ಹಿಂದೂಗಳ ಹೊಸ ವರ್ಷ ಯುಗಾದಿ ಹಬ್ಬ. ಈ ಹಬ್ಬದ ದಿನ ಮನೆಮಂದಿಯಲ್ಲ ಒಟ್ಟಿಗೆ ಸೇರಿ ಸಡಗರ ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತೇವೆ. ಇದು ನಮ್ಮ ಭಾರತೀಯ ಸಂಸ್ಕೃತಿಯ ಪ್ರತೀಕ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾ

ಹಿಂದೂಗಳ ಹೊಸ ವರ್ಷ ಯುಗಾದಿ ಹಬ್ಬ. ಈ ಹಬ್ಬದ ದಿನ ಮನೆಮಂದಿಯಲ್ಲ ಒಟ್ಟಿಗೆ ಸೇರಿ ಸಡಗರ ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತೇವೆ. ಇದು ನಮ್ಮ ಭಾರತೀಯ ಸಂಸ್ಕೃತಿಯ ಪ್ರತೀಕ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು. ಅವರು ನಗರದ ಸೇವಾ ಸದನದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಯುಗಾದಿ ಹಬ್ಬ ಆಚರಿಸಿ ಬೇವು ಬೆಲ್ಲವನ್ನು ವಿತರಿಸಿ ಎಲ್ಲರಿಗೂ ಶುಭಕೋರಿ ಮಾತನಾಡಿದರು. ಯುಗಾದಿ ಹಬ್ಬವನ್ನು ಎಲ್ಲರೂ ಸರಿಸಮಾನವಾಗಿ ಆಚರಿಸುತ್ತೇವೆ. ಈ ವರ್ಷ ಪರಾಭಾವನಾಮ ಸಂವತ್ಸವ ಎಂದು ಹೇಳಲಾಗುತ್ತಿದ್ದು, ಕೆಟ್ಟದಕ್ಕೆ ಸೋಲಾಗಿ ಒಳ್ಳಯದಕ್ಕೆ ಗೆಲುವಾಗುತ್ತದೆ ಎಂಬ ನಂಬಿಕೆ ಇದೆ. ಈ ವರ್ಷ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ಉಪಾಧ್ಯಕ್ಷ ಹೊನ್ನಗೊಂಡನಹಳ್ಳಿ ಚಿಕ್ಕಣ್ಣ, ಕುಮಾರ್ ಮಾಸ್ಟರ್, ಶಿರಾ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಈರಣ್ಣ ಪಟೇಲ್, ಶಿರಾ ಗ್ರಾಮಾಂತರ ಎಸ್ಟಿ ಮೋರ್ಚಾ ಅಧ್ಯಕ್ಷ ತೇಜೇಶ್ವರ್, ಮದ್ದಕ್ಕನಹಳ್ಳಿ ರಂಗನಾಥ್, ಡಿ.ಎಚ್.ಗೌಡ ಸೇರಿದಂತೆ ಹಲವರು ಹಾಜರಿದ್ದರು.