ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ರಾಮನಗರದ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಬಿ.ಜಿ. ಉತ್ತಪ್ಪ ಅವರ ನೇತೃತ್ವದಲ್ಲಿ ಅಗ್ನಿಶಾಮಕ ಸಿಬ್ಬಂದಿ ಮೂರ್ತಿ ಎಂ., ಅಮೃತೇಶು, ಸಿದ್ದಣ್ಣ ಮಗದೂಮ್ ಹಾಗೂ ಮಹೇಶ್ ಪೂಜಾರಿ ಅವರ ತಂಡ ಭೇಟಿ ನೀಡಿ ಕಾರ್ಯಾಚರಣೆ ನಡೆಸಿ ಯುವಕನ ಮೃತದೇಹವನ್ನು ತೆಗೆಯುವಲ್ಲಿ ಯಶಸ್ವಿಯಾಗಿದ್ದು, ಮೃತದೇಹವನ್ನು ಶವಪರೀಕ್ಷೆಗಾಗಿ ಬೆಂಗಳೂರಿನ ಆರ್.ಆರ್. ಆಸ್ಪತ್ರೆಗೆ ರವಾನಿಸಲಾಗಿದೆ.
ಮಾಗಡಿ: ತಾಲೂಕಿನ ಮಂಚನಬೆಲೆ ಜಲಾಶಯಕ್ಕೆ ಈಜಲು ಹೋಗಿದ್ದ ಒರಿಸ್ಸಾ ಮೂಲದ ಯುವಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಒರಿಸ್ಸಾ ಮೂಲದ ರಾಕೇಶ್ (27) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ವೈಟ್‌ಫೀಲ್ಡ್ ಬಳಿಯ ಕಂಪನಿಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಭಾನುವಾರ ರಾಕೇಶ್ ತನ್ನ 12 ಜನರ ಸ್ನೇಹಿತರ ಗುಂಪಿನೊಂದಿಗೆ ಮಂಚನಬೆಲೆ ಜಲಾಶಯಕ್ಕೆ ಪ್ರವಾಸಕ್ಕೆ ಬಂದಿದ್ದ. ಈ ವೇಳೆ ಜಲಾಶಯದಲ್ಲಿ ಈಜಲು ನೀರಿಗೆ ಇಳಿದಾಗ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾನೆ. ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ರಾಮನಗರದ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಬಿ.ಜಿ. ಉತ್ತಪ್ಪ ಅವರ ನೇತೃತ್ವದಲ್ಲಿ ಅಗ್ನಿಶಾಮಕ ಸಿಬ್ಬಂದಿ ಮೂರ್ತಿ ಎಂ., ಅಮೃತೇಶು, ಸಿದ್ದಣ್ಣ ಮಗದೂಮ್ ಹಾಗೂ ಮಹೇಶ್ ಪೂಜಾರಿ ಅವರ ತಂಡ ಭೇಟಿ ನೀಡಿ ಕಾರ್ಯಾಚರಣೆ ನಡೆಸಿ ಯುವಕನ ಮೃತದೇಹವನ್ನು ತೆಗೆಯುವಲ್ಲಿ ಯಶಸ್ವಿಯಾಗಿದ್ದು, ಮೃತದೇಹವನ್ನು ಶವಪರೀಕ್ಷೆಗಾಗಿ ಬೆಂಗಳೂರಿನ ಆರ್.ಆರ್. ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.