ಮತದಾನದ ಮಹತ್ವ ಯುವಜನತೆ ಅರಿಯಬೇಕು: ಪಿ.ಎಸ್. ವಸ್ತ್ರದ್

| Published : Apr 22 2024, 02:15 AM IST

ಮತದಾನದ ಮಹತ್ವ ಯುವಜನತೆ ಅರಿಯಬೇಕು: ಪಿ.ಎಸ್. ವಸ್ತ್ರದ್
Share this Article
  • FB
  • TW
  • Linkdin
  • Email

ಸಾರಾಂಶ

ಮಂಗಳೂರು ತಾಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಸಿ. ಅಪ್ಪಣ್ಣ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಯುವ ಮತದಾರರು ಮತದಾನದ ಮಹತ್ವವನ್ನು ಅರಿತುಕೊಂಡು ತಮ್ಮ ಮತವನ್ನು ಚಲಾಯಿಸಬೇಕು ಹಾಗೂ ಸಮಾಜದ ಇತರ ಜನರೂ ಮತದಾನದಲ್ಲಿ ಭಾಗವಹಿಸುವಂತೆ ಪ್ರೇರೇಪಣೆ ಮಾಡಬೇಕು ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಹಾಗೂ ನಿವೃತ್ತ ಐ.ಎ.ಎಸ್. ಅಧಿಕಾರಿ ಪಿ.ಎಸ್. ವಸ್ತ್ರದ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಪಂಚಾಯ್ತಿ ಹಾಗೂ ಮಂಗಳೂರು ತಾಲೂಕು ಪಂಚಾಯ್ತಿ ವತಿಯಿಂದ ಭಾನುವಾರ ನಗರದ ಬಲ್ಮಠ ಸರ್ಕಾರಿ ಪದವಿ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಮತದಾರರ ಜಾಗೃತಿ ಅಭಿಯಾನದ ಪ್ರಯುಕ್ತ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮತದಾನ ಹಾಗೂ ಚುನಾವಣಾ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಪ್ರಶ್ನೆಗಳನ್ನು ಕೇಳಿದರು. ಮಂಗಳೂರು ತಾಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಸಿ. ಅಪ್ಪಣ್ಣ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಲೋಕೇಶ್, ಮಂಗಳೂರು ತಾಲೂಕು ಪಂಚಾಯ್ತಿ ಸಹಾಯಕ ನಿರ್ದೇಶಕ ಮಹೇಶ್ ಅಂಬೆಕಲ್, ಸಂಪನ್ಮೂಲ ವ್ಯಕ್ತಿಗಳಾದ ತಹಸೀನ್, ಹರಿಪ್ರಸಾದ್ ಶೆಟ್ಟಿ, ಓ.ಆರ್. ಪ್ರಕಾಶ್, ಪ್ರಮೀಳಾ ರಾವ್, ಶ್ರೀಮತಿ ನಿಶ್ಚಿತಾ, ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿಗಳು ಇದ್ದರು. ಮಹೇಶ್ ಅಂಬೆಕಲ್ ಸ್ವಾಗತಿಸಿದರು.