ಯುವ ಜನತೆ ಗ್ರಾಮೀಣ ಕ್ರೀಡಾಕೂಟಗಳ ಕಡೆಗೆ ಹೆಚ್ಚಿನ ಗಮನಹರಿಸಬೇಕಾಗಿದೆ ಎಂದು ಮಾಜಿ ಶಾಸಕ ಅರುಣಕುಮಾರ ಪೂಜಾರ ಹೇಳಿದರು.
ರಾಣಿಬೆನ್ನೂರು: ಯುವ ಜನತೆ ಗ್ರಾಮೀಣ ಕ್ರೀಡಾಕೂಟಗಳ ಕಡೆಗೆ ಹೆಚ್ಚಿನ ಗಮನಹರಿಸಬೇಕಾಗಿದೆ ಎಂದು ಮಾಜಿ ಶಾಸಕ ಅರುಣಕುಮಾರ ಪೂಜಾರ ಹೇಳಿದರು.ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ರಾಯಣ್ಣ ಬಾಯ್ಸ್ ಟೀಮ್ ಹಾಗೂ ಹಾವೇರಿ ಜಿಲ್ಲಾ ಅಮೆಚೂರ ಕಬಡ್ಡಿ ಸಂಸ್ಥೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ನಗರ ಪ್ರದೇಶದಲ್ಲಿ ಹಾಗೂ ಗ್ರಾಮೀಣ ಭಾಗದಲ್ಲಿ ಇಂತಹ ಕ್ರೀಡಾಕೂಟಗಳು ಕಡಿಮೆಯಾಗುತ್ತಿವೆ. ಆದ್ದರಿಂದ ಯುವಜನಾಂಗ ಇಂತಹ ಕ್ರೀಡೆಗಳಿಗೆ ಉತ್ತೇಜನ ನೀಡಬೇಕಾಗಿದೆ. ಆಟದಲ್ಲಿ ಸೋಲು ಗೆಲುವು ಸಾಮಾನ್ಯ. ಎರಡನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಭೀಮಪ್ಪ ಕುಡಪಲಿ ಮಾತನಾಡಿ, ಗ್ರಾಮದಲ್ಲಿ ಮೊದಲ ಬಾರಿಗೆ ಕಬಡ್ಡಿ ಪಂದ್ಯಾವಳಿಯನ್ನು ಆಯೋಜನೆ ಮಾಡುವ ಮೂಲಕ ಯುವಕರಿಗೆ ಗ್ರಾಮೀಣ ಕ್ರೀಡೆಗಳ ಮಹತ್ವ ತಿಳಿಸಿರುವುದು ಸಂತಸ ತಂದಿದೆ. ಎಲ್ಲರಿಗೂ ಈಗಿನ ಕಾಲದಲ್ಲಿ ಕ್ರಿಕೆಟ್ ಆಡುವ ಹುಚ್ಚು ಹೆಚ್ಚಾಗಿದೆ ಎಂದರು.ಗ್ರಾಪಂ ಸದಸ್ಯ ಶಿಲ್ಪಾ ಭಟ್ಟಂಗಿ, ಕರಿಯಪ್ಪ ಮಸಲಾಡದ, ಕೊಟ್ರೇಶ ಬಣಕಾರ, ಚಂದ್ರಪ್ಪ ಬಣಕಾರ, ಪರಶುರಾಮ ಭಟ್ಟಂಗಿ, ಚಂದ್ರಪ್ಪ ಭಟ್ಟಂಗಿ, ಚಂದ್ರಶೇಖರ್ ಕುಡಪಲಿ, ಹುಚ್ಚಪ್ಪ ಕುಡಪಲಿ, ಹನುಮಂತ ಹೊಸಳ್ಳಿ, ರಾಯಣ್ಣ ಬಾಯ್ಸ್ ಟಿಮ್ ಹಾಗೂ ಶ್ರೀ ಬೀರಲಿಂಗೇಶ್ವರ ಕಮಿಟಿಯ ಸದಸ್ಯರು ಉಪಸ್ಥಿತರಿದ್ದರು.