ಜಮಖಂಡಿ: ತಾಲೂಕಿನ ಕಡಪಟ್ಟಿ ಗ್ರಾಮದಲ್ಲಿ ಅಪಾಯದ ಸ್ಥಿತಿಯಲ್ಲಿದ್ದ ಮಂಗ ಒಂದನ್ನು ಯುವಕರು ಸಮಯಪ್ರಜ್ಞೆ ಮೆರೆದು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿರುವ ಘಟನೆ ನಡೆದಿದೆ.

ಜಮಖಂಡಿ: ತಾಲೂಕಿನ ಕಡಪಟ್ಟಿ ಗ್ರಾಮದಲ್ಲಿ ಅಪಾಯದ ಸ್ಥಿತಿಯಲ್ಲಿದ್ದ ಮಂಗ ಒಂದನ್ನು ಯುವಕರು ಸಮಯಪ್ರಜ್ಞೆ ಮೆರೆದು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿರುವ ಘಟನೆ ನಡೆದಿದೆ.

ಗ್ರಾಮದ ವ್ಯಾಪ್ತಿಯಲ್ಲಿ ಮಂಗವೊಂದು ಅಪಾಯದಲ್ಲಿರುವುದನ್ನು ಗಮನಿಸಿದ ಯುವಕರಾದ ವಿಜಯಕುಮಾರ, ಮಹೇಶ ವಾಡಗಿ ಹಾಗೂ ಮುದುಕು ಸಾಗರ ಪಿರಪ ಅವರು ತಕ್ಷಣ ಕಾರ್ಯಪ್ರವೃತ್ತರಾಗಿ ಮಂಗನನ್ನು ರಕ್ಷಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಯುವಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.