ಚನ್ನಪಟ್ಟಣದಲ್ಲಿ ಯುವ ಕಾಂಗ್ರೆಸ್ ಬೈಕ್ ರ್‍ಯಾಲಿ

| Published : Mar 08 2024, 01:51 AM IST

ಸಾರಾಂಶ

ಚನ್ನಪಟ್ಟಣ: ವಿಧಾನಸಭೆ ಚುನಾವಣೆಗೂ ಪೂರ್ವದಲ್ಲಿ ನೀಡಿದ್ದ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತಾಲೂಕು ಯುವ ಘಟಕದಿಂದ ತಾಲೂಕಿನ ದೊಡ್ಡಮಳೂರಿನ ಶ್ರೀ ಅಪ್ರಮೇಯಸ್ವಾಮಿ ದೇವಸ್ಥಾನದಿಂದ ನಗರದ ಶೇರ್ವಾ ಹೋಟೆಲ್‌ವರೆಗೆ ಬೈಕ್ ರ್‍ಯಾಲಿ ನಡೆಸಿದರು.

ಚನ್ನಪಟ್ಟಣ: ವಿಧಾನಸಭೆ ಚುನಾವಣೆಗೂ ಪೂರ್ವದಲ್ಲಿ ನೀಡಿದ್ದ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತಾಲೂಕು ಯುವ ಘಟಕದಿಂದ ತಾಲೂಕಿನ ದೊಡ್ಡಮಳೂರಿನ ಶ್ರೀ ಅಪ್ರಮೇಯಸ್ವಾಮಿ ದೇವಸ್ಥಾನದಿಂದ ನಗರದ ಶೇರ್ವಾ ಹೋಟೆಲ್‌ವರೆಗೆ ಬೈಕ್ ರ್‍ಯಾಲಿ ನಡೆಸಿದರು.

ನಗರ ಹಾಗೂ ಗ್ರಾಮೀಣ ಪ್ರದೇಶದ ಸಾವಿರಾರು ಕಾರ್ಯಕರ್ತರು ರಸ್ತೆಯುದ್ದಕ್ಕೂ ಕಾಂಗ್ರೆಸ್ ಪರ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪರ ಘೋಷಣೆ ಕೂಗಿದರು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಜನರಿಗೆ ಅರಿವು ಮೂಡಿಸಿದರು.

ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಂಜುನಾಥ್, ಚುನಾವಣೆಗೂ ಮುನ್ನ ನೀಡಿದ್ದ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸುವ ಮೂಲಕ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ದೇಶದ ಯಾವುದೇ ರಾಜ್ಯದಲ್ಲೂ ನೀಡದಂತಹ ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಪಕ್ಷ ಎಂದಿಗೂ ದೀನದಲಿತರು, ಬಡವರ ಪರ ಎಂಬುದನ್ನು ನಿರೂಪಿಸಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ೨೦ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ಪಪಡಿಸಿದರು.

ಕೆಪಿಸಿಸಿ ಐಟಿ ಸೆಲ್ ಅಧ್ಯಕ್ಷ ಹಾಗೂ ಬಿಎಂಆರ್‌ಸಿಎಪಿಎ ಅಧ್ಯಕ್ಷ ರಘುನಂದನ್ ರಾಮಣ್ಣ ಮಾತನಾಡಿ, ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಜನಮನದಲ್ಲಿ ನೆಲೆಸಿದ್ದು, ಸರ್ಕಾರದ ಜನಪ್ರಿಯತೆ ಹೆಚ್ಚಿಸಿದೆ. ಇದು ಈ ಯೋಜನೆಗಳ ಯಶಸ್ಸು ವಿರೋಧಿಗಳ ನಿದ್ದೆಗೆಡಿಸಿದೆ. ಗ್ಯಾರಂಟಿ ಯೋಜನೆಗಳು ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸಿರುವ ವಿರೋಧ ಪಕ್ಷಗಳಿಗೆ ಲೋಕಸಭೆ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಪಕ್ಷದ ಸಂಘಟನೆಯನ್ನು ಚುರುಕುಗೊಳಿಸಬೇಕಿದೆ. ಕಾಂಗ್ರೆಸ್ ಯುವ ಘಟಕ ಕಾರ್ಯಕರ್ತರು ವಿರಮಿಸದೇ ಪಕ್ಷ ಸಂಘಟನೆಯ ಕೆಲಸ ಮಾಡಿ, ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸಂಸದ ಡಿ.ಕೆ.ಸುರೇಶ್ ಅವರನ್ನು ಮತ್ತೊಮ್ಮೆ ಗೆಲ್ಲಿಸುವಂತೆ ಮನವಿ ಮಾಡಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಆರ್. ಪ್ರಮೋದ್, ಮುಖಂಡರಾದ ಎಂ.ಸಿ.ಕರಿಯಪ್ಪ, ಮಲವೇಗೌಡ, ಬೋರ್‌ವೆಲ್ ರಂಗನಾಥ್, ಚಂದ್ರಸಾಗರ್, ರಾಜ್ಯ ಯುವ ಘಟಕದ ಪಿಹಳ್ಳಿದೊಡ್ಡಿ ಮಲ್ಲೇಶ್, ತಾಲೂಕು ಯುವ ಘಟಕದ ಶಿವಕುಮಾರ್, ಶರತ್‌ ಇತರರಿದ್ದರು.

ಪೋಟೊ೭ಸಿಪಿಟಿ೧: ಚನ್ನಪಟ್ಟಣ ತಾಲೂಕು ಕಾಂಗ್ರೆಸ್ ಯುವ ಘಟಕದ ಕಾರ್ಯಕರ್ತರು ಬೈಕ್ ರ್‍ಯಾಲಿ ನಡೆಸಿದರು.