ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಮೈ ಭಾರತ್ - ದಕ್ಷಿಣ ಕನ್ನಡ, ಮಂಗಳೂರು ವಿಶ್ವವಿದ್ಯಾಲಯ, ಬೆಸೆಂಟ್ ಮಹಿಳಾ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಂಯುಕ್ತ ಆಶ್ರಯದಲ್ಲಿ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ನಡೆದ ಯೂತ್ ಪಾರ್ಲಿಮೆಂಟ್
ಮಂಗಳೂರು: 2047 ರ ವೇಳೆಗೆ ಭಾರತವನ್ನು ವಿಕಸಿತ ರಾಷ್ಟ್ರವನ್ನಾಗಿ ಮಾಡುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಯುವಜನರು ಕೇವಲ ಪ್ರೇಕ್ಷಕರಾಗಿರದೆ, ನೀತಿ ನಿರೂಪಣೆಯಲ್ಲಿ ಭಾಗವಹಿಸುವ ನಾಯಕರಾಗಬೇಕು ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.
ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಮೈ ಭಾರತ್ - ದಕ್ಷಿಣ ಕನ್ನಡ, ಮಂಗಳೂರು ವಿಶ್ವವಿದ್ಯಾಲಯ, ಬೆಸೆಂಟ್ ಮಹಿಳಾ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಂಯುಕ್ತ ಆಶ್ರಯದಲ್ಲಿ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ನಡೆದ ಯೂತ್ ಪಾರ್ಲಿಮೆಂಟ್ 2027 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಜಿಲ್ಲಾ ಮಟ್ಟದಿಂದ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತಂದುಕೊಡಬೇಕೆಂದು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಕರೆ ನೀಡಿದರು.
ವಿಮೆನ್ಸ್ ನ್ಯಾಷನಲ್ ಎಜುಕೇಷನ್ ಸೊಸೈಟಿಯ ಉಪಾಧ್ಯಕ್ಷ ಜೀವನ್ದಾಸ್ ನಾರಾಯಣ್ ಅಧ್ಯಕ್ಷತೆ ವಹಿಸಿದ್ದರು.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ, ಮೈ ಭಾರತ್ ಉಪ ನಿರ್ದೇಶಕ ಉಲ್ಲಾಸ್ ಕೆ.ಟಿ.ಕೆ, ಪ್ರಾಂಶುಪಾಲ ಡಾ.ಪರಶುರಾಮ್ ಜಿ.ಮಾಲಗಿ, ಮಂಗಳೂರು ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಕಾರ್ಯಕ್ರಮ ಸಂಯೋಜಕ ಡಾ.ಶೇಷಪ್ಪ ಕೆ.ಅಮಿನ್, ಮೈ ಭಾರತ್ನ ಜಗದೀಶ್ ಕೆ. ಮತ್ತಿತರರು ಇದ್ದರು.