ಸಾರಾಂಶ
ಮಡಿಕೇರಿ : ಸಮಾಜದ ಪ್ರಮುಖ ಶಕ್ತಿಯಾಗಿರುವ ಯುವ ಸಮೂಹವೇ ದೇಶದ ಶಕ್ತಿ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ಶಾಸಕರಾದ ಎ.ಎಸ್.ಪೊನ್ನಣ್ಣ ಅಭಿಪ್ರಾಯ ಪಟ್ಟಿದ್ದಾರೆ.
ಮಡಿಕೇರಿಯ ಸುದರ್ಶನ್ ವೃತ್ತದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಆಯೋಜನೆಗೊಂಡಿದ್ದ ಯುವ ಕಾಂಗ್ರೆಸ್ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಇಂದಿನಿಂದಲೂ ಯುವ ಕಾಂಗ್ರೆಸ್ ಕೊಡುಗೆ ಬಹು ದೊಡ್ಡದಾಗಿದೆ. ಯುವಕರಿಗೆ ರಾಜಕೀಯ ಅನುಭವ ಹಾಗೂ ಸಂಘಟನೆ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಈ ನಿಟ್ಟಿನಲ್ಲಿ ಬಲಾಢ್ಯರಾಗಲು ಯುವ ಕಾಂಗ್ರೆಸ್ ಒಂದು ಮಹತ್ವದ ಘಟಕವಾಗಿದೆ. ಇಂದಿನ ಯುವ ಕಾಂಗ್ರೆಸ್ ಪದಾಧಿಕಾರಿಗಳು ಇದರ ಸದುಪಯೋಗವನ್ನು ಪಡೆಸಿಕೊಂಡು ತಮ್ಮ ರಾಜಕೀಯ ಭವಿಷ್ಯ ರೂಪಿಸುವುದರೊಂದಿಗೆ ಜನರ ಸೇವೆ ಮಾಡುವುದರಲ್ಲಿ ನಿರತರಾಗಬೇಕೆಂದು ಕರೆ ನೀಡಿದರು.
ರಾಜಕೀಯದ ಪ್ರತಿಯೊಂದು ಹಂತದಲ್ಲೂ ಸವಾಲುಗಳು ಎದುರಾಗುತ್ತದೆ. ಅದರಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಅವರಿಗೆ ಸವಾಲುಗಳನ್ನು ಎದುರಿಸಲು ಇಂತಹ ಸನ್ನಿವೇಶ ಉಪಯೋಗವಾಗಲಿದೆ. ಯುವಕರಲ್ಲಿರುವ ಆ ಶಕ್ತಿಯನ್ನು ಸಮಾಜದ ಒಳಿತಿಗೆ ಸದುಪಯೋಗಪಡಿಸುವುದರೊಂದಿಗೆ ಎಲ್ಲರು ತಮ್ಮ ರಾಜಕೀಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಇದೇ ಸಂದರ್ಭದಲ್ಲಿ ಕಿವಿಮಾತು ಹೇಳಿದರು.ಸಭೆಯಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಮಂಜುನಾಥ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಹಿಮಾಚಲ ಪ್ರದೇಶ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷರು ಹಾಗೂ ಕರ್ನಾಟಕ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ, ರಾಜ್ಯ ಯುವ ಕಾಂಗ್ರೆಸ್ ಮಾಧ್ಯಮ ಅಧ್ಯಕ್ಷ ದೀಪಕ್, ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮಂಜುನಾಥ್, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೈಸಿ ಕತ್ತಣಿರ ಮತ್ತು ಕೊಡಗು ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.