ಯುವಜನತೆ ಮೊಬೈಲ್ ಬಳಕೆಯಿಂದ ಹಾಳಾಗುತ್ತಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಕಾಲ ಕಳೆಯುತ್ತಿದ್ದು, ದೇಶದ ಶೈಕ್ಷಣಿಕ ಪ್ರಗತಿ ಕುಸಿಯುತ್ತಿದೆ

ಯಲಬುರ್ಗಾ: ಯುವ ಸಮುದಾಯ ಅತಿಯಾದ ಮೊಬೈಲ್ ಬಳಕೆಯಿಂದ ದೂರ ಇರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಜೆ.ರಂಗಸ್ವಾಮಿ ಹೇಳಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘದ ಸಹಯೋಗದಲ್ಲಿ ಯುವ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಯುವಜನತೆ ಮೊಬೈಲ್ ಬಳಕೆಯಿಂದ ಹಾಳಾಗುತ್ತಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಕಾಲ ಕಳೆಯುತ್ತಿದ್ದು, ದೇಶದ ಶೈಕ್ಷಣಿಕ ಪ್ರಗತಿ ಕುಸಿಯುತ್ತಿದೆ.ಜೀವನದಲ್ಲಿ ಸಂಸ್ಕೃತಿ ಹಾಗೂ ಒಳ್ಳೆಯ ಮನೋಭಾವ ಕಲಿಯಬೇಕು. ಯುವಕರು ಕಲಿಕೆಯಲ್ಲಿ ಎದುರಾಗುವ ಕೆಟ್ಟ ವಿಚಾರ ಬದಿಗೊತ್ತಿ, ಜೀವನದಲ್ಲಿ ಒಳ್ಳೆಯ ಅಂಶ ಅಳವಡಿಸಿಕೊಳ್ಳಬೇಕು. ಮಾದಕ ವಸ್ತುಗಳ ಸೇವನೆ ಸೇರಿದಂತೆ ಮುಂತಾದ ದುಶ್ಚಟಗಳಿಗೆ ಬಲಿಯಾಗುತ್ತಿದ್ದು, ಇದರಿಂದ ದೇಶದ ಪ್ರಗತಿಗೆ ಮಾರಕವಾಗುತ್ತಿದೆ ಎಂದರು.

ಪ್ರಾಚಾರ್ಯ ಸಿದ್ದರಾಮಯ್ಯ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು.

ವಕೀಲರ ಸಂಘದ ತಾಲೂಕಾಧ್ಯಕ್ಷ ಸುಭಾಷ್ ಹೊಂಬಳ, ಸಹಾಯಕ ಸರ್ಕಾರಿ ಅಭಿಯೋಜಕ ರವಿ ಹುಣಸಿಮರದ, ಅಪರ ಸರ್ಕಾರಿ ವಕೀಲರು ಮಲ್ಲನಗೌಡ ಪಾಟೀಲ್, ಮಹಾಂತೇಶ ಈ.ಟಿ., ಹಸನ್‌ಸಾಬ್ ನದಾಫ್‌, ಕಾಲೇಜಿನ ಉಪನ್ಯಾಸಕರು ನ್ಯಾಯಾಲಯದ ಸಿಬ್ಬಂದಿ ರಾಘವೇಂದ್ರ ಕೋಳಿಹಾಳ, ವಿನಾಯಕ ಇದ್ದರು.