ಯುವಕರು ಸ್ವ-ಉದ್ಯೋಗ ಕೈಗೊಂಡು ಯಶಸ್ವಿ ಉದ್ಯಮಿಗಳಾಗಿ: ಬಿ.ಎಸ್. ಅಂಗಡಿ

| Published : Oct 31 2025, 03:15 AM IST

ಸಾರಾಂಶ

ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳು ಪದವಿ ಪೂರ್ಣಗೊಳಿಸುತ್ತಿರುವ ಈ ದಿನಗಳಲ್ಲಿ ಸರ್ಕಾರ ಮತ್ತು ಖಾಸಗಿ ಕಚೇರಿಗಳಲ್ಲಿ ಎಲ್ಲರಿಗೂ ಉದ್ಯೋಗ ಸಿಗುವುದು ಅನುಮಾನವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಪದವಿ ಹಂತದಲ್ಲೇ ವ್ಯವಹಾರಿಕ ಜ್ಞಾನವನ್ನು ಪಡೆದುಕೊಂಡು ಸ್ವಉದ್ಯೋಗದ ಕೌಶಲ್ಯವನ್ನು ಬೆಳಸಿಕೊಂಡು ಉದ್ಯಮ ಆರಂಭಿಸಬೇಕಾದ ಅಗತ್ಯವಿದೆ ಎಂದು ಬಿ.ಇ.ಸಿ-ಸ್ಟೆಪ್ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಎಸ್. ಅಂಗಡಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕೆ ಕೇಂದ್ರ ಹಾಗೂ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯೂನಿಕೇಶನ್ ಅಂಡ್ ಅಡ್ವರ್ಟೈಸಿಂಗ್‌ ಲಿ. ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಇನಕ್ಯುಬೇಶನ್ ವಿಷಯ ಕುರಿತು ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಬೇರೆಯವರ ಬಳಿ ಕೆಲಸ ಮಾಡುವುದರಿಂದ ನಿಮ್ಮ ಸಾಮರ್ಥ್ಯ ಗುರುತಿಸಿಕೊಳ್ಳುವ ಅವಕಾಶ ಕಡಿಮೆಯಾಗುತ್ತದೆ. ಸ್ವತಃ ಒಂದು ಉತ್ತಮ ಉದ್ಯಮ ಆಯ್ಕೆ ಮಾಡಿಕೊಂಡು ಶ್ರದ್ಧೆ ಹಾಗೂ ಪರಿಶ್ರಮದಿಂದ ಯಶಸ್ಸು ಸಾಧಿಸಬೇಕು ಎಂದು ಸಲಹೆ ನೀಡಿದರು.

ಕ್ಷೇತ್ರ ಭಾರತದ ಆರ್ಥಿಕತೆಯ ಬೆನ್ನೆಲುಬಾಗಿ ಕೆಲಸ ಮಾಡುತ್ತಿದ್ದು, ದೇಶದ ಒಟ್ಟು ರಫ್ತು ವ್ಯವಹಾರದಲ್ಲಿ ಶೇ.45 ಪಾಲು ಹೊಂದಿದೆ. ಕೊರೊನಾ ಸಮಯದಲ್ಲಿ ಹಿನ್ನೆಡೆ ಅನುಭವಿಸಿದಾಗ ಭಾರತ ಸರ್ಕಾರ ಯೋಜನೆ ಪ್ರಾರಂಭಿಸಿತು. ಇದರ ಉದ್ದೇಶ ಚಟುವಟಿಕೆಗೆ ವೇಗ ನೀಡುವುದು. ಇಂದಿನ ಯುವಕರು ಮೇಕ್ ಇನ್ ಇಂಡಿಯಾ ಸೇರಿದಂತೆ ವಿವಿಧ ಯೋಜನೆಗಳ ಸದುಪಯೋಗ ಪಡೆದು ತಮ್ಮ ಉದ್ಯಮ ಬಲಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ವಿಭಾಗದ ಮುಖ್ಯಸ್ಥೆ ಜೆ.ಡಿ. ಮಲ್ಲಾಪೂರ ಮಾತನಾಡಿ, ಉದ್ಯಮದ ಕುರಿತ ಅರಿವು ಪಡೆಯಲು ವಿದ್ಯಾರ್ಥಿಗಳು ಬೆಂಗಳೂರಿನಂತಹ ಮಹಾನಗರಗಳಿಗೆ ತೆರಳಬೇಕಾಗುತ್ತಿತ್ತು. ಆದರೆ ಈ ಕಾರ್ಯಾಗಾರದಿಂದ ಅಲ್ಲಿ ಕಲಿಯಬೇಕಾದ ವಿಷಯಗಳನ್ನು ಇಲ್ಲಿ ತಿಳಿದುಕೊಳ್ಳಲು ವಿದ್ಯಾರ್ಥಿಗಳಿಗೆ ಅವಕಾಶ ಸಿಕ್ಕಿದೆ ಎಂದು ಹೇಳಿದರು.

ಜಿಲ್ಲಾ ಕೈಗಾರಿಕೆ ಕೇಂದ್ರದ ಉಪ ನಿರ್ದೇಶಕ ಮಂಜುನಾಥ ಹೊಸಮನಿ, ಸಹಾಯಕ ನಿರ್ದೇಶಕಿ ರತ್ನಾ ಅಂಗಡಿ, ಗ್ರಾಮೀಣ ಕೈಗಾರಿಕೆ ಉಪ ನಿರ್ದೇಶಕ ಸಿದ್ದರಾಯ ಬಳೂರಗಿ, ಜಿಲ್ಲಾ ಕೈಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಅತಿಫ್ ಜಮಾದಾರ, ವ್ಯವಸ್ಥಾಪಕ ದೀಪಕ್ ಡಿ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.