ಯುವ ಜನತೆ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು: ರೇಷ್ಮಾ ಶೆಟ್ಟಿ

| Published : Sep 17 2025, 01:06 AM IST

ಯುವ ಜನತೆ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು: ರೇಷ್ಮಾ ಶೆಟ್ಟಿ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ಮಕ್ಕಳು ಮತ್ತು ಯುವ ಜನರಲ್ಲಿ ಶಿಸ್ತು ಮತ್ತು ನಾಯಕತ್ವ ಗುಣ ಬೆಳೆಸಲು ವಿದ್ಯಾರ್ಥಿ ಸಂಘಗಳು ಸಹಕಾರಿ ಎಂದು ತಹಸೀಲ್ದಾರ್ ಕೆ.ಎಸ್‌. ರೇಷ್ಮಾ ಶೆಟ್ಟಿ ಹೇಳಿದರು.

ಶ್ರೀಮತಿ ಪರ್ವತವರ್ಧನ ಎಂ.ಎಲ್. ವಾಸುದೇವಮೂರ್ತಿ ಪ್ರೌಢಶಾಲೆಯಲ್ಲಿ ವಿವಿಧ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಮಕ್ಕಳು ಮತ್ತು ಯುವ ಜನರಲ್ಲಿ ಶಿಸ್ತು ಮತ್ತು ನಾಯಕತ್ವ ಗುಣ ಬೆಳೆಸಲು ವಿದ್ಯಾರ್ಥಿ ಸಂಘಗಳು ಸಹಕಾರಿ ಎಂದು ತಹಸೀಲ್ದಾರ್ ಕೆ.ಎಸ್‌. ರೇಷ್ಮಾ ಶೆಟ್ಟಿ ಹೇಳಿದರು.

ನಗರದ ಮಲೆನಾಡು ವಿದ್ಯಾ ಸಂಸ್ಥೆ ಶ್ರೀಮತಿ ಪರ್ವತವರ್ಧನ ಎಂ.ಎಲ್. ವಾಸುದೇವಮೂರ್ತಿ ಪ್ರೌಢಶಾಲೆಯಲ್ಲಿ ವಿವಿಧ ವಿದ್ಯಾರ್ಥಿ ಸಂಘಗಳನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿ ಸಂಘಗಳಲ್ಲಿ ಸಕ್ರಿಯರಾಗುವುದರಿಂದ ಶಿಸ್ತು ಮತ್ತು ನಾಯಕತ್ವ ಗುಣಗಳು ಬೆಳೆಯುತ್ತವೆ. ಆದ್ದರಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದರು.ಬಹಳಷ್ಟು ವರ್ಷಗಳ ಹಿಂದೆ ಸಾಕಷ್ಟು ಜನರಿಗೆ ಶಿಕ್ಷಣ ಮರೀಚಿಕೆಯಾಗಿತ್ತು, ಹತ್ತಾರು ಮೈಲಿ ದೂರ ನಡೆದು ಅವರಿವರ ಮನೆ ಯಲ್ಲಿ ವಾರಾನ್ನಮಾಡಿ ಓದಬೇಕಾಗಿತ್ತು. ಅಂದು ವಿದ್ಯಾಭ್ಯಾಸಕ್ಕೆ ಯಾವುದೇ ಸೌಲಭ್ಯ ಇರಲಿಲ್ಲ. ಆದರೆ, ಇತ್ತೀಚಿನ ವರ್ಷ ಗಳಲ್ಲಿ ಸರ್ಕಾರಗಳು ಮತ್ತು ಸಂಘ ಸಂಸ್ಥೆಗಳು ಎಲ್ಲಾ ರೀತಿ ನೆರವು ಮತ್ತು ಸೌಲಭ್ಯ ಒದಗಿಸುತ್ತಿವೆ. ವಿದ್ಯಾರ್ಥಿಗಳು ಇವು ಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಶ್ರದ್ದೆ ಮತ್ತು ಪರಿಶ್ರಮದಿಂದ ವಿದ್ಯಾರ್ಜನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್.ರುದ್ರಪ್ಪ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಯಶಸ್ವಿಯಾಗಲು ಕಷ್ಟಪಟ್ಟು ಓದುವ ಬದಲು ಇಷ್ಟಪಟ್ಟು ಓದಬೇಕು. ಪ್ರತಿದಿನ ಸೂರ್ಯೋದಯಕ್ಕೆ ಮೊದಲೇ ಏಳಬೇಕು, ತಪ್ಪದೇ ಹೋಂವರ್ಕ್ ಮಾಡಬೇಕು, ಯಾವುದೇ ಕಾರಣಕ್ಕೂ ಶಾಲೆಗೆ ಗೈರಾಗಬಾರದು. ಹೆಚ್ಚಿನ ಅಂಕ ಗಳಿಕೆಗೆ ಆದ್ಯತೆ ನೀಡಬೇಕು ಎಂದು ಸಲಹೆ ಮಾಡಿದರು.ಮಲೆನಾಡು ವಿದ್ಯಾ ಸಂಸ್ಥೆ ಗೌರವ ಕಾರ್ಯದರ್ಶಿ ಡಾ.ಡಿ.ಎಲ್. ವಿಜಯಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪರಿಶ್ರಮದಿಂದ ವಿದ್ಯಾರ್ಜನೆ ಮಾಡಿ ಶಾಲೆಗೆ ಮತ್ತು ಹೆತ್ತವರಿಗೆ ಕೀರ್ತಿ ತರಬೇಕು ಎಂದರು.ಪ್ರಾಸ್ತಾವಿಕವಾಗಿ ಮಾತನಾಡಿದ ಮುಖ್ಯ ಶಿಕ್ಷಕ ಜಿ.ಬಿ. ಸುರೇಶ್, ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ನಾಯಕತ್ವ ಗುಣ ಬೆಳೆಸುವ ನಿಟ್ಟಿನಲ್ಲಿ ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಸ್ಥಾಪಿಸಲಾಗಿದೆ ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆ ಅಧ್ಯಕ್ಷ ಎನ್. ಕೇಶವಮೂರ್ತಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.ವಿದ್ಯಾರ್ಥಿ ಸಂಘಗಳ ನೂತನ ಪದಾಧಿಕಾರಿಗಳಿಗೆ ಸಮಾರಂಭದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕಳೆದ 17 ವರ್ಷಗಳಿಂದ ಸತತ ವಾಗಿ ಕ್ರೀಡಾಕೂಟಗಳಲ್ಲಿ ಚಾಂಪಿಯನ್ನಾಗಿ ಹೊರಹೊಮ್ಮುತ್ತಿರುವ ಮತ್ತು ಎನ್‌ಸಿಸಿಯಲ್ಲಿ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಇದೇ ವೇಳೆ ಆಶಾಕಿರಣ ಅಂಧ ಮಕ್ಕಳ ಶಾಲೆ ಅಧ್ಯಕ್ಷ ಡಾ. ಜೆ.ಪಿ.ಕೃಷ್ಣೇಗೌಡ ಮತ್ತು ಆಶ್ರಯ ಫೌಂಡೇಶನ್‌ನಿಂದ ತಲಾ ಒಂದು ಹಾಗೂ ಲಯನ್ಸ್‌ ಕ್ಲಬ್‌ನಿಂದ ಎರಡು ಕಂಪ್ಯೂಟರ್‌ಗಳನ್ನು ಸಂಸ್ಥೆಗೆ ನೀಡಲಾಯಿತು.ಮಲೆನಾಡು ವಿದ್ಯಾಸಂಸ್ಥೆ ಸಹ ಕಾರ್ಯದರ್ಶಿ ಶಂಕರನಾರಾಯಣ ಭಟ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಜಯಶ್ರೀ ಜೋಷಿ ಮಾತನಾಡಿದರು, ಸಂಸ್ಥೆ ಶೈಕ್ಷಣಿಕ ಸಲಹೆಗಾರ ಕೆ.ಎನ್. ಮಂಜುನಾಥ ಭಟ್, ಕಚೇರಿ ಕಾರ್ಯದರ್ಶಿ ಶ್ರೀ ಲಕ್ಷ್ಮಿ, ಶಿಕ್ಷಕರಾದ

11 ಕೆಸಿಕೆಎಂ 3ಚಿಕ್ಕಮಗಳೂರು ಮಲೆನಾಡು ವಿದ್ಯಾ ಸಂಸ್ಥೆ ಶ್ರೀಮತಿ ಪರ್ವತವರ್ಧನ ಎಂ.ಎಲ್. ವಾಸುದೇವಮೂರ್ತಿ ಪ್ರೌಢಶಾಲೆಯಲ್ಲಿ ವಿವಿಧ ವಿದ್ಯಾರ್ಥಿ ಸಂಘಗಳನ್ನು ತಹಸೀಲ್ದಾರ್ ರೇಷ್ಮಾ ಶೆಟ್ಟಿ ಉದ್ಘಾಟಿಸಿದರು. ಎನ್‌. ಕೇಶವಮೂರ್ತಿ, ರುದ್ರಪ್ಪ, ಮಂಜು ನಾಥ್‌ ಭಟ್‌, ಜಯಶ್ರೀ ಜೋಷಿ ಇದ್ದರು.