ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಲೇಡಿಗೋಶನ್ ಆಸ್ಪತ್ರೆಗೆ ರಾಜ್ಯ ಪ್ರಶಸ್ತಿ ದೊರೆತಿರುವುದು ಸಂತಸದ ವಿಚಾರ. ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ ರಾಜ್ಯಮಟ್ಟದ ಪ್ರಶಸ್ತಿ ಪಡೆದಿರುವ ಲೇಡಿಗೋಷನ್ ಆಸ್ಪತ್ರೆಯ ಸಾಧನೆ ಇಡೀ ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೆ ದೊರೆತ ಗೌರವ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು.

ಮಂಗಳೂರು: ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಲೇಡಿಗೋಶನ್ ಆಸ್ಪತ್ರೆಗೆ ರಾಜ್ಯ ಪ್ರಶಸ್ತಿ ದೊರೆತಿರುವುದು ಸಂತಸದ ವಿಚಾರ. ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ ರಾಜ್ಯಮಟ್ಟದ ಪ್ರಶಸ್ತಿ ಪಡೆದಿರುವ ಲೇಡಿಗೋಷನ್ ಆಸ್ಪತ್ರೆಯ ಸಾಧನೆ ಇಡೀ ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೆ ದೊರೆತ ಗೌರವ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು.ಶನಿವಾರ ಯುವವಾಹಿನಿ ಕೇಂದ್ರ ಮಂಗಳೂರು ಹಾಗೂ ವೇಣೂರು ಘಟಕದ ವತಿಯಿಂದ ನಗರದ ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಗೆ ಎನ್.ಎಸ್.ಟಿ. ಯಂತ್ರ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆಸ್ಪತ್ರೆಯ ವೈದ್ಯಕೀಯ ಸೇವೆಗೆ ನೆರವಾಗುವ ನಿಟ್ಟಿನಲ್ಲಿ ಎನ್.ಎಸ್.ಟಿ. ಯಂತ್ರವನ್ನು ಕೊಡುಗೆಯಾಗಿ ನೀಡಿರುವ ಯುವವಾಹಿನಿ ಸಂಘಟನೆಯ ಸಮಾಜಮುಖಿ ಚಿಂತನೆ ಶ್ಲಾಘನೀಯ ಎಂದರು.

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅಧ್ಯಕ್ಷತೆ ವಹಿಸಿದ್ದರು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪೂಜಾರಿ, ಬೆಳ್ತಂಗಡಿ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ, ಕೆ.ಎಂ.ಸಿ. ಡೀನ್ ಡಾ.ಉನ್ನಿಕೃಷ್ಣನ್, ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಮತ್ತಿತರರು ಇದ್ದರು.

ಲೇಡಿಗೋಶನ್ ಅಧೀಕ್ಷಕ ಡಾ.ದುರ್ಗಾಪ್ರಸಾದ್ ಪ್ರಾಸ್ತಾವಿಕ ಮಾತನಾಡಿದರು. ಯುವವಾಹಿನಿ ಕೇಂದ್ರ ಸಮಿತಿಯ ಸಮಾಜ ಸೇವಾ ನಿರ್ದೇಶಕ ನಿತೀಶ್ ಸ್ವಾಗತಿಸಿದರು.