ಸಾರಾಂಶ
ಕನ್ನಡಪ್ರಭ ವಾರ್ತೆ ಪಾಂಡವಪುರ
ಯುವಜನತೆ ಹೈನುಗಾರಿಕೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗುವ ಮೂಲಕ ಹೈನೋದ್ಯಮವಾಗಿ ಬೆಳೆಸಬೇಕು ಎಂದು ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್ ಹೇಳಿದರು.ತಾಲೂಕಿನ ಸುಂಕಾತೊಣ್ಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಜಿ.ಮಹೇಶ್ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿ, ಹಾಲು ಉತ್ಪಾದಕರ ಸಹಕಾರ ಸಂಘಗಳು ಗ್ರಾಮೀಣ ಪ್ರದೇಶದ ಜನತರ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿವೆ ಎಂದರು.
ಒಕ್ಕೂಟವು ಹಾಲು ಉತ್ಪಾದಕ ರೈತರಿಗೆ ಮೇವು ಕತ್ತರಿಸುವ ಯಂತ್ರ, ರಬ್ಬರ್ ಮ್ಯಾಟ್, ಹಾಲು ಕರೆಯುವ ಯಂತ್ರ, ವಿಮಾ ಸೌಲಭ್ಯ ಸೇರಿದಂತೆ ಅನೇಕು ಸವಲತ್ತುಗಳನ್ನು ನೀಡುವ ಮೂಲಕ ಪ್ರೋತ್ಸಾಹ ನೀಡುತ್ತಿದೆ. ಇವುಗಳ ಬಗ್ಗೆ ರೈತರಿಗೆ ಅರಿವು ಮೂಡಿಸುವ ಕೆಲಸವನ್ನು ಸಂಘದ ಅಧಿಕಾರಿಗಳ ವರ್ಗ ಮಾಡಬೇಕು. ಉತ್ಪಾದಕರು ಸಹ ಒಕ್ಕೂಟದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.ಕಾರ್‍ಯಕ್ರಮಕ್ಕೂ ಮುನ್ನ ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್ ಅವರನ್ನು ಗ್ರಾಮದ ಗ್ರಾಪಂ ಆವರಣದಿಂದ ಮೆರವಣಿಗೆ ಮೂಲಕ ಸಂಘದ ಬಳಿಕೆ ಕರೆತರಲಾಯಿತು. ಬಳಿಕ ಅಭಿನಂಧಿಸಲಾಯಿತು.
ಸಭೆಯಲ್ಲಿ ಸಂಘದ ಅಧ್ಯಕ್ಷ ಎಸ್.ಜಿ.ಮಹೇಶ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಎಸ್.ಎಸ್.ಹೇಮಂತ್‌ಕುಮಾರ್, ನಿರ್ದೇಶಕರಾದ ಜೆ.ದೇವೇಗೌಡ, ಕಾಳೇಗೌಡ, ರಾಮಚಂದ್ರ, ಯಶೋಧಮ್ಮ, ಸವೀನ ಆರ್, ಸತೀಶ್, ಲೋಕೇಶ್, ಅಪ್ಪುಗೌಡ, ಸಿ.ಎಸ್.ಲೋಕೇಶ್, ಮಾರ್ಗವಿಸ್ತರ್ಣಾಧಿಕಾರಿ ಸಿ.ಎನ್.ಮಧುಶಂಕರ್, ಡೇರಿ ಕಾರ್‍ಯದರ್ಶಿ ಎಸ್.ಕೆ.ರವಿ, ಎಸ್.ಪಿ.ನವೀನ್, ಸಿಬ್ಬಂದಿ ಎಸ್.ಎನ್.ಮಹೇಶ್, ಎಂ.ಎಸ್.ವರಲಕ್ಷ್ಮಿ ಸೇರಿದಂತೆ ಗ್ರಾಮಸ್ಥರು, ಮುಖಂಡರು ಭಾಗವಹಿಸಿದ್ದರು.ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಮಂಡ್ಯ:ರಾಜ್ಯ ಸರ್ಕಾರಿ ನೌಕರರ ಪತ್ತಿನ ಸಹಕಾರ ಜಿಲ್ಲಾ ಸಂಘದ ವತಿಯಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಿಂದ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 14 ರಂದು ಸಂಘದ ಆವರಣದಲ್ಲಿ ನಡೆಯುವ ವಾರ್ಷಿಕ ಸಭೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಸಂಘದ ಸದಸ್ಯರ ಮಕ್ಕಳನ್ನು ಗೌರವಿಸಲಾಗುವುದು. ಸೆ.8ರೊಳಗೆ ಅರ್ಹ ವಿದ್ಯಾರ್ಥಿಗಳು ಸೂಕ್ತ ದಾಖಲಾತಿ, ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಸಂಘದ ಕಚೇರಿಗೆ ತಲುಪಿಸುವಂತೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ.