ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಆರ್.ಡಿ. ಜನಾರ್ದನ ಮಾತನಾಡಿ, ಪ್ರಜಾಪ್ರಭುತ್ವ ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಟ್ಡಿದ್ದು, ಇದು ತಾಯಿಯಂತೆ ದೇಶದ ಪ್ರಜೆಗಳನ್ನು ಪೋಷಿಸುತ್ತಾ ಬಂದಿದ್ದು, ಇದೊಂದು ಅವಿನಾಶಿನಿ ವ್ಯವಸ್ಥೆಯಾಗಿದೆ ಎಂದರು.

ಯಲ್ಲಾಪುರ: ಪ್ರಜಾಪ್ರಭುತ್ವದ ಆಶಯದಂತೆ ಉತ್ತಮ ಸಮಾಜದ ಗೌರವಾನ್ವಿತ ನಾಗರಿಕರಾಗುವ ನಿಟ್ಟಿನಲ್ಲಿ ನಾಯಕತ್ವದ ಮೌಲ್ಯ ಬೆಳೆಸುವ ದೃಷ್ಟಿಯಿಂದ ಯುವ ಸಂಸತ್ತು ಆಯೋಜಿಸಲಾಗಿದೆ ಎಂದು ತಹಸೀಲ್ದಾರ್ ಎಂ.ಆರ್. ಕುಲಕರ್ಣಿ ಹೇಳಿದರು.

ತಾಲೂಕು ಆಡಳಿತ, ಶಿಕ್ಷಣ ಇಲಾಖೆ, ಕಾನೂನು ಸೇವಾ ಇಲಾಖೆ, ಪಪಂ, ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಪಟ್ಟಣದ ತಾಪಂ ಸಭಾಭವನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ಯುವ ಸಂಸತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಆರ್.ಡಿ. ಜನಾರ್ದನ ಮಾತನಾಡಿ, ಪ್ರಜಾಪ್ರಭುತ್ವ ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಟ್ಡಿದ್ದು, ಇದು ತಾಯಿಯಂತೆ ದೇಶದ ಪ್ರಜೆಗಳನ್ನು ಪೋಷಿಸುತ್ತಾ ಬಂದಿದ್ದು, ಇದೊಂದು ಅವಿನಾಶಿನಿ ವ್ಯವಸ್ಥೆಯಾಗಿದೆ ಎಂದರು.

ವಕೀಲರ ಸಂಘದ ಅಧ್ಯಕ್ಷ ವಿ.ಟಿ. ಭಟ್ಟ, ಸಿಪಿಐ ಸುರೇಶ ಕುಂಬಾರ, ಪಿಎಸ್‌ಐ ರಾಜಶೇಖರ ವಂದಲಿ, ನೌಕರ ಸಂಘದ ಅಧ್ಯಕ್ಷ ಸಂಜೀವಕುಮಾರ ಹೊಸ್ಕೇರಿ, ತಾಪಂ ಇಒ ರಾಜೇಶ ಧನವಾಡಕರ್, ಪಿಯು ಕಾಲೇಜಿನ ಪ್ರಾಂಶುಪಾಲ ಎಸ್.ಟಿ. ವೈದ್ಯ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಾಯ ಗಾಂವ್ಕರ ಬಿದ್ರೆಮನೆ ಉಪಸ್ಥಿತರಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ರೇಖಾ ನಾಯ್ಕ ಸ್ವಾಗತಿಸಿದರು. ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕಿ ಜಿ.ಬಿ. ನರೋಟಿ ಸಂವಿಧಾನ ಪೀಠಿಕೆ ವಾಚಿಸಿದರು. ಶಿಕ್ಷಣ ಸಂಯೋಜಕ ಸುಧಾಕರ ನಾಯಕ ನಿರೂಪಿಸಿದರು. ಪ್ರಶಾಂತ ಜಿ.ಎನ್. ವಂದಿಸಿದರು.

ಈ ಸಂದರ್ಭದಲ್ಲಿ ಆರ್.ಡಿ. ಜನಾರ್ದನ, ಸುಧಾಕರ ನಾಯಕ, ಶ್ರೀಧರ ಹೆಗಡೆ ಮುಂತಾದವರನ್ನು ಸನ್ಮಾನಿಸಲಾಯಿತು. ಯುವ ಸಂಸತ್ ಕಲಾಪದಲ್ಲಿ ೧೬ ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ, ಗ್ರಾಮೀಣ ಭಾಗದ ಹೆಣ್ಣುಮಕ್ಕಳ ಉನ್ನತ ಶಿಕ್ಷಣ ದಾಖಲಾತಿ, ಪ್ರವಾಸೋದ್ಯಮ ಉತ್ತೇಜಿಸುವಲ್ಲಿ ಚರ್ಚಿಸಿದರು.