ಸುತ್ತಲಿನ ವಾತಾವರಣದಲ್ಲಿರುವ ವಾಸ್ತವತೆಯನ್ನು ವಿಮರ್ಶಿಸುವಂತಹ ಕುತೂಹಲ ಬೆಳೆಸಿಕೊಳ್ಳಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಹೇಳಿದರು.

ಶಿವಮೊಗ್ಗ: ಸುತ್ತಲಿನ ವಾತಾವರಣದಲ್ಲಿರುವ ವಾಸ್ತವತೆಯನ್ನು ವಿಮರ್ಶಿಸುವಂತಹ ಕುತೂಹಲ ಬೆಳೆಸಿಕೊಳ್ಳಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಹೇಳಿದರು.

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗುರುವಾರ ಎಂಬಿಎ ವಿಭಾಗದ ವತಿಯಿಂದ ಏರ್ಪಡಿಸಿದ್ದ ಸಾಂಸ್ಕೃತಿಕ ಮತ್ತು ನಿರ್ವಹಣಾ ಕ್ಷೇತ್ರದ ''ಉತ್ಥಾನ-2026'' ದಶಮಾನೋತ್ಸವ ಸಂಭ್ರಮ ಉದ್ಘಾಟಿಸಿ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ವಿಷಯಗಳ ಬಗ್ಗೆ ಕುತೂಹಲ ಮೂಡಿಸಿಕೊಳ್ಳುವಂತಹ ಅನಿವಾರ್ಯತೆ ಇದೆ.‌ ಯುವ ಸಮೂಹ ಮುಂದಿನ ಜನಾಂಗದ ರಾಯಭಾರಿಗಳು. ನಮ್ಮ ಹಿರಿಯರು ಕಟ್ಟಿ ಬೆಳೆಸಿದ ಸಂಸ್ಕೃತಿ ಸಂಸ್ಕಾರವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಜವಾಬ್ದಾರಿ ಇಂದಿನ ಯುವ ಸಮೂಹದ ಮೇಲಿದೆ ಎಂದರು.

ನಾವು ಮರೆತಿದ್ದ ಸೌದೆ ಒಲೆಗಳು ಮತ್ತೆ ಮುನ್ನಲೆಗೆ ಬಂದಿದೆ. ಹಾಗಾಗಿಯೇ ಯಾವ ವಿಚಾರಗಳ ಬಗ್ಗೆಯು ತಾತ್ಸಾರ ಬೇಡ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಎನ್ಇಎಸ್ ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಎಚ್.ಸಿ.ಶಿವಕುಮಾರ್, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ.ಶ್ರೀಕಾಂತ್, ಕಾರ್ಯಕ್ರಮ ಸಂಯೋಜಕರಾದ ಡಾ.ಸಂತೋಷ್‌ ಶಾನಭಾಗ್‌, ಡಾ.ಪ್ರವೀಣ್‌ ಕುಮಾರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬ್ಯುಸಿನೆಸ್ ಪ್ಲಾನ್, ಬೆಸ್ಟ್ ಮ್ಯಾನೇಜರ್, ಬ್ಯುಸಿನೆಸ್ ಕ್ವಿಜ್, ಸ್ಟಾಕ್ ಮಾರ್ಕೆಟ್, ಚಿತ್ರಕಲೆ, ಸಮೂಹ ನೃತ್ಯ, ಬೆಂಕಿ ರಹಿತ ಅಡುಗೆ, ಪ್ರೇಮಗೀತೆಗಳ ಗಾಯನ, ವಾಲಿಬಾಲ್, ಥ್ರೋಬಾಲ್, ಚೆಸ್, ಇ-ಸ್ಪೋರ್ಟ್ಸ್ ಸೇರಿದಂತೆ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ 15 ಪದವಿ ಕಾಲೇಜುಗಳ ಸುಮಾರು 750ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸುಕದಿ ಭಾಗವಹಿಸಿದ್ದರು. ಉಪನ್ಯಾಸಕರಾದ ಡಾ.ಸುಭದ್ರ.ಪಿ.ಎಸ್ ಪ್ರಾರ್ಥಿಸಿ, ಡಾ.ವಿ.ವಿಕ್ರಮ್ ಸ್ವಾಗತಿಸಿದರು.