ಸಾರಾಂಶ
ಚನ್ನಪಟ್ಟಣ: ಕಾಂಗ್ರೆಸ್ ತತ್ವ ಸಿದ್ಧಾಂತ ಮೆಚ್ಚಿ ಬಿಜೆಪಿಯ ೬ ನಗರಸಭೆ ಸದಸ್ಯರು ಹಾಗೂ ವಿವಿಧ ಮೋರ್ಚಾ ಪದಾಧಿಕಾರಿಗಳು ಈಗ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನು ಅನೇಕರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಬಿಜೆಪಿ ತೊರೆದು ಪಕ್ಷಕ್ಕೆ ಸೇರ್ಪಡೆಯಾದ ನಗರಸಭೆ ಸದಸ್ಯರು ಹಾಗೂ ವಿವಿಧ ಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಪಕ್ಷಕ್ಕೆ ಬರಮಾಡಿಕೊಂಡು ಅವರು ಮಾತನಾಡಿದರು.ಕಳೆದ ಮೂರು ನಾಲ್ಕು ತಿಂಗಳಿನಿಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ನಡೆಸಿದೆ. ಕಾಂಗ್ರೆಸ್ ನಾಯಕತ್ವ ಹಾಗೂ ತತ್ವ ಸಿದ್ಧಾಂತಗಳನ್ನು ನಂಬಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಕ್ಕೆ ಸೇರುತ್ತಿದ್ದಾರೆ. ಪಕ್ಷಕ್ಕೆ ಬರುವವರನ್ನು ಮನಃಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದು ಹೇಳಿದರು.
ಈ ಹಿಂದೆ ೧೩ ಜೆಡಿಎಸ್ ನಗರಸಭೆ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದು. ಇದೀಗ ಬಿಜೆಪಿಯ ೬ ನಗರಸಭೆ ಸೇರ್ಪಡೆಗೊಂಡಿದ್ದು, ನಗರಸಭೆಯಲ್ಲಿ ಕಾಂಗ್ರೆಸ್ ಬಲ ೨೭ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ನೀವೆಲ್ಲ ಒಂದಾಗಿ ನಿಮ್ಮ ವಾರ್ಡ್‌ಗಳಲ್ಲಿ ಪ್ರಚಾರ ನಡೆಸಿ ಪಕ್ಷದ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಕಷ್ಟದ ದಿನಗಳು ಮುಗಿದವು:ಇನ್ನು ಚುನಾವಣೆಗೆ ೧೩ ದಿನ ಮಾತ್ರ ಉಳಿದಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಲ್ಲಿರುವ ಹಳಬರು ಹಾಗೂ ಹೊಸಬರು ಎಲ್ಲರೂ ಒಗ್ಗೂಡಿ ಪ್ರಚಾರ ನಡೆಸಬೇಕು. ಎಲ್ಲರೂ ಸೇರಿ ಚನ್ನಪಟ್ಟಣವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯೋಣ. ನಿಮ್ಮ ಕಷ್ಟದ ದಿನಗಳು ಮುಗಿಯಿತು ಎಂದರು.
ಬಿಎಂಐಸಿಎಪಿಎ ಅಧ್ಯಕ್ಷ ರಘನಂದನ್ ರಾಮಣ್ಣ ಮಾತನಾಡಿ, ನಾನು ಎಲ್ಲಿಗೂ ಹೋಗಿರಲಿಲ್ಲ ಒಂದು ನಾಲ್ಕು ದಿನ ವಿರಾಮ ತೆಗೆದುಕೊಂಡಿದ್ದೆ, ಇದೀಗ ನಿಮ್ಮ ಜತೆ ಪ್ರಚಾರ ನಡೆಸಲು ಬಂದಿದ್ದೇನೆ. ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಈ ಹಿಂದೆ ಐದು ಬಾರಿ ಕ್ಷೇತ್ರದ ಶಾಸಕರಾಗಿದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಕೈಗೊಂಡಿರುವ ಅಭಿವೃದ್ಧಿಯನ್ನು ಕಂಡು ಅದರಲ್ಲಿ ಭಾಗಿಯಾಗಲು ಬಂದಿದ್ದಾರೆ. ಎಲ್ಲರೂ ಸೇರಿ ಅವರನ್ನು ಗೆಲ್ಲಿಸೋಣ. ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ. ನಗರಸಭೆ ಸದಸ್ಯರ ಸೇರ್ಪಡೆಯಿಂದ ಹಿಂದೆಂದು ಇರದಷ್ಟು ಬಲ ನಗರಸಭೆಯಲ್ಲಿ ನಮಗೆ ಬಂದಿದೆ. ಎಲ್ಲರೂ ಸೇರಿ ಪ್ರತಿಬೂತ್ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆ ಕೆಲಸ ಮಾಡೋಣ, ನಿಮ್ಮ ಜತೆ ನಾನಿರುತ್ತೇನೆ ಎಂದರು.ಈ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ನಗರಸಭೆ ಸದಸ್ಯರು ಹಾಗೂ ಬಿಜೆಪಿ ವಿವಿಧ ಮೋರ್ಚಾ ಪದಾಧಿಗಳಿಗೆ ಪಕ್ಷದ ಶಾಲು ಹಾಕಿದ ಡಿ.ಕೆ.ಸುರೇಶ್ ಅವರನ್ನುಪಕ್ಷಕ್ಕೆ ಸ್ವಾಗತಿಸಿದರು.
ಕಾಂಗ್ರೆಸ್ ಮುಖಂಡರಾದ ಹನುಮಂತರಾಯಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಮೋದ್, ಸುನೀಲ್ ಇತರರು ಹಾಜರಿದ್ದರು.ಪೊಟೋ೨೯ಸಿಪಿಟಿ೧:
ಚನ್ನಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡು ಬಿಜೆಪಿ ನಗರಸಭೆ ಸದಸ್ಯರನ್ನು ಡಿ.ಕೆ.ಸುರೇಶ್ ಬರಮಾಡಿಕೊಂಡರು.ಬಾಕ್ಸ್............
ರಘುನಂದನ್ ರಾಮಣ್ಣ ಮುನಿಸು ಶಮನಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಕೈತಪ್ಪಿದ್ದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಬಿಎಂಐಸಿಎಪಿಎ ಅಧ್ಯಕ್ಷ ರಘುನಂದನ್ ರಾಮಣ್ಣ ಮತ್ತು ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ನಡುವೆ ಸಂಧಾನ ನಡೆಸುವಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಡಿ.ಕೆ.ಸುರೇಶ್ ಸಮ್ಮುಖದಲ್ಲಿ ಮಂಗಳವಾರ ಇಬ್ಬರು ಮುಖಂಡರ ಜತೆ ಮಾತುಕತೆ ನಡೆಸಿದ ಡಿ.ಕೆ.ಶಿವಕುಮಾರ್, ಇವರಿಬ್ಬರಲ್ಲಿ ಇದ್ದ ಭಿನ್ನಾಭಿಪ್ರಾಯ ದೂರ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.ಕಳೆದ ಲೋಕಸಭಾ ಚುನಾವಣೆ ವೇಳೆ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಚುನಾವಣೆ ಉಸ್ತುವಾರಿ ವಹಿಸಿಕೊಂಡಿದ್ದ ರಘುನಂದನ್ ರಾಮಣ್ಣ ಅವರು ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿದ್ದರು. ಚನ್ನಪಟ್ಟಣ ನಗರಸಭೆಯ ೧೩ ಮಂದಿ ಜೆಡಿಎಸ್ ಸದಸ್ಯರು ಹಾಗೂ ಇಬ್ಬರು ಬಿಜೆಪಿ ಸದಸ್ಯರನ್ನು ಕಾಂಗ್ರೆಸ್‌ಗೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದಲ್ಲದೆ ತಾಲೂಕಾದ್ಯಂತ ನೂರಾರು ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ೧೫ ಸಾವಿರವಿದ್ದ ಕಾಂಗ್ರೆಸ್ ಮತ ಗಳಿಕೆ ಪ್ರಮಾಣ ಲೋಕಸಭೆ ಚುನಾವಣೆ ವೇಳೆಗೆ ೮೭ ಸಾವಿರಕ್ಕೆ ಏರಿಕೆಯಾಗಿತ್ತು.
ಆದರೆ, ಯೋಗೇಶ್ವರ್‌ಗೆ ಕಾಂಗ್ರೆಸ್ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಅವರು, ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದರು. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದ್ದ ಯೋಗೇಶ್ವರ್ ಸ್ವಾಗತ ಕಾರ್ಯಕ್ರಮ ಹಾಗೂ ನಾಮಪತ್ರ ಸಲ್ಲಿಕೆ ವೇಳೆ ಗೈರುಹಾಜರಾಗಿದ್ದರು.ಇದೀಗ ಅವರ ಅಸಮಾಧಾವನ್ನು ಶಮನ ಮಾಡುವಲ್ಲಿ ಡಿ.ಕೆ.ಸಹೋದರರು ಯಶಸ್ವಿಯಾಗಿದ್ದು, ಮಂಗಳವಾರದಿಂದ ರಘುನಂದನ್ ರಾಮಣ್ಣ ಸಿಪಿವೈ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಪೊಟೋ೨೯ಸಿಪಿಟಿ೨:ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಡಿ.ಕೆ.ಶಿವಕುಮಾರ್, ಯೋಗೇಶ್ವರ್ ಹಾಗೂ ರಘುನಂದನ್ ರಾಮಣ್ಣ ನಡುವೆ ಸಂಧಾನ ನಡೆಸಿ ಭಿನ್ನಾಭಿಪ್ರಾಯ ಶಮನಗೊಳಿಸಿದರು.