ಸಾರಾಂಶ
ನೆಲಮಂಗಲ: ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಮಹನೀಯರ ಆದರ್ಶಗಳನ್ನು ಇಂದಿನ ಯುವಕರು ಪಾಲಿಸಿ, ನವ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಬೇಕು ಎಂದು ನೆಲಮಂಗಲ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಂ.ನಾರಾಯಣಗೌಡ ತಿಳಿಸಿದರು.
ನೆಲಮಂಗಲ: ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಮಹನೀಯರ ಆದರ್ಶಗಳನ್ನು ಇಂದಿನ ಯುವಕರು ಪಾಲಿಸಿ, ನವ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಬೇಕು ಎಂದು ನೆಲಮಂಗಲ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಂ.ನಾರಾಯಣಗೌಡ ತಿಳಿಸಿದರು.
ನೆಲಮಂಗಲ ಯೋಜನಾ ಪ್ರಾಧಿಕಾರದ ಆವರಣದಲ್ಲಿ 76ನೇ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿ, ದೇಶದ ಅಭಿವೃದ್ಧಿಗೆ ದೇಶಪ್ರೇಮ ಮುಖ್ಯ. ಸ್ವಾತಂತ್ರ ಪೂರ್ವದಲ್ಲಿದ್ದ ಹೋರಾಟದ ಕಿಚ್ಚು, ದೇಶಪ್ರೇಮ ಇಂದಿನ ಪೀಳಿಗೆಯಲ್ಲಿ ಕಾಣುತ್ತಿಲ್ಲ. ಯುವಶಕ್ತಿ ರಾಷ್ಟ್ರಾಭಿವೃದ್ಧಿಗೆ ಕೈ ಜೋಡಿಸಬೇಕು. ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರ ವಿರುದ್ಧ ಹೋರಾಡಿ, ಅವರ ದಾಸ್ಯ ಸಂಕೋಲೆಯಿಂದ ಬಿಡುಗಡೆ ಮಾಡಿದ್ದಾರೆ. ಅವರ ಶ್ರಮಕ್ಕೆ ತಕ್ಕ ಫಲ ನೀಡುವ ಜವಾಬ್ದಾರಿ ಯುವ ಜನಾಂಗದ ಮೇಲಿದೆ ಎಂದರು.ಸದಸ್ಯ ಕಾರ್ಯದರ್ಶಿ ಪಂಡ್ರಿನಾಥ ಜಿ. ರೆಡ್ಡಿ ಮಾತನಾಡಿ, ಸಮೃದ್ಧಿ ನಾಡು ಕಟ್ಟುವಲ್ಲಿ ಪ್ರತಿಯೊಬ್ಬರ ಕೊಡುಗೆಯು ಅವಶ್ಯ. ರಾಷ್ಟ್ರಭಕ್ತಿಯನ್ನು ಪ್ರತಿಯೊಬ್ಬರು ರಕ್ತಗತವಾಗಿಸಿಕೊಳ್ಳಬೇಕು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರಯೋಧರ ಸಾಹಸಗಳನ್ನು ಸ್ಮರಿಸುತ್ತ ಹಿರಿಯರ ಮಾರ್ಗದರ್ಶನ ಮತ್ತು ಅಧಿಕಾರಿಗಳ ಸಹಕಾರದಿಂದ ಮಾದರಿಯಾಗಿ ಭರವಸೆ ನೀಡಿದರು.
ಈ ವೇಳೆ ಸದಸ್ಯ ರಂಗಸ್ವಾಮಿ, ಕೆ.ಎಂ.ಶಿವಕುಮಾರ್, ಸಹಾಯಕ ನಿರ್ದೇಶಕ ಎನ್.ಶಿವನಂಜಪ್ಪ ಅಭಿಯಂತರರಾದ ಪ್ರಜ್ವಲ್, ಚೇತನ್ ಹಾಗೂ ಸಿಬ್ಬಂದಿ ಹಾಜರಿದ್ದರು.