ಸಾರಾಂಶ
ಚಿಕ್ಕಮಗಳೂರು, ರಾಜ್ಯದ ಬಡ ವರ್ಗದ ಜನರಿಗೆ ಹಾಗೂ ನಿರುದ್ಯೋಗ ಯುವ ಸಮೂಹದ ಕಲ್ಯಾಣಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳು ಅನುಷ್ಟಾನಗೊಳಿಸುವ ಮೂಲಕ ರಾಜ್ಯ ಸರ್ಕಾರ ಜನತೆಗೆ ಆರ್ಥಿಕ ಶಕ್ತಿ ತುಂಬಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
- ನಗರದ ಮಲೆನಾಡು ವಿದ್ಯಾಸಂಸ್ಥೆಯಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ಧ ಯುವ ನಿಧಿ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುರಾಜ್ಯದ ಬಡ ವರ್ಗದ ಜನರಿಗೆ ಹಾಗೂ ನಿರುದ್ಯೋಗ ಯುವ ಸಮೂಹದ ಕಲ್ಯಾಣಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳು ಅನುಷ್ಟಾನಗೊಳಿಸುವ ಮೂಲಕ ರಾಜ್ಯ ಸರ್ಕಾರ ಜನತೆಗೆ ಆರ್ಥಿಕ ಶಕ್ತಿ ತುಂಬಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.ನಗರದ ಮಲೆನಾಡು ವಿದ್ಯಾಸಂಸ್ಥೆಯಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ಧ ಯುವ ನಿಧಿ ಕಾರ್ಯಕ್ರಮದಲ್ಲಿ ಯುವನಿಧಿ ಕೈಪಿಡಿ ಬಿಡುಗಡೆಗೊಳಿಸಿ ಮಾತನಾಡಿದರು. ಪ್ರಸ್ತುತ ಜಿಲ್ಲೆಯಲ್ಲಿ ಯುವ ನಿಧಿ ಯೋಜನೆಯಡಿ ಒಟ್ಟು 14 ಸಾವಿರ ಯುವಕ ಯುವತಿಯರು ಅರ್ಜಿ ಸಲ್ಲಿಸಿ ಸರ್ಕಾರದ ಸೌಲಭ್ಯ ಪಡೆದುಕೊಳ್ಳುತ್ತಿದ್ದು ಚಿಕ್ಕಮಗಳೂರು ತಾಲೂಕಿನಲ್ಲಿ 3400ಕ್ಕೂ ಹೆಚ್ಚು ಪದವಿ ಹಾಗೂ ಡಿಪ್ಲೋಮಾ ಪದವಿಧರರು ಉದ್ಯೋಗದ ಸಂದರ್ಶನಕ್ಕಾಗಿ ಯುವನಿಧಿ ಬಳಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ದೇಶದ ಭವಿಷ್ಯದ ಪ್ರಜೆಗಳಾದ ಯುವಕರು ಉದ್ಯೋಗದ ಜೊತೆಗೆ ಜೀವನದಲ್ಲಿ ರಾಷ್ಟ್ರ ಪ್ರೇಮ ಬೆಳೆಸಿಕೊಳ್ಳಬೇಕು. ಭವಿಷ್ಯದಲ್ಲೇ ಎಲ್ಲೇ ಉದ್ಯೋಗಕ್ಕೆ ತೆರಳಿದರೂ ದೇಶ ಹಾಗೂ ತಾಯ್ನಾಡನ್ನು ಮರೆಯಬಾರದು. ಇದೀಗ ಕೆಲವೇ ವರ್ಷಗಳಲ್ಲಿ ಪದವಿಧರರಾಗುವ ಕಾಲೇಜಿನ ವಿದ್ಯಾರ್ಥಿಗಳು ಸರ್ಕಾರದ ಸವಲತ್ತು ಪಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.ಜಿಲ್ಲಾ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ, ಪದವಿಧರ ವಿದ್ಯಾರ್ಥಿ ಗಳಿಗೆ 3000 ಹಾಗೂ ಡಿಪ್ಲೋಮಾ ವಿದ್ಯಾರ್ಥಿಗಳಿಗೆ 1500 ರಂತೆ ಎರಡು ವರ್ಷಗಳ ಕಾಲಗಳ ವರೆಗೆ ಸರ್ಕಾರ ಮಾಸಾಶನ ನೀಡುತ್ತಿದ್ದು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.ತಾಲೂಕು ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಮಲ್ಲೇಶ್‌ಸ್ವಾಮಿ ಮಾತನಾಡಿ, ನಿರುದ್ಯೋಗದಿಂದ ಯುವ ಜನಾಂಗ ಬಳಲ ಬಾರದೆಂಬ ದೃಷ್ಟಿಯಿಂದ ರಾಜ್ಯ ಸರ್ಕಾರ ಉದ್ಯೋಗ ಲಭಿಸುವವರೆಗೂ ಆರ್ಥಿಕ ಸಹಾಯಧನ ಕಲ್ಪಿಸಿದ್ದು ತಾಲೂಕಿನಲ್ಲಿ ಒಟ್ಟು 3400 ಕ್ಕೂ ಹೆಚ್ಚು ಯುವ ಜನಾಂಗ ಯೋಜನೆ ಉಪಯೋಗ ಪಡೆದುಕೊಂಡಿದ್ದಾರೆ ಎಂದರು.ಮಲೆನಾಡು ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಡಾ. ಡಿ.ಎಲ್. ವಿಜಯಕುಮಾರ್ ಮಾತನಾಡಿ, ಜಿಲ್ಲೆ, ರಾಜ್ಯ ಅಥವಾ ಹೊರ ರಾಜ್ಯಗಳಲ್ಲಿ ಉದ್ಯೋಗ ಅರಸಿ ತೆರಳುವ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಖರ್ಚು ವೆಚ್ಚಗಳಿಗೆ ಯುವ ನಿಧಿ ಸೂಕ್ತವಾಗಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಯೋಜನೆ ಶಕ್ತಿ ಪಡೆದು ಪಾಲಕರ ಉದ್ಯೋಗದ ಕನಸನ್ನು ಈಡೇರಿಸಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಮಲೆನಾಡು ವಿದ್ಯಾಸಂಸ್ಥೆ ಕಾಲೇಜಿನ ಪ್ರಾಂಶುಪಾಲ ಹಸೀನಾ ಬಾನು, ಶೈಕ್ಷಣಿಕ ಸಲಹೆಗಾರ ಮಂಜುನಾಥ್ ಭಟ್, ಉದ್ಯೋಗ ಕಚೇರಿ ಅಧಿಕಾರಿ ಮಂಜುನಾಥ್ ಉಪಸ್ಥಿತರಿದ್ದರು.6 ಕೆಸಿಕೆಎಂ 3ಚಿಕ್ಕಮಗಳೂರಿನ ಮಲೆನಾಡು ವಿದ್ಯಾಸಂಸ್ಥೆಯಲ್ಲಿ ಶನಿವಾರ ಶಾಸಕ ಎಚ್.ಡಿ. ತಮ್ಮಯ್ಯ ಯುವ ನಿಧಿ ಕೈಪಿಡಿ ಬಿಡುಗಡೆಗೊಳಿಸಿದರು. ಎಂ.ಸಿ. ಶಿವಾನಂದಸ್ವಾಮಿ, ಡಾ.ಡಿ.ಎಲ್. ವಿಜಯಕುಮಾರ್, ಮಲ್ಲೇಶ್‌ಸ್ವಾಮಿ, ಮಂಜುನಾಥ್ ಭಟ್ ಇದ್ದರು.