ಶಾಸಕ ಶರತ್‌ ಸಮ್ಮುಖದಲ್ಲಿ ಬಿಜೆಪ ತೊರೆದು ಕಾಂಗ್ರೆಸ್ ಸೇರಿದ ಯುವಕರು

| Published : Nov 24 2025, 01:30 AM IST

ಶಾಸಕ ಶರತ್‌ ಸಮ್ಮುಖದಲ್ಲಿ ಬಿಜೆಪ ತೊರೆದು ಕಾಂಗ್ರೆಸ್ ಸೇರಿದ ಯುವಕರು
Share this Article
  • FB
  • TW
  • Linkdin
  • Email

ಸಾರಾಂಶ

ಹೊಸಕೋಟೆ: ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ತುಂಬು ಹೃದಯದ ಸ್ವಾಗತ ಬಯಸುತ್ತೇನೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಹೊಸಕೋಟೆ: ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ತುಂಬು ಹೃದಯದ ಸ್ವಾಗತ ಬಯಸುತ್ತೇನೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ತಾಲೂಕಿನ ಕಣ್ಣೂರಹಳ್ಳಿ ಗ್ರಾಮದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ 150ಕ್ಕೂ ಹೆಚ್ಚಿನ ಯುವಕರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಮಾತನಾಡಿದ ಅವರು, ಕಣ್ಣೂರಹಳ್ಳಿಯಲ್ಲಿ ಪಕ್ಷಾತೀತವಾಗಿ ನಾನು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಯುವ ಸಮುದಾಯ ನನ್ನೊಂದಿಗೆ ಕೆಲಸ ಮಾಡಲು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಅವರಿಗೆ ಅಧಿಕೃತ ಕಾಂಗ್ರೆಸ್ ಬಾವುಟ ನೀಡಿ ಬರಮಾಡಿಕೊಂಡಿದ್ದು, ಅಭಿವೃದ್ಧಿಗೆ ಮತ್ತಷ್ಟು ಶಕ್ತಿ ಹಾಗೂ ಜವಾಬ್ದಾರಿ ಬಂದಿದೆ ಎಂದರು. ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೃಷ್ಣಮೂರ್ತಿ ಮಾತನಾಡಿ, ಬಚ್ಚೇಗೌಡರು ಶಾಸಕರಾಗಿ, ಸಚಿವರಾಗಿ ಹೊಸಕೋಟೆ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದು, ಈಗ ಅವರ ಪುತ್ರ ಶರತ್ ಬಚ್ಚೇಗೌಡರು ಶಾಸಕರಾಗಿ ಹೊಸಕೋಟೆಯನ್ನು ರಾಜ್ಯದಲ್ಲಿ ಮಾದರಿ ಕ್ಷೇತ್ರವಾಗಿ ಮಾಡಲು ಪಣ ತೊಟ್ಟಿದ್ದಾರೆ. ಅವರ ಅಭಿವೃದ್ಧಿ ಕಾರ್ಯಕ್ಕೆ ಕ್ಷೇತ್ರದ ಮತದಾರರ ಸ್ಪಂದನೆ ಸಾಕಷ್ಟಿದ್ದು ಅವರಿಗೆ ಬೆಂಬಲವಾಗಿ ನಿಂತಿದ್ದಾರೆ. ಮುಂದಿನ ದಿನಗಳಲ್ಲಿ ಬರುವ ಚುನಾವಣೆಯಲ್ಲಿ ಯುವಕರ ಬೆಂಬಲ ಬೇಕು ಎಂದು ಹೇಳಿದರು. ಬಮೂಲ್ ನಿರ್ದೇಶಕರಾದ ಬಿ.ವಿ.ಸತೀಶ್‌ಗೌಡ, ಕೆಎಂಎಫ್‌ ಮಂಜುನಾಥ್, ಬಿಎಂಆರ್‌ಡಿಎ ಅಧ್ಯಕ್ಷ ಕೇಶವಮೂರ್ತಿ, ಗ್ರಾಪಂ ಅಧ್ಯಕ್ಷ ಸುರೇಶ್ ಮತ್ತಿತರರು ಹಾಜರಿದ್ದರು.ಫೋಟೋ: 23 ಹೆಚ್‌ಎಸ್‌ಕೆ 2

ಹೊಸಕೋಟೆ ತಾಲೂಕಿನ ಕಣ್ಣೂರಹಳ್ಳಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಶಾಸಕ ಶರತ್ ಬಚ್ಚೇಗೌಡರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಬಮೂಲ್ ನಿರ್ದೇಶಕರಾದ ಬಿ.ವಿ.ಸತೀಶ್‌ಗೌಡ, ಕೆಎಂಎಫ್‌ ಮಂಜುನಾಥ್, ಬಿಎಂಆರ್‌ಡಿಎ ಅಧ್ಯಕ್ಷ ಕೇಶವಮೂರ್ತಿ, ಗ್ರಾಪಂ ಅಧ್ಯಕ್ಷ ಸುರೇಶ್ ಮತ್ತಿತರರು ಹಾಜರಿದ್ದರು.