ಸಾರಾಂಶ
ಚಳ್ಳಕೆರೆ ; ಕರ್ನಾಟಕ ಮಾಧ್ಯಮ ಮಹಾ ಒಕ್ಕೂಟದ ನೂತನ ಜಿಲ್ಲಾಧ್ಯಕ್ಷರಾಗಿ ಮೊಳಕಾಲ್ಮೂರಿನ ಜೀಯಾವುಲ್ಲಾ ಆಯ್ಕೆಯಾಗಿದ್ದಾರೆ ಎಂದು ಮಾಧ್ಯಮ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಶಿವಕುಮಾರ್ ತಿಳಿಸಿದರು.
ಬುಧವಾರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಮಾಧ್ಯಮ ಮಹಾ ಒಕ್ಕೂಟದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಮಾಧ್ಯಮ ಒಕ್ಕೂಟವನ್ನು ಬಲಗೊಳಿಸುವ ನಿಟ್ಟಿನಲ್ಲಿ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಆಯ್ಕೆ ಮಾಡಲು ಸಭೆ ಕರೆಯಲಾಗಿದೆ. ಎಲ್ಲರ ಅಭಿಪ್ರಾಯ ಪಡೆದು ಮೊಳಕಾಲ್ಮೂರಿನ ಯುವಕ, ಪತ್ರಿಕಾ ಕ್ಷೇತ್ರದ ಬಗ್ಗೆ ಸಾಕಷ್ಟು ಅನುಭವ, ವಿಶ್ವಾಸ ಹೊಂದಿರುವ ಜೀಯಾವುಲ್ಲಾರವರನ್ನು ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು, ಜಿಲ್ಲೆಯಲ್ಲಿ ಮಾಧ್ಯಮ ಮಹಾ ಒಕ್ಕೂಟವನ್ನು ಬಲವಾಗಿ ಸಂಘಟಿಸಬೇಕಲ್ಲದೆ, ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ಪತ್ರಕರ್ತರಿಗೆ ಸಮಸ್ಯೆ ಉಂಟಾದಲ್ಲಿ ಸ್ಪಂದಿಸುವಂತೆ ಸೂಚನೆ ನೀಡಿದರು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜೀಯಾವುಲ್ಲಾ ಮಾತನಾಡಿ, ಜಿಲ್ಲಾ ಮಟ್ಟದಲ್ಲಿ ನನಗೆ ಅಧ್ಯಕ್ಷ ಸ್ಥಾನ ನೀಡಿದ ರಾಜ್ಯಾಧ್ಯಕ್ಷ ಹಾಗೂ ಪದಾಧಿಕಾರಿಗಳಿಗೆ ನಾನು ಅಭಾರಿಯಾಗಿದ್ದೇನೆ. ಪತ್ರಿಕಾರಂಗದ ಹಲವಾರು ಸಮಸ್ಯೆಗಳ ಬಗ್ಗೆ ನಿಮ್ಮೆಲ್ಲರ ಮಾರ್ಗದರ್ಶನ ಪಡೆದು ಅವುಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು.
ರಾಜ್ಯಪ್ರಧಾನ ಕಾರ್ಯದರ್ಶಿ ಡಿ.ಈಶ್ವರಪ್ಪ ಮಾತನಾಡಿ, ಕರ್ನಾಟಕ ಮಾಧ್ಯಮ ಮಹಾ ಒಕ್ಕೂಟ ಕಳೆದ ಒಂದು ವರ್ಷದಿಂದ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯಾಧ್ಯಕ್ಷರ ಸೂಚನೆ ಮೇರೆಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಓಬಳೇಶ್, ಉಪಾಧ್ಯಕ್ಷರಾಗಿ ಕೆ.ರುದ್ರಮುನಿ, ಗ್ರಾಮಾಂತರ ಉಪಾಧ್ಯಕ್ಷರಾಗಿ ಜಿ.ಎನ್.ಜಯರಾಂ, ಖಜಾಂಚಿಯಾಗಿ ಎಚ್.ರಾಜಪ್ಪ, ಜಿಲ್ಲಾ ಸದಸ್ಯರಾಗಿ ಆನಂದಮೂರ್ತಿ, ಅನಿಲ್‌ಕುಮಾರ್, ಪರಮೇಶ್ವರನಾಯ್ಕ ಇವರನ್ನು ಆಯ್ಕೆ ಮಾಡಲಾಗಿದೆ ಎಂದರು.