ಸಾರಾಂಶ
ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ಯುವನಿಧಿ ಯೋಜನೆಯ ವ್ಯಾಪ್ತಿಗೆ ತರುವ ಉದ್ದೇಶದಿಂದ ಆಗಸ್ಟ್ 7ರವರೆಗೆ ವಿಶೇಷ ನೋಂದಣಿ ಅಭಿಯಾನ ಕೈಗೊಳ್ಳಲಾಗಿದೆ.
ಮಂಗಳೂರು: 2025ನೇ ಸಾಲಿನ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ಯುವನಿಧಿ ಯೋಜನೆಯ ವ್ಯಾಪ್ತಿಗೆ ತರುವ ಉದ್ದೇಶದಿಂದ ಆಗಸ್ಟ್ 7ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಕೈಗೊಳ್ಳಲಾಗಿದೆ.
ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧದ ನೆಲಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಾಗೂ ಕೊಣಾಜೆಯಲ್ಲಿರುವ ವಿವಿ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರದಲ್ಲಿ ಅಭಿಯಾನ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಲು ತಿಳಿಸಲಾಗಿದೆ.2023, 2024 ಹಾಗೂ 2025ರಲ್ಲಿ ಪದವಿ/ ಸ್ನಾತಕೋತ್ತರ ಪದವಿ/ ಡಿಪ್ಲೊಮಾ ಉತ್ತೀರ್ಣರಾಗಿ 6 ತಿಂಗಳಾದರೂ ಉದ್ಯೋಗ ಲಭಿಸದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ದಿನದಿಂದ ಉದ್ಯೋಗ ಸಿಗುವವರೆಗೆ ಮಾತ್ರ ಅಥವಾ 2 ವರ್ಷ ಗರಿಷ್ಠ ಅವಧಿಯವರೆಗೆ ಮಾತ್ರ ಈ ಭತ್ಯೆ ಸಿಗಲಿದೆ.
ವೆಬ್‍ಸೈಟ್ https://sevasindhugs.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳು ಮೂಲಕವೂ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ನೇರ ನಗದು ವರ್ಗಾವಣೆಗಳನ್ನು (ಡಿಬಿಟಿ) ಸ್ವೀಕರಿಸಲು ಮೊಬೈಲ್ ಸಂಖ್ಯೆಗೆ ಲಿಂಕ್ ಆದ ಆಧಾರ್ ಸಂಖ್ಯೆಯ ಬ್ಯಾಂಕ್ ಖಾತೆಯನ್ನು ಕಡ್ಡಾಯವಾಗಿ ಹೊಂದಿರಬೇಕು. ಪ್ರತಿ 3 ತಿಂಗಳಿಗೆ ಒಂದು ಬಾರಿ 25ನೇ ತಾರೀಕಿನೊಳಗೆ ವೆಬ್‍ಸೈಟ್ https://sevasindhugs.karnataka.gov.in ಮೂಲಕ ಸ್ವಯಂ ಘೋಷಣೆಯನ್ನು ಕಡ್ಡಾಯವಾಗಿ ಮಾಡಬೇಕು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.