ಕನ್ನಡಪ್ರಭ ವಾರ್ತೆ ಹನೂರು
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಡಿದು ಯುವತಿಯೊರ್ವಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.ತಾಲೂಕಿನ ಅಜ್ಜೀಪುರ ಗ್ರಾಮದ ಯುವತಿ ಮಹೇಶ್ವರಿ (17) ಹಾವು ಕಚ್ಚಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.ಘಟನೆ ವಿವರ:
ಶನಿವಾರ ಸಂಜೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಡಿದ ಯುವತಿಯನ್ನು ತಕ್ಷಣ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಭಾನುವಾರ ಚಿಕಿತ್ಸೆ ಪಡೆಯುತ್ತಿದ್ದಾರೆ ಕುಟುಂಬದವರು ಬಡ ಕೂಲಿಕಾರ್ಮಿಕರ ಕುಟುಂಬದವರಾಗಿದ್ದಾರೆ ಎನ್ನಲಾಗಿದೆ.ಜೀವನ ನಿರ್ವಹಣೆಗೆ ಜಮೀನಿನಲ್ಲಿ ಕೆಲಸಕ್ಕೆ ತೆರಳಿದ್ದ ವೇಳೆಯಲ್ಲಿ ನಾಗರಹಾವು ಕಚ್ಚಿ ಚಿಕಿತ್ಸಾ ನೀಡಲು ಆಸ್ಪತ್ರೆಗೆ ದಾಖಲಾಗಿರುವುದರಿಂದ ಕಡು ಬಡವರಾಗಿರುವ ನಮಗೆ ಆಸ್ಪತ್ರೆ ವೆಚ್ಚ ಭರಿಸಲು ಕಷ್ಟಕರವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯವರು ಸೂಕ್ತ ಪರಿಹಾರ ನೀಡಬೇಕು ಎಂದು ಆಸ್ಪತ್ರೆಗೆ ದಾಖಲಾಗಿರುವ ಮಹೇಶ್ವರಿ ತಂದೆ ಶಂಕರ್ ಒತ್ತಾಯಿಸಿದ್ದಾರೆ.ಸೂಕ್ತ ಪರಿಹಾರಕ್ಕೆ ಅಗ್ರಹ:
ಯುವತಿಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಮುಖಂಡ ಅಮ್ಜದ್ ಖಾನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿ ಸಂಬಂಧಪಟ್ಟ ಇಲಾಖೆ ಬಡ ಕುಟುಂಬ ಕೂಲಿ ಕಾರ್ಮಿಕರಾಗಿರುವುದರಿಂದ ಆಸ್ಪತ್ರೆ ವೆಚ್ಚವನ್ನು ಬರಿಸಲು ಕೂಡಲೇ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ----------28ಸಿಎಚ್ಎನ್11ಹನೂರು ತಾಲೂಕಿನ ಅಜ್ಜೀಪುರ ಗ್ರಾಮದ ಯುವತಿ ಮಹೇಶ್ವರಿ ಹಾವು ಕಚ್ಚಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು.
-----------
