ಯುವನಿಧಿ ಯೋಜನೆಯಿಂದ ಯುವಜನರಲ್ಲಿ ಆತ್ಮವಿಶ್ವಾಸ ಹೆಚ್ಚಳ: ಅಶೋಕ್ ಕುಮಾರ್ ಕೊಡವೂರು

| Published : Jul 29 2025, 01:50 AM IST

ಯುವನಿಧಿ ಯೋಜನೆಯಿಂದ ಯುವಜನರಲ್ಲಿ ಆತ್ಮವಿಶ್ವಾಸ ಹೆಚ್ಚಳ: ಅಶೋಕ್ ಕುಮಾರ್ ಕೊಡವೂರು
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉಡುಪಿ ವತಿಯಿಂದ ಯುವನಿಧಿ ಪ್ರಚಾರ ಮತ್ತು ನೋಂದಣಿ ಅಭಿಯಾನ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ನಿರುದ್ಯೋಗಿ ಯುವಜನರಿಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಯು ಅವರಲ್ಲಿ ಆತ್ಮವಿಶ್ವಾಸ, ಸ್ವಾಭಿಮಾನ ಹೆಚ್ಚಿಸಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು.ಅವರು ಸೋಮವಾರ ನಗರದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉಡುಪಿ ವತಿಯಿಂದ ನಡೆದ ಯುವನಿಧಿ ಪ್ರಚಾರ ಮತ್ತು ನೋಂದಣಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.ಯುವಜನತೆ ದೇಶದ ಆಸ್ತಿ. ದೇಶವನ್ನು ಕಟ್ಟಿ ಬೆಳೆಸುವಲ್ಲಿ ಯುವಜನರು ಮಹತ್ವದ ಪಾತ್ರ ವಹಿಸುತ್ತಾರೆ. ಪದವೀಧರರು ಹಾಗೂ ಡಿಪ್ಲೋಮಾ ಹೊಂದಿರುವವರು ಉದ್ಯೋಗ ಕಂಡುಕೊಳ್ಳಲು ಎದುರಾಗುವ ಖರ್ಚು ವೆಚ್ಚಗಳಿಗೆ ಪೋಷಕರನ್ನು ಅವಲಂಭಿಸುವುದನ್ನು ತಪ್ಪಿಸಲು ಸರ್ಕಾರ ಯುವನಿಧಿ ಯೋಜನೆ ಜಾರಿಗೆ ತಂದಿದೆ ಎಂದರು.ಸಂಸ್ಥೆಯ ಪ್ರಾಂಶುಪಾಲೆ ಉಮಾ ಬಿ. ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಅರ್ಹ ಪ್ರತಿಯೊಬ್ಬ ವಿದ್ಯಾರ್ಥಿಗಳೂ ಈ ಯೋಜನೆಯಡಿ ನೋಂದಾಯಿಸಿ, ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಜೊತೆಗೆ ಮಾಹಿತಿಯನ್ನು ಇತರರಿಗೂ ಹಂಚಬೇಕು ಎಂದು ಹೇಳಿದರು.ಜಿಲ್ಲಾ ಉದ್ಯೋಗಾಧಿಕಾರಿ ಖಲಂದರ್ ಖಾನ್, ಯುವನಿಧಿ ಯೋಜನೆಯಲ್ಲಿ ನೋಂದಾಯಿಸುವ ಬಗ್ಗೆ, ಉದ್ಯೋಗಕ್ಕೆ ತಕ್ಕಂತೆ ಕೌಶಲ್ಯಾಭಿವೃದ್ಧಿ ಹೆಚ್ಚಿಸಲು ಇರುವ ಯುವನಿಧಿ ಪ್ಲಸ್ ಬಗ್ಗೆ, ಉದ್ಯೋಗ ವಿನಿಮಯ ಕಚೇರಿಯಿಂದ ಆಯೋಜಿಸಲಾಗುವ ಉದ್ಯೋಗಾವಕಾಶಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಮಾಜಿ ಟ್ರಸ್ಟಿ ಮೋಹನ್ ಚಂದ್ರ ನಂಬಿಯಾರ್, ಸಂಸ್ಥೆಯ ಉಪನ್ಯಾಸಕರು, ಉದ್ಯೋಗ ವಿನಿಮಯ ಕಚೇರಿಯ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಉಪನ್ಯಾಸಕ ಕಿಶೋರ್ ಕುಮಾರ್ ಸ್ವಾಗತಿಸಿ, ಉದ್ಯೋಗ ವಿನಿಮಯ ಕೇಂದ್ರದ ದೀಕ್ಷಿತ್ ನಿರೂಪಿಸಿದರು.