ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ಮಾಡಲು ಸಮಯವಿಲ್ಲ, ಕಾರ್ಯಕ್ರಮಕ್ಕೆ ಹೋಗಲು ಆಗುತ್ತಿಲ್ಲ ಎಂದಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಮುಖ್ಯಮಂತ್ರಿಗಳು ತಕ್ಷಣವೇ ಸಚಿವ ಸಂಪುಟದಿಂದ ಕಿತ್ತೊಗೆಯಬೇಕು ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಗ್ರಹಿಸಿದ್ದಾರೆ.
ಮಂಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ಮಾಡಲು ಸಮಯವಿಲ್ಲ, ಕಾರ್ಯಕ್ರಮಕ್ಕೆ ಹೋಗಲು ಆಗುತ್ತಿಲ್ಲ ಎಂದಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಮುಖ್ಯಮಂತ್ರಿಗಳು ತಕ್ಷಣವೇ ಸಚಿವ ಸಂಪುಟದಿಂದ ಕಿತ್ತೊಗೆಯಬೇಕು ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಗ್ರಹಿಸಿದ್ದಾರೆ.
ನಗರದ ನೆಹರು ಮೈದಾನದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.ಸಚಿವ ಜಮೀರ್ ಅಹ್ಮದ್ ಖಾನ್ ಅವರ ಗೈರುಹಾಜರಿ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಂಸದ ಬ್ರಿಜೇಶ್ ಚೌಟ, ರಾಜ್ಯದ ಜವಾಬ್ದಾರಿಯುತ ಸಚಿವ ಜಮೀರ್ ಅಹ್ಮದ್ ಖಾನ್ ಅವರು, ಸ್ವಾತಂತ್ರ್ಯದ ಧ್ವಜಾರೋಹಣ ಮಾಡಲು ನನಗೆ ಸಮಯವಿಲ್ಲ, ಧ್ವಜಾರೋಹಣ ಕಾರ್ಯಕ್ರಮಕ್ಕೆ ಹೋಗಲು ಆಗುತ್ತಿಲ್ಲ ಎಂದು ಹೇಳಿರುವುದು ಅತ್ಯಂತ ಹಾಸ್ಯಾಸ್ಪದ ಹಾಗೂ ಬಾಲಿಶವಾದ ಮಾತು ಎಂದು ಅಭಿಪ್ರಾಯಪಟ್ಟಿದ್ದಾರೆ.