ಸಾರಾಂಶ
ಕನ್ನಡಪ್ರಭ ವಾರ್ತೆ ದೇವಲಾಪುರ
ಇತ್ತೀಚಿನ ದಿನಗಳಲ್ಲಿ ಯುವಕರು ಮಾದಕ ವ್ಯಸನಗಳಿಗೆ ದಾಸರಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ನಾಗಮಂಗಲ ಗ್ರಾಮಾಂತರ ಠಾಣೆ ಪಿಎಸ್‌ಐ ರವಿಕುಮಾರ್ ಹೇಳಿದರು.ನಾಗಮಂಗಲ ತಾಲೂಕು ದೇವಲಾಪುರ ಕರ್ನಾಟಕ ಪಬ್ಲಿಕ್ ಸ್ಕೂಲ್, ಶಾಲೆಯಲ್ಲಿ ಮಾದಕ ದ್ರವ್ಯ ವಿರೋಧಿ ದಿನವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರು ಮಾದಕ ದ್ರವ್ಯಗಳಿಂದ ದೂರವಿರುವಂತೆ ಕರೆ ನೀಡಿದರು.
ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದಿಂದಾಗಿ ಯುವಕರು ಮಾದಕ ದ್ರವ್ಯಕ್ಕೆ ಬಲಿಯಾಗುತ್ತಿದ್ದಾರೆ. ಮಾದಕ ದ್ರವ್ಯಗಳು ಹೆಚ್ಚು ದುಷ್ಪರಿಣಾಮ ಬೀರಿ ಮನುಷ್ಯರನ್ನು ಮಾನಸಿಕ ಮತ್ತು ದೈಹಿಕವಾಗಿ ದುರ್ಬಲಗೊಳಿಸುತ್ತವೆ ಎಂದು ಎಚ್ಚರಿಕೆ ನೀಡಿದರು.ಮಾದಕ ವ್ಯಸನದಿಂದ ಸಮಾಜಘಾತುಕ ಕೃತ್ಯಗಳು ಹೆಚ್ಚಾಗುತ್ತಿವೆ. ಸಾಮಾಜಿಕ ಸ್ವಾಸ್ಥ್ಯ ಹಾಳಾಗುತ್ತಿದೆ. ಯುವಕರನ್ನು ಸರಿ ದಾರಿಗೆ ತರುವಲ್ಲಿ ಶಾಲಾ ಕಾಲೇಜುಗಳು ಮತ್ತು ಸಮಾಜದ ಹಿರಿಯರು ನಿರಂತರ ಪ್ರಯತ್ನದಲ್ಲಿದ್ದರೂ ಫಲಕಾರಿಯಾಗದಿರುವುದು ವಿಷಾದನೀಯ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರೌಢಶಾಲಾ ಮುಖ್ಯಸ್ಥ ಎಸ್.ಸಿ.ಶಿವಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಮಾದಕ ದ್ರವ್ಯಗಳನ್ನು ಬಳಸದಂತೆ ಜನ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು ಎಂದರು.ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ನಂಜಮ್ಮಣ್ಣಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಗಿರೀಶ್, ನೂರ್ ಅಫ್ರೋಜ್, ನಾಗೇಂದ್ರ, ಇಂದ್ರೇಶ್, ನವೀನ್, ಶ್ಯಾಮಲಾ, ಸಮ್ಯ, ಕಾಂತರಾಜು, ಯೋಗೇಶ್ ಉಪಸ್ಥಿತರಿದ್ದರು. ಭೂಮಿಕ ಮತ್ತು ಸಿಂಚನ ನಿರೂಪಿಸಿದರೆ, ಹರ್ಷಿತ ಮತ್ತು ಮೋಹನಕುಮಾರಿ ಪ್ರಾರ್ಥಿಸಿದರು. ಹರ್ಷಿತ ಡಿ.ಎಚ್. ಸ್ವಾಗತಿಸಿ ಚೈತ್ರ ವಂದಿಸಿದರು.
ಇದಕ್ಕೂ ಮೊದಲು ಗ್ರಾಮದಲ್ಲಿ ಜಾಥಾ ನಡೆಸಿ ಪ್ರಮುಖ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.ಪೊಲೀಸರು, ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಪೊಲೀಸ್ ಅಧಿಕಾರಿಗಳು ಹಾಗೂ ಓಂಶ್ರೀನಿಕೇತನ ಪ್ರೌಢಶಾಲೆ ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ರಸ್ತೆಯಲ್ಲಿ ಜಾಗೃತಿ ಜಾಥಾ ನಡೆಸಿದರು.
ಡಿವೈಎಸ್ಪಿ ಮುರುಳಿ ಜಾಥಾ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ, ಮಾದಕ ದ್ರವ್ಯಗಳ ಸೇವನೆ, ಕಳ್ಳ ಸಾಗಣೆ ಸಮಾಜದಲ್ಲಿ ದೊಡ್ಡ ಪಿಡುಗಾಗಿದೆ. ಇವುಗಳ ದೀರ್ಘಾವಧಿ ಬಳಕೆಯಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವುದಲ್ಲದೆ ಮಾನಸಿಕ ಅಸ್ವಸ್ಥತೆ, ಸಾವಿಗೆ ಕಾರಣವಾಗುತ್ತದೆ ಎಂದರು.ಮಾದಕ ವಸ್ತು ಸೇವನೆ ಮಾಡುವವರ ಮೇಲೆ ಮಾತ್ರವಲ್ಲದೇ ಸಮಾಜನ ಜನರ ಮೇಲೆ ಕೂಡ ಭಾರೀ ಪರಿಣಾಮ ಬೀರಲಿದೆ. ಇದು ಸಾಮಾಜಿಕವಾಗಿ, ದೈಹಿಕವಾಗಿ, ಸಾಂಸ್ಕೃತಿಕವಾಗಿ, ಭಾವನಾತ್ಮಕವಾಗಿ ಮತ್ತು ಆರ್ಥಿಕವಾಗಿ ಎಲ್ಲವನ್ನು ಹಾಳುಮಾಡುತ್ತದೆ. ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಇದರಿಂದ ದೂರವಿರಬೇಕು ಎಂದರು.ಈ ವೇಳೆ ಸಿಪಿಐ ಪ್ರಕಾಶ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಜಾಗೃತಿ ಅರಿವು ಮೂಡಿಸಿದರು. ನಗರ ಆಟೋ ಸಂಘದ ಚಾಲಕರು, ವಿದ್ಯಾರ್ಥಿಗಳು, ಶಿಕ್ಷಕರು ಜಾಥಾದಲ್ಲಿ ಪಾಲ್ಗೊಂಡಿದ್ದರು.