ಸಾರಾಂಶ
ರಾಜ್ಯ ಸರ್ಕಾರ ಕಳೆದ ಒಂದೂವರೆ ವರ್ಷಗಳಲ್ಲಿ ಒಮ್ಮೆಯೂ ಹಿಂದೂಗಳ ಪರ ಕೆಲಸ ಮಾಡಿಲ್ಲ. ಬದಲಾಗಿ ಭಯೋತ್ಪಾದಕರಿಗೆ ಕ್ಲೀನ್ ಚಿಟ್ ಕೊಡುವ ಕಾರ್ಯ ಮಾಡುತ್ತಾ ಬಂದಿದೆ. ವಕ್ಫ್ ಅಕ್ರಮದ ರೂವಾರಿ ಜಮೀರ್ ಅಹ್ಮದ್ ಖಾನ್ ದ.ಕ.ಜಿಲ್ಲೆಗೆ ಬಂದರೆ ಬೂಟ್ ರುಚಿ ತೋರಿಸಬೇಕಾಗುತ್ತದೆ ಎಂದು ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಎಚ್ಚರಿಕೆ ನೀಡಿದ್ದಾರೆ.
ಕನ್ನಡಪ್ರಭ ವಾರ್ತೆ ಬಂಟ್ವಾಳ
ರಾಜ್ಯ ಸರ್ಕಾರ ಕಳೆದ ಒಂದೂವರೆ ವರ್ಷಗಳಲ್ಲಿ ಒಮ್ಮೆಯೂ ಹಿಂದೂಗಳ ಪರ ಕೆಲಸ ಮಾಡಿಲ್ಲ. ಬದಲಾಗಿ ಭಯೋತ್ಪಾದಕರಿಗೆ ಕ್ಲೀನ್ ಚಿಟ್ ಕೊಡುವ ಕಾರ್ಯ ಮಾಡುತ್ತಾ ಬಂದಿದೆ. ವಕ್ಫ್ ಅಕ್ರಮದ ರೂವಾರಿ ಜಮೀರ್ ಅಹ್ಮದ್ ಖಾನ್ ದ.ಕ.ಜಿಲ್ಲೆಗೆ ಬಂದರೆ ಬೂಟ್ ರುಚಿ ತೋರಿಸಬೇಕಾಗುತ್ತದೆ ಎಂದು ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಎಚ್ಚರಿಕೆ ನೀಡಿದ್ದಾರೆ.ರಾಜ್ಯ ಸರ್ಕಾರ ಲ್ಯಾಂಡ್ ಜಿಹಾದ್-ವಕ್ಫ್ ಅಕ್ರಮದ ಮೂಲಕ ರೈತ ವಿರೋಧಿ ನೀತಿ ತಳೆದಿದೆ ಎಂದು ಆರೋಪಿಸಿ ಬಿ.ಸಿ.ರೋಡಿನಲ್ಲಿ ಬಂಟ್ವಾಳ ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಬಂಟ್ವಾಳದಲ್ಲಿಯೂ ಮೋನಪ್ಪ ಗೌಡ ಎಂಬ ಕೃಷಿಕರ ಆಸ್ತಿಯನ್ನು ವಕ್ಫ್ ಎನ್ನಲಾಗುತ್ತಿದ್ದು, ಅದಕ್ಕೆ ನ್ಯಾಯಾಲಯಕ್ಕೂ ಹೋದರ ಏನೂ ಆಗದ ಸ್ಥಿತಿ ಇದೆ. ಕಳೆದ ಲೋಕಸಭಾ ಚುನಾವಣೆಯ ಸಂದರ್ಭ ಸಂವಿಧಾನಕ್ಕೆ ತೊಂದರೆಯಾಗುತ್ತಿದೆ ಎನ್ನುತ್ತಿದ್ದವರು ಈಗ ಎಲ್ಲಿದ್ದಾರೆ ಎಂದು ಪ್ರಶ್ನೆ ಮಾಡಬೇಕಾದ ಸ್ಥಿತಿ ಇದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಮಾತನಾಡಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಕರ್ನಾಟಕವನ್ನು ಮುಸ್ಲಿಂ ರಾಜ್ಯ ಮಾಡಲುಹೊರಟಿದ್ದಾರೆ ಎಂದು ಆರೋಪಿಸಿದರು.
ಬಂಟ್ವಾಳ ಬಿಜೆಪಿ ಅಧ್ಯಕ್ಷ ಆರ್.ಚೆನ್ನಪ್ಪ ಕೋಟ್ಯಾನ್, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ ಬಜ , ಶಿವಪ್ರಸಾದ್ ಶೆಟ್ಟಿ ,ಬಿಜೆಪಿ ಪ್ರಮುಖರಾದ ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ಸಂದೇಶ್ ಶೆಟ್ಟಿ, ಪುರುಷೋತ್ತಮ ಶೆಟ್ಟಿ, ಪುರುಷೋತ್ತಮ ಸಾಲ್ಯಾನ್, ಜನಾರ್ದನ ಸಾಲ್ಯಾನ್ ಮೊದಲಾದವರಿದ್ದರು.