ಸಾರಾಂಶ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಹೆಚ್ಐವಿ / ಏಡ್ಸ್ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದಲ್ಲಿ ಅಂತಾರಾಷ್ಟ್ರೀಯ ಯುವ ದಿನಾಚರಣೆಯ ಪ್ರಯುಕ್ತ ‘ಯುವಜನೋತ್ಸವ’ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಮ್ಯಾರಥಾನ್ ಸ್ಪರ್ಧೆಯನ್ನು ನೆಹರು ಕ್ರೀಡಾಂಗಣ ಹಮ್ಮಿಕೊಳ್ಳಲಾಗಿತ್ತು.ಶಿವಮೊಗ್ಗ ಜಿಲ್ಲೆಯ ರೆಡ್ ರಿಬ್ಬನ್ ಕ್ಲಬ್ (ಆರ್.ಆರ್.ಸಿ.) ಹೊಂದಿರುವ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪೋಲಿಸ್ ಇಲಾಖೆ, ವಾರ್ತಾ ಮತ್ತು ಪ್ರಚಾರ ಇಲಾಖೆ ಇವರ ಸಹಯೋಗದೊಂದಿಗೆ ಮ್ಯಾರಥಾನ್ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು, ಹೆಚ್.ಐ.ವಿ./ಏಡ್ಸ್ ಬಗ್ಗೆ ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ, ತಾರತಮ್ಯವನ್ನುತಡೆಗಟ್ಟುವುದು, ಹೆಚ್.ಐ.ವಿ./ಏಡ್ಸ್ ತಡೆ ಕಾಯ್ದೆ 2017, ನ್ಯಾಕೋ ಏಡ್ಸ್ ಆ್ಯಪ್, ಉಚಿತ ರಾಷ್ಟ್ರೀಯ ಸಹಾಯವಾಣಿ 1097, ಎಸ್.ಟಿ.ಐ. ಇತ್ಯಾದಿ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಈ ಮ್ಯಾರಾಥಾನ್ ಹಿಂದಿನ ಉದ್ದೇಶವಾಗಿತ್ತು.
ಮ್ಯಾರಥಾನ್ ಸ್ಪರ್ಧೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕೆ.ಎಸ್.ಡಾ.ನಟರಾಜ್ ಹಸಿರು ಬಾವುಟ ತೋರಿಸುವ ಮೂಲಕ ಸ್ಪರ್ಧೆಗೆ ಚಾಲನೆಯನ್ನು ನೀಡಿದರು.ಕಾರ್ಯಕ್ರಮದಲ್ಲಿ ಡಾ.ದಿನೇಶ್ ಜಿ.ಸಿ. ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ಕಾರ್ಯಕ್ರಮಾಧಿಕಾರಿಗಳು, ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್, ನೆಹರು ಯುವಕ ಕೇಂದ್ರದ ಸಂಯೋಜಕರಾದ ಉಲ್ಲಾಸ್ ಜಿ, ಡ್ಯಾಪ್ಕೂ ಜಿಲ್ಲಾ ಐಸಿಟಿಸಿ ಮೇಲ್ವಿಚಾರಕರಾದ ಎನ್.ಎಂ.ಮಂಗಳಾ ಮತ್ತಿತರರಿದ್ದರು.