ಜಿಲ್ಲೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬಲಿಷ್ಠಗೊಳಿಸಲು ಯುವ ಕಾಂಗ್ರೆಸ್‌ ಶ್ರಮಿಸಲಿದೆ. ಪಕ್ಷ ಸಂಘಟನೆ ನಿಟ್ಟಿನಲ್ಲಿ ಪ್ರತಿ ಬೂತ್‌ನಲ್ಲಿ 10 ಸದಸ್ಯರ ತಂಡಗಳನ್ನು ಸ್ಥಾಪಿಸಲಾಗುವುದು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ ನೂತನ ಅಧ್ಯಕ್ಷ ಇಬ್ರಾಹಿಂ ನವಾಝ್‌ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಜಿಲ್ಲೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬಲಿಷ್ಠಗೊಳಿಸಲು ಯುವ ಕಾಂಗ್ರೆಸ್‌ ಶ್ರಮಿಸಲಿದೆ. ಪಕ್ಷ ಸಂಘಟನೆ ನಿಟ್ಟಿನಲ್ಲಿ ಪ್ರತಿ ಬೂತ್‌ನಲ್ಲಿ 10 ಸದಸ್ಯರ ತಂಡಗಳನ್ನು ಸ್ಥಾಪಿಸಲಾಗುವುದು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ ನೂತನ ಅಧ್ಯಕ್ಷ ಇಬ್ರಾಹಿಂ ನವಾಝ್‌ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ, ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಯುವ ಕಾಂಗ್ರೆಸ್ ಸದಸ್ಯರು ಸಕ್ರಿಯವಾಗಿ ಕೆಲಸ ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್‌ನ ಬಲಿಷ್ಠ ತಂಡಗಳನ್ನು ರಚಿಸಲಾಗುವುದು ಎಂದರು.

ಬೂತ್ ಮಟ್ಟದಲ್ಲಿ ಯುವಕರನ್ನು ಒಂದುಗೂಡಿಸುವುದು, ಪಕ್ಷದ ಚಟುವಟಿಕೆಗಳನ್ನು ವೃದ್ಧಿಸುವುದು ಮತ್ತು ಸಮಾಜದಲ್ಲಿ ಸಾಮರಸ್ಯವನ್ನು ಬೆಳೆಸುವುದು ಬೂತ್‌ ಮಟ್ಟದ ತಂಡಗಳ ಜವಾಬ್ದಾರಿ. ಮುಂಬರುವ ಎಲ್ಲ ಚುನಾವಣೆಗಳನ್ನು ಎದುರಿಸಲು ಈ ಯುವಕರು ಕೈಜೋಡಿಸಲಿದ್ದಾರೆ ಎಂದು ಅವರು ಹೇಳಿದರು.

ಮುಖಂಡರಾದ ರೂಪೇಶ್ ರೈ, ಕಿರಣ್ ಬುಡ್ಲೆಗುತ್ತು, ದೀಕ್ಸಿತ್ ಅತ್ತಾವರ, ಆಸೀಫ್, ಪವನ್ ಸಾಲಿಯಾನ್ ಇದ್ದರು.