ಸಾರಾಂಶ
2023 24 ನೇ ಸಾಲಿನ ಅಭ್ಯರ್ಥಿಗಳಿಗೆ ಯುವನಿಧಿ ಯೋಜನೆ ಕುರಿತು ವ್ಯಾಪಕ ಪ್ರಚಾರದ ಜೊತೆಗೆ ವಿವಿ ಮತ್ತು ಪ್ರತಿ ಕಾಲೇಜಿನಲ್ಲಿಯೂ ಯುವನಿಧಿ ಯೋಜನೆಗೆ ಸಂಬಂಧಿಸಿ ದಂತೆ ಸಹಾಯವಾಣಿ ಕೇಂದ್ರ ಸ್ಥಾಪನೆ ಹಾಗೂ ಯೋಜನೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು.
ಕನ್ನಡಪ್ರಭ ವಾರ್ತೆ ಮಂಡ್ಯ
2023-24 ನೇ ಸಾಲಿನಲ್ಲಿ ತೇರ್ಗಡೆಯಾದ ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೊಮಾ ವಿದ್ಯಾರ್ಥಿಗಳ ಮಾಹಿತಿಯನ್ನು ನ್ಯಾಡ್ ಪೋರ್ಟಲ್‌ಗೆ ಅಪ್ ಲೋಡ್ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಜಿಲ್ಲೆಯ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರಿಗೆ ತಿಳಿಸಿದರು.ನಗರದ ಜಿಪಂ ಕಾವೇರಿ ಸಭಾಂಗಣದಲ್ಲಿ ಯುವನಿಧಿ ನೋಂದಣಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಸಭೆ ನಡೆಸಿ ಪದವಿಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಉದ್ಯೋಗ ವಿನಿಮಯ ಕೇಂದ್ರಗಳ ಅಧಿಕಾರಿಗಳು ಯುವನಿಧಿ ಲಾಗಿನ್‌ನಲ್ಲಿ ಬಾಕಿ ಇರುವ ವಿದ್ಯಾರ್ಥಿಗಳ ಅರ್ಜಿ ವಿಲೇ ಮಾಡುವಂತೆ ಸೂಚಿಸಲಾಯಿತು.
2023 24 ನೇ ಸಾಲಿನ ಅಭ್ಯರ್ಥಿಗಳಿಗೆ ಯುವನಿಧಿ ಯೋಜನೆ ಕುರಿತು ವ್ಯಾಪಕ ಪ್ರಚಾರದ ಜೊತೆಗೆ ವಿವಿ ಮತ್ತು ಪ್ರತಿ ಕಾಲೇಜಿನಲ್ಲಿಯೂ ಯುವನಿಧಿ ಯೋಜನೆಗೆ ಸಂಬಂಧಿಸಿ ದಂತೆ ಸಹಾಯವಾಣಿ ಕೇಂದ್ರ ಸ್ಥಾಪನೆ ಹಾಗೂ ಯೋಜನೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದರು.ಯುವನಿಧಿ ಯೋಜನೆ ಅಡಿಯಲ್ಲಿ ಅಭ್ಯರ್ಥಿಗಳು ನೊಂದಾಯಿಸಿಕೊಳ್ಳಲು ತಾಲೂಕು ಮಟ್ಟ ಹಾಗೂ ಕಾಲೇಜುಗಳಲ್ಲಿ ವಿಶೇಷ ನೋಂದಣಿ ಅಭಿಯಾನ ಪ್ರಾರಂಭಿಸಿವುದು ಮತ್ತು ವಿದ್ಯಾರ್ಥಿಗಳಿಗೆ ಕಾಲೇಜುಗಳ ಪ್ರಾಂಶುಪಾಲರು ಯುವನಿಧಿ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು ಎಂದರು.
ಜಿಲ್ಲೆಯ ಎಲ್ಲಾ ತಾಲೂಕುಗಳ ತಹಸೀಲ್ದಾರರು ಮತ್ತು ಇಒಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಪಂಗಳಿಗೆ ಯುವನಿಧಿ ಯೋಜನೆಗೆ ಅರ್ಹರಿರುವ ಅಭ್ಯರ್ಥಿಗಳು ನೋಂದಣಿ ಮಾಡಿಸಿಕೊಳ್ಳುವಂತೆ ವ್ಯಾಪಕ ಪ್ರಚಾರ ನಡೆಸಿ ಎಂದರು.ಸಭೆಯಲ್ಲಿ ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ನಾಗರಾಜ್, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ನಾಗನಂದ್ ಉಪಸ್ಥಿತರಿದ್ದರು.