ಸಾರಾಂಶ
ಕನ್ನಡಪ್ರಭ ವಾರ್ತೆ ಹಲಗೂರು
ಯುವ ಜನಾಂಗ ಹೆಚ್ಚು ರಕ್ತದಾನ ಮಾಡುವ ಮೂಲಕ ಅಮೂಲ್ಯ ಜೀವ ಉಳಿಸಲು ಮುಂದಾಗಬೇಕು ಎಂದು ಮಾಜಿ ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು.ಚನ್ನಪಟ್ಟಣ ರಸ್ತೆಯ ಹಲಗೂರು ವಿದ್ಯಾ ಸಂಸ್ಥೆಯಲ್ಲಿ ಜ.5ರಂದು ಹಮ್ಮಿಕೊಂಡಿರುವ ರಕ್ತದಾನ ಶಿಬಿರದ ಬಗ್ಗೆ ಮಾತನಾಡಿ, ಜನರ ಆರೋಗ್ಯದ ದೃಷ್ಟಿಯಿಂದ ಬೃಹತ್ ಆರೋಗ್ಯ ಉಚಿತ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ. ಹೋಬಳಿಯ ಜನತೆ ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಹಲಗೂರು ಹಾಗೂ ಸುತ್ತಮುತ್ತಲಿನ ಯುವಕರು ನೀಡುವ ಒಂದೊಂದು ಹನಿ ರಕ್ತವು ಅಮೂಲ್ಯವಾದದ್ದು. ನೀವು ನೀಡುವ ಒಂದು ಬಾಟಲ್ ರಕ್ತ ಒಂದು ಜೀವ ಉಳಿಸುತ್ತದೆ. ಆದ್ದರಿಂದ ತಾವೆಲ್ಲರೂ ಶಿಬಿರದಲ್ಲಿ ಭಾಗವಹಿಸಿ ಶಿಬಿರಕ್ಕೆ ಸಹಕಾರ ನೀಡಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.ಪಟ್ಟಣ ಪ್ರದೇಶಗಳಿಗೆ ಹೋಗಿ ಹೆಚ್ಚು ಹಣ ವೆಚ್ಚ ಮಾಡುವ ಬದಲು ಇಂತಹ ಆರೋಗ್ಯ ಉಚಿತ ಶಿಬಿರದಲ್ಲಿ ಭಾಗವಹಿಸಿ ನುರಿತ ವೈದಾಧಿಕಾರಿಗಳು ನೀಡುವ ಸಲಹೆಗಳ ಪಾಲಿಸಿ ತಪಾಸಣೆ ಮಾಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳುವಂತೆ ಕಿವಿಮಾತು ಹೇಳಿದರು.
ಜ.5ರಂದು ರಕ್ತದಾನ ಶಿಬಿರ, ಆರೋಗ್ಯ ತಪಾಸಣೆಗೆ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ. ಸುತ್ತಮುತ್ತಲಿನ ಸಾರ್ವಜನಿಕರು ಹಾಗೂ ಹೆಚ್ಚಿನ ಯುವಕರು ಶಿಬಿರದಲ್ಲಿ ಭಾಗವಹಿಸುವಂತೆ ಕೋರಿದರು.ಈ ವೇಳೆ ಎಚ್.ಎಂ.ಆನಂದ್ ಕುಮಾರ್, ತಮ್ಮಣ್ಣೇಗೌಡ, ಎ.ಟಿ.ಶ್ರೀನಿವಾಸ್, ಎನ್.ಯೋಗೇಶ್, ಜಗದೀಶ ಜಿ.ಕೆ.ನಾಗೇಶ್, ಸದಾಶಿವ, ಸುರೇಶ, ಶ್ರೀನಿವಾಸಚಾರಿ ಸೇರಿದಂತೆ ಇತರರು ಇದ್ದರು.
ಜ.7ರಿಂದ 28 ರವರೆಗೆ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರಮಂಡ್ಯ: ಜಿಲ್ಲಾ ಪಂಚಾಯ್ತಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜ.7 ರಿಂದ 28 ರವರೆಗೆ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ. ಜ.7ರಂದು ಶಿವಳ್ಳಿ ಸರ್ಕಾರಿ ಆರೋಗ್ಯ ಕೇಂದ್ರ, ಜ.8 ರಂದು ಕೀಲಾರ ಸರ್ಕಾರಿ ಆರೋಗ್ಯ ಕೇಂದ್ರ, ಜ.10 ರಂದು ಕೆ. ಎಂ ದೊಡ್ಡಿ ಸರ್ಕಾರಿ ಆರೋಗ್ಯ ಕೇಂದ್ರ, ಜ.15 ರಂದು ಬಿಂಡಿಗನವಿಲೆ ಸರ್ಕಾರಿ ಆರೋಗ್ಯ ಕೇಂದ್ರ ಹಾಗೂ ಮಧ್ಯಾಹ್ನ 1 ಗಂಟೆಗೆ ನಾಗಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ, ಜ.16 ರಂದು ಕಿರುಗಾವಲು ಸರ್ಕಾರಿ ಆರೋಗ್ಯ ಕೇಂದ್ರ, ಜ.17 ರಂದು ಮದ್ದೂರು ತಾಲೂಕು ಆಸ್ಪತ್ರೆ, ಜ.22 ರಂದು ಪಾಂಡವಪುರ ಉಪ ವಿಭಾಗ ಸರ್ಕಾರಿ ಆರೋಗ್ಯ ಕೇಂದ್ರ, ಜ.23 ರಂದು ಬಸರಾಳು ಪ್ರಾಥಮಿಕ ಆರೋಗ್ಯ ಕೇಂದ್ರ, ಜ.24 ರಂದು ಅರಕೆರೆ ಸರ್ಕಾರಿ ಆರೋಗ್ಯ ಕೇಂದ್ರ, ಜ.28 ರಂದು ಕೆ.ಆರ್.ಪೇಟೆ ತಾಲೂಕು ಆಸ್ಪತ್ರೆಗಳಲ್ಲಿ ಬೆಳಗ್ಗೆ 10 ಗಂಟೆಗೆ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.