೋರ್ ಸಾಲಿಯಾನ್, ಸಂಸ್ಥೆಯ ಸಂಚಾಲಕ ಹರೀಂದ್ರ ಸುವರ್ಣ, ಆಡಳಿತ ಮಂಡಳಿ ಸದಸ್ಯರಾದ ಯೋಗೀಶ್ ಕೋಟ್ಯಾನ್, ಪ್ರಜ್ಞ ಎ ಕೋಟ್ಯಾನ್, ಆಡಳಿತಾಧಿಕಾರಿ ಮಂಜುಳಾ, ಪ್ರಾಂಶುಪಾಲ ಯತೀಶ್ ಅಮೀನ್, ಮುಖ್ಯೋಪಾಧ್ಯಾಯನಿ ಗೀತಾ, ವಿದ್ಯಾರ್ಥಿ ನಾಯಕ ಆರ್ಯನ್ ಪ್ರಣೀತ್ ಹಾಗೂ ಕಾರ್ತಿಕ್ ಉಪಸ್ಥಿತರಿದ್ದರು.9ನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಕೆ ಸ್ವಾಗತಿಸಿದರು, 10ನೇ ತರಗತಿ ವಿದ್ಯಾರ್ಥಿನಿ ಪ್ರಜ್ಞಾ ರೈ ವಂದಿಸಿದರು.10ನೇ ತರಗತಿ ವಿದ್ಯಾರ್ಥಿನಿ ಪ್ರತಿಕ್ಷ ಪೀ ಕಾಂಚನ್ ಕಾರ್ಯಕ್ರಮ ನಿರೂಪಿಸಿದರು.