ವಿದ್ಯಾರ್ಥಿಗಳ ಅಗತ್ಯಗಳಿಗೆ ಯುವನಿಧಿ ಪೂರಕ: ಬಸವರಾಜು

| Published : Aug 07 2025, 12:46 AM IST

ವಿದ್ಯಾರ್ಥಿಗಳ ಅಗತ್ಯಗಳಿಗೆ ಯುವನಿಧಿ ಪೂರಕ: ಬಸವರಾಜು
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಸ್ತುತ ಹಲವಾರು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳಲು, ಪುಸ್ತಕ ಖರೀದಿಸಲು, ಅರ್ಜಿ ಸಲ್ಲಿಸಲು ಹಣಕಾಸಿನ ಅವಶ್ಯಕತೆ ತುಂಬಾ ಮುಖ್ಯವಾಗಿದೆ. ಇಂಥ ಸಂದರ್ಭದಲ್ಲಿ ಯುವನಿಧಿ ಜಾರಿ ಪೂರಕವಾಗಿದೆ ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ. ಬಸವರಾಜು ಹೇಳಿದ್ದಾರೆ.

ದಾವಣಗೆರೆ: ಪ್ರಸ್ತುತ ಹಲವಾರು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳಲು, ಪುಸ್ತಕ ಖರೀದಿಸಲು, ಅರ್ಜಿ ಸಲ್ಲಿಸಲು ಹಣಕಾಸಿನ ಅವಶ್ಯಕತೆ ತುಂಬಾ ಮುಖ್ಯವಾಗಿದೆ. ಇಂಥ ಸಂದರ್ಭದಲ್ಲಿ ಯುವನಿಧಿ ಜಾರಿ ಪೂರಕವಾಗಿದೆ ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ. ಬಸವರಾಜು ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಮತ್ತು ತಾಲೂಕುಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಆಶ್ರಯದಲ್ಲಿ ನಡೆದ ಯುವನಿಧಿ ಯೋಜನೆಯ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಡಿಪ್ಲೊಮಾ, ಪದವಿ ಪೂರೈಸಿಕೊಂಡು ಉದ್ಯೋಗ ಸಿಗಲಾರದೇ ಸಂದರ್ಶನಗಳಿಗೆ ಹಾಜರಾಗಲು ಹಣಕಾಸಿನ ತೊಂದರೆಗಳ ಕುರಿತಂತೆ ಸರ್ಕಾರ ಗಮನಿಸಿದೆ. ಅಂತಹ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಯುವನಿಧಿ ಯೋಜನೆ ಜಾರಿಗೆ ತಂದಿದೆ. 2024-25ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೊಮಾ ಅರ್ಹತೆ ಹೊಂದಿದವರು ಯುವನಿಧಿ ಯೋಜನೆಯ ನಿರುದ್ಯೋಗಿ ಭತ್ಯೆ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆ ಎಲ್ಲರೂ ಸಮರ್ಪಕವಾಗಿ ಬಳಸಿ ಸಾರ್ಥಕ ಬದುಕು ರೂಪಿಸಿಕೊಳ್ಳಿ ಎಂದು ತಿಳಿಸಿದರು.

ಜಿಲ್ಲಾ ಉದ್ಯೋಗಾಧಿಕಾರಿ ಡಿ.ರವೀಂದ್ರ, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ನಂಜನಾಯ್ಕ, ತಾಲೂಕುಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಬಿ.ಉಮೇಶ್, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಟಿ.ಕರಿಬಸಪ್ಪ, ಜಿಲ್ಲಾ ಮತ್ತು ತಾಲೂಕುಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಶಿವಶಂಕರ ಕೈದಾಳೆ, ಎಸ್.ಎಸ್. ಗಿರೀಶ್, ಸಿ.ವಿ. ಚಂದ್ರಶೇಖರ, ಲಿಯಾಕತ್, ಅಂಜಿನಪ್ಪ ಬಿ.ಎಚ್., ಮನೋಜ್ ಎಸ್., ಮಲ್ಲಿಕಾರ್ಜುನ ಎಸ್. ಉಪಸ್ಥಿತರಿದ್ದರು.

- - -

-6ಕೆಡಿವಿಜಿ32.ಜೆಪಿಜಿ:

ದಾವಣಗೆರೆಯಲ್ಲಿ ನಡೆದ ಯುವನಿಧಿ ಯೋಜನೆ ಅರಿವು ಕಾರ್ಯಕ್ರಮವನ್ನು ಶಾಮನೂರು ಟಿ. ಬಸವರಾಜು ಉದ್ಘಾಟಿಸಿದರು.