ಸಾರಾಂಶ
ಪ್ರತಿಯೊಬ್ಬರಲ್ಲೂ ನಾಯಕತ್ವದ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ಯೂತ್ ಕಾಂಗ್ರೆಸ್ ಶ್ರಮಿಸುತ್ತಾ ಬಂದಿದೆ.
ಕಂಪ್ಲಿ: ಯೂತ್ ಕಾಂಗ್ರೆಸ್ ಘಟಕವು ದೇಶದ ಪರ ನಿಲ್ಲುವಂತಹ ಯುವಕರ ಪಡೆಯಾಗಿದೆ ಎಂದು ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಸಿದ್ದು ಹಳ್ಳೇಗೌಡ ತಿಳಿಸಿದರು.
ಪಟ್ಟಣದ ಹೊಸಪೇಟೆ ರಸ್ತೆಯಲ್ಲಿರುವ ಶಾದಿಮಹಲ್ ನಲ್ಲಿ ಬುಧವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಪ್ರತಿಯೊಬ್ಬರಲ್ಲೂ ನಾಯಕತ್ವದ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ಯೂತ್ ಕಾಂಗ್ರೆಸ್ ಶ್ರಮಿಸುತ್ತಾ ಬಂದಿದೆ. ಒಬ್ಬ ಸಾಮಾನ್ಯ ಕಾರ್ಯಕರ್ತ ಅಧ್ಯಕ್ಷನಾಗಲು ಅವಕಾಶ ಕಲ್ಪಿಸುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಗಳಿಗೆ ಚುನಾವಣೆಯ ವ್ಯವಸ್ಥೆ ತಂದಿದ್ದಾರೆ. ಇದರಿಂದ ಪಕ್ಷ ಸಂಘಟನೆಗೆ ಶ್ರಮಿಸಿದ ನಿಜವಾದ ಕಾರ್ಯಕರ್ತರನ್ನು ಗುರುತಿಸುವ ಕೆಲಸವಾಗುತ್ತಿದೆ ಎಂದರು.ಇನ್ನು ಯೂತ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಮತ್ತೆ ಸ್ಪರ್ಧಿಸಿದ್ದೇನೆ. ಕಂಪ್ಲಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸ್ಥಾನಕ್ಕೆ ರಿಯಾಜ್, ಬ್ಲಾಕ್ ಕಾಂಗ್ರೆಸ್ ನ ಕಂಪ್ಲಿ ತಾಲೂಕು ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ಗುರು ಸ್ಪರ್ಧಿಸಿದ್ದಾರೆ. ಪ್ರತಿಯೊಬ್ಬರು ಮತ ನೀಡುವ ಮೂಲಕ ಪಕ್ಷ ಸಂಘಟನೆಗೆ ಶ್ರಮಿಸಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿಕೊಂಡರು.
ಬಳಿಕ ಯೂತ್ ಕಾಂಗ್ರೆಸ್ ನ ಕಂಪ್ಲಿ ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ರಿಯಾಜ್ ಮಾತನಾಡಿ, ಒಬ್ಬ ಮತದಾರರು ಬ್ಲಾಕ್ ಕಾಂಗ್ರೆಸ್ ನ ಯುವ ಘಟಕದ ಅಧ್ಯಕ್ಷ ಸ್ಥಾನ, ಯೂತ್ ಕಾಂಗ್ರೆಸ್ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸ್ಥಾನ, ಜಿಲ್ಲಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ರಾಜ್ಯ ಅಧ್ಯಕ್ಷ, ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನ ಸೇರಿ ಒಟ್ಟಾರೆ 6 ಮತಗಳನ್ನು ಚಲಾಯಿಸಬಹುದಾಗಿದೆ. ಇನ್ನು ಆ.16ರಿಂದ ಚುನಾವಣೆ ಆರಂಭಗೊಳ್ಳಲಿದೆ. ನಮ್ಮ ತಂಡಕ್ಕೆ ಬೆಂಬಲಿಸಿ ಮತ ನೀಡಬೇಕು ಎಂದು ಮನವಿ ಮಾಡಿಕೊಂಡರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಬಳ್ಳಾರಿ ಜಿಲ್ಲಾಧ್ಯಕ್ಷ ಅಬೀಬ್ ರೆಹಮಾನ್, ಯೂತ್ ಕಾಂಗ್ರೆಸ್ ಹೊಸಪೇಟೆ ಅಧ್ಯಕ್ಷ ಗಣೇಶ್, ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಭ್ಯರ್ಥಿ ಗುರು, ಮುಖಂಡರಾದ ನಾಗೇಶ್ ಪಾಟೀಲ್, ಖಾಜಾ, ಹುಸೇನ್, ಯೂಸುಫ್, ನಾಸಿರ್, ರಾಜ, ಮಹ್ಮದ್, ನಾಗರಾಜ್, ಜುಬೇರ್, ಈರಣ್ಣ, ಮಿಥುನ್, ರಜಾಕ್, ವೀರೇಶ್ ಇದ್ದರು.