ಮಿಲಾಗ್ರಿಸ್ ಕಾಲೇಜಿನಲ್ಲಿ ಯುವಜನತೆಯ ಮಾನಸಿಕ ಆರೋಗ್ಯ ಕಾರ್ಯಾಗಾರ

| Published : Sep 23 2024, 01:29 AM IST

ಮಿಲಾಗ್ರಿಸ್ ಕಾಲೇಜಿನಲ್ಲಿ ಯುವಜನತೆಯ ಮಾನಸಿಕ ಆರೋಗ್ಯ ಕಾರ್ಯಾಗಾರ
Share this Article
  • FB
  • TW
  • Linkdin
  • Email

ಸಾರಾಂಶ

ಮಿಲಾಗ್ರಿಸ್‌ ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ಮತ್ತು ಯುವ ಜನತೆಯಲ್ಲಿ ಮಾನಸಿಕ ಪರಿಣಾಮಗಳು’ ಎಂಬ ವಿಷಯದ ಮೇಲೆ ಕಾರ್ಯಾಗಾರ ನಡೆಯಿತು. ಉಡುಪಿಯ ಡಾ.ಎ.ವಿ.ಬಾಳಿಗಾ ಆಸ್ಪತ್ರೆಯ ಮಾನಸಿಕ ಆರೋಗ್ಯ ತಜ್ಞ ಶ್ರೀ ನಾಗರಾಜ ಮೂರ್ತಿ ಅವರು ಮುಖ್ಯ ಅತಿಥಿಯಾಗಿದ್ದರು.

ಕನ್ನಡಪ್ರಭ ವಾರ್ತೆ ಕಲ್ಯಾಣಪುರಇಲ್ಲಿನ ಮಿಲಾಗ್ರಿಸ ಕಾಲೇಜಿನಲ್ಲಿ ಮಹಿಳಾ ಸಂಘ ಹಾಗೂ ಲೈಂಗಿಕ ದೌರ್ಜನ್ಯ ತಡೆ ಸಮಿತಿ, ಐಕ್ಯೂಎಸಿ ಇದರ ಸಹಯೋಗದೊಂದಿಗೆ ‘ಮಾನಸಿಕ ಆರೋಗ್ಯ ಮತ್ತು ಯುವ ಜನತೆಯಲ್ಲಿ ಮಾನಸಿಕ ಪರಿಣಾಮಗಳು’ ಎಂಬ ವಿಷಯದ ಮೇಲೆ ಒಂದು ಕಾರ್ಯಾಗಾರವನ್ನು ಎ.ವಿ. ಹಾಲ್‌ನಲ್ಲಿ ಆಯೋಜಿಸಲಾಯಿತು.ಯುವಕರ ಮನೋವೈಕಲ್ಯ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು. ಉಡುಪಿಯ ಡಾ.ಎ.ವಿ.ಬಾಳಿಗಾ ಆಸ್ಪತ್ರೆಯ ಮಾನಸಿಕ ಆರೋಗ್ಯ ತಜ್ಞ ಶ್ರೀ ನಾಗರಾಜ ಮೂರ್ತಿ ಅವರು ಮುಖ್ಯ ಅತಿಥಿಯಾಗಿದ್ದರು. ಅವರು ಮಾನಸಿಕ ಆರೋಗ್ಯ ಸಮಸ್ಯೆಗಳ ಪ್ರಚಲಿತತೆ ಸಾಮಾಜಿಕ ಮಾಧ್ಯಮದ ಪರಿಣಾಮ, ಶಾರೀರಿಕ ಚಟುವಟಿಕೆಗಳು, ಮನೋಸ್ಥಿತಿಯನ್ನು ಸುಧಾರಿಸಲು ಸೂಕ್ತ ತಂತ್ರ, ಆತ್ಮಮೌಲ್ಯಗಳ ಬಗ್ಗೆ ಬಹಳ ಸವಿಸ್ತಾರವಾದ ಮಾಹಿತಿಯನ್ನು ನೀಡಿದರು.ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲ ಡಾ.ವಿನ್ಸೆಂಟ್‌ ಆಳ್ವ, ಸಭೆಯನ್ನು ಉದ್ದೇಶಿಸಿ ಶಿಕ್ಷಣ ಸಂಸ್ಥೆಗಳಲ್ಲಿ ಮಾನಸಿಕ ಆರೋಗ್ಯ ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿದರು.ಕಾಲೇಜಿನ ಲೈಂಗಿಕ ದೌರ್ಜನ್ಯ ತಡೆ ಸಮಿತಿಯ ಸಂಚಾಲಕರಾದ ರಾಧಿಕಾ ಪಾಟ್ಕರ್‌, ಮಹಿಳಾ ಸಂಘದ ಅಧ್ಯಕ್ಷೆ ಕುಮಾರಿ ವರ್ಷಿಣಿ, ಅಧ್ಯಕ್ಷೆ ಕುಮಾರಿ ತನುಷಾ ಉಪಸ್ಥಿತರಿದ್ದರು. ಕುಮಾರಿ ಮೆಲಿಷಾ ಕಾರ್ಯಕ್ರಮವನ್ನು ನಿರೂಪಿಸಿದರು.