ನೆಹರು ನಗರ ನಿವಾಸಿ ಹರೀಶ್ ಬೋವಿ(೩೫) ಮೃತ ಯುವಕ. ಬೆಳಗ್ಗೆ ರಸ್ತೆ ಮೂಲಕ ತೆರಳುತ್ತಿದ್ದ ವೇಳೆ ಆಯ ತಪ್ಪಿ ಚರಂಡಿಗೆ ಬಿದ್ದಿದ್ದಾರೆ ಎನ್ನಲಾಗಿದೆ. ಚರಂಡಿಯಲ್ಲಿದ್ದ ನೀರಿನಲ್ಲಿ ಮುಳುಗಿ ಉಸಿರುಗಟ್ಟಿದ ಪರಿಣಾಮ ಅವರು ಮೃತಪಟ್ಟಿದ್ದಾರೆ.

ಮುಂಡಗೋಡ: ಪಟ್ಟಣ ಪಂಚಾಯಿತಿ ನಿರ್ಲಕ್ಷ್ಯದಿಂದಾಗಿ ಪಟ್ಟಣದ ಗಾಂಧಿನಗರ ಬಡಾವಣೆಯ ಮಳೆ ಬಸವೇಶ್ವರ ದೇವಸ್ಥಾನದ ಬಳಿ ಚರಂಡಿಗೆ ಬಿದ್ದು ಯುವಕನೊಬ್ಬ ಮೃತಪಟ್ಟಿರುವ ದುರಂತ ಘಟನೆ ಸೋಮವಾರ ನಡೆದಿದೆ. ನೀರು ತುಂಬಿದ ಚರಂಡಿಯಲ್ಲಿ ಬಿದ್ದು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಪಟ್ಟಣದ ನೆಹರು ನಗರ ನಿವಾಸಿ ಹರೀಶ್ ಬೋವಿ(೩೫) ಮೃತ ಯುವಕ. ಬೆಳಗ್ಗೆ ರಸ್ತೆ ಮೂಲಕ ತೆರಳುತ್ತಿದ್ದ ವೇಳೆ ಆಯ ತಪ್ಪಿ ಚರಂಡಿಗೆ ಬಿದ್ದಿದ್ದಾರೆ ಎನ್ನಲಾಗಿದೆ. ಚರಂಡಿಯಲ್ಲಿದ್ದ ನೀರಿನಲ್ಲಿ ಮುಳುಗಿ ಉಸಿರುಗಟ್ಟಿದ ಪರಿಣಾಮ ಅವರು ಮೃತಪಟ್ಟಿದ್ದಾರೆ.

ಯುವಕ ಚರಂಡಿಗೆ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಹಾಗೂ ಸುತ್ತಮುತ್ತಲಿನ ಸಾರ್ವಜನಿಕರು ತಕ್ಷಣ ಸ್ಥಳಕ್ಕೆ ಧಾವಿಸಿ ಅವರನ್ನು ಮೇಲಕ್ಕೆತ್ತಲು ಮುಂದಾಗಿದ್ದಾರೆ. ಆದರೆ, ಸಾರ್ವಜನಿಕರು ಅವರನ್ನು ಮೇಲಕ್ಕೆತ್ತುವಷ್ಟರಲ್ಲಿ ಹರೀಶ್ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು. ಘಟನೆಯಿಂದ ಸ್ಥಳೀಯರು ಆಘಾತಕ್ಕೊಳಗಾಗಿದ್ದಾರೆ. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಾರ್ವಜನಿಕರ ಆಕ್ರೋಶ: ಚರಂಡಿಗಳ ಸುತ್ತಮುತ್ತ ಸುರಕ್ಷತಾ ವ್ಯವಸ್ಥೆ ಇಲ್ಲದಿದ್ದರೆ ಇಂತಹ ದುರ್ಘಟನೆಗಳು ಸಂಭವಿಸುವ ಅಪಾಯವಿದೆ. ಅಧಿಕಾರಿಗಳು ಎಚ್ಚೆತ್ತು ಅಗತ್ಯ ಕ್ರಮ ಕೈಗೊಳ್ಳಬೇಕಿತ್ತು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಕೆಟ್ ಕೌಂಟರ್ ಬಳಿ ಗಲಾಟೆ: ಮೂವರ ವಿರುದ್ಧ ಕೇಸ್

ಹೊನ್ನಾವರ: ಪ್ರವಾಸೋದ್ಯಮ ಇಲಾಖೆಯ ಟಿಕೆಟ್ ಕೌಂಟರ್ ಬಳಿ ಭಾನುವಾರ ಸಂಜೆ ಗಲಾಟೆ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ಮೂವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಟ್ಟಣದ ಪೊಲೀಸ್ ಠಾಣೆ ಎದುರಿನ ರಾಷ್ಟ್ರೀಯ ಹೆದ್ದಾರಿಯಿಂದ ಕೆಳಗಿನಪಾಳ್ಯ ರಸ್ತೆಯ ತಿರುವಿನಲ್ಲಿರುವ ಪ್ರವಾಸೋದ್ಯಮ ಇಲಾಖೆಯ ಟಿಕೆಟ್ ಕೌಂಟರ್ ಹತ್ತಿರ ಭಾನುವಾರ ಸಂಜೆ ಕೆಲವರು ಬಂದು ಗಲಾಟೆ ಮಾಡಿದ ಘಟನೆ ನಡೆದಿತ್ತು.ಗಲಾಟೆ ಮಾಡಿ ಕೂಗಾಡಿರುವ ವಿಡಿಯೋ ಜಾಲತಾಣದಲ್ಲಿ ಹರಿದಾಡಿತ್ತು. ಗಲಾಟೆ ಮಾಡಿ ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮಣಿಕಂಠ ಮೇಸ್ತ, ಆದರ್ಶ ಮೇಸ್ತ, ಪ್ರಶಾಂತ ಮೇಸ್ತ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.