ಯುವಜನತೆ ಉತ್ತಮ ಶಿಕ್ಷಣ ಪಡೆಯಬೇಕು: ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್

| Published : May 28 2024, 01:04 AM IST

ಯುವಜನತೆ ಉತ್ತಮ ಶಿಕ್ಷಣ ಪಡೆಯಬೇಕು: ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್
Share this Article
  • FB
  • TW
  • Linkdin
  • Email

ಸಾರಾಂಶ

ತರೀಕೆರೆ, ಯುವ ಜನತೆ ಉತ್ತಮ ಶಿಕ್ಷಣ ಪಡೆದುಕೊಳ್ಳಲು ಮುಂದಾಗಬೇಕು ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ತಿಳಿಸಿದರು.

ಡಾ.ಬಿ.ಆರ್.ಅಂಬೇಡ್ಕರ್‌ರವರ ೧೩೩ನೇ ಜನ್ಮ ದಿನಾಚರಣೆ

ಕನ್ನಡಪ್ರಭ ವಾರ್ತೆ, ತರೀಕೆರೆ

ಯುವ ಜನತೆ ಉತ್ತಮ ಶಿಕ್ಷಣ ಪಡೆದುಕೊಳ್ಳಲು ಮುಂದಾಗಬೇಕು ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ತಿಳಿಸಿದರು.ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಅಂಚೆ ನೌಕರರ ಸಂಘ, ಪ್ರಧಾನ ಅಂಚೆ ಕಚೇರಿ ಚಿಕ್ಕಮಗಳೂರು ವತಿಯಿಂದ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್‌ರವರ ೧೩೩ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.ವಿದ್ಯಾವಂತ ನೌಕರರು ತಮ್ಮ ಮುಂದಿನ ಪೀಳಿಗೆಗೆ ಎಲ್ಲಾ ಕ್ಷೇತ್ರಗಳ ಬಗ್ಗೆ ಮಾರ್ಗದರ್ಶನ ನೀಡುವುದು ಅಗತ್ಯವಾಗಿದೆ ಎಂದು ಹೇಳಿದರು.ಚಿಕ್ಕಮಗಳೂರು ಸಹಾಯಕ ಅಂಚೆ ಅಧೀಕ್ಷಕಿ ಕೆ.ರೇಖಾ ಮಾತನಾಡಿ, ಡಾ.ಬಿ,ಆರ್.ಅಂಬೇಡ್ಕರ್‌ ಅತ್ಯಂತ ಕಠಿಣ ಪರಿಶ್ರಮ ದಿಂದ ಅಪಾರ ಜ್ಞಾನ ಪಡೆದುಕೊಂಡು ಮಹಾನ್ ವ್ಯಕ್ತಿಯಾಗಿದ್ದಾರೆ. ಅವರ ಬದುಕು ನಮಗೆ ಆದರ್ಶ ವಾಗಬೇಕು ಎಂದು ಹೇಳಿದರು.ಪ್ರೊ.ಬಿ.ಎಲ್.ರಾಜು ವಿಶೇಷ ಉಪನ್ಯಾಸ ನೀಡಿ, ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನದಲ್ಲಿ ನೀಡಿರುವ ಮೀಸಲಾತಿ ಯನ್ನು ಸರಕಾರಿ ಸೌಲಭ್ಯಕ್ಕೆ ಬಳಸಿಕೊಳ್ಳಲಾಗಿದೆ. ಸಮಾಜದ ಪರಿವರ್ತನೆಗೆ ಬಳಕೆಯಾಗುತ್ತಿರುವುದು ತುಂಬಾ ವಿರಳ, ಸುಶಿಕ್ಷಿತರು ತಮ್ಮ ಸಮುದಾಯದ ನೊಂದವರ ಪರವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.ಸಮಿತಿ ಜಿಲ್ಲಾಧ್ಯಕ್ಷ ಸೇವ್ಯಾನಾಯ್ಕ, ಸಮಿತಿಯ ರಾಜ್ಯ ಪದಾಧಿಕಾರಿಗಳಾದ ನವೀನ್, ಕೃಷ್ಣಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಲ್.ಶಿವಣ್ಣ, ರಾಜು, ಪ.ಜಾತಿ, ಪ.ವರ್ಗಗಳ ನೌಕರರ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಎಚ್.ಕೆ.ಶೇಖರಪ್ಪ ಹಾಗೂ ಇತರರು ಇದ್ದರು.

27ಕೆಟಿಆರ್.ಕೆ.2ಃ

ತರೀಕೆರೆಯಲ್ಲಿ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಅಂಚೆ ನೌಕರರ ಸಂಘ, ಚಿಕ್ಕಮಗಳೂರು ಪ್ರಧಾನ ಅಂಚೆ ಕಚೇರಿಯಿಂದ ಡಾ.ಬಿ.ಆರ್.ಅಂಬೇಡ್ಕರ್‌ರವರ ೧೩೩ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಮತ್ತಿತರರು ಇದ್ದರು.