ಕನ್ನಡಪ್ರಭ ವಾರ್ತೆ ಲೋಕಾಪುರಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಗಜಾನನ ಬಾಲೆ ಭೇಟಿ ನೀಡಿ ಆರೋಗ್ಯ ಕೇಂದ್ರದಲ್ಲಿ ಜನರಿಗೆ ದೊರೆಯುತ್ತಿರುವ ಸೌಲಭ್ಯಗಳು ಮತ್ತು ಆರೋಗ್ಯ ಕೇಂದ್ರದ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಲೋಕಾಪುರ
ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಗಜಾನನ ಬಾಲೆ ಭೇಟಿ ನೀಡಿ ಆರೋಗ್ಯ ಕೇಂದ್ರದಲ್ಲಿ ಜನರಿಗೆ ದೊರೆಯುತ್ತಿರುವ ಸೌಲಭ್ಯಗಳು ಮತ್ತು ಆರೋಗ್ಯ ಕೇಂದ್ರದ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು. ಆರೋಗ್ಯ ಸಿಬ್ಬಂದಿ ಜೊತೆ ಮಾತನಾಡಿ, ಆಸ್ಪತ್ರೆಯ ಕಾರ್ಯನಿರ್ವಹಣೆ, ಸಿಬ್ಬಂದಿ ಹಾಜರಾತಿ ಮತ್ತು ರೋಗಿಗಳಿಗೆ ಸಿಗುತ್ತಿರುವ ವೈದ್ಯಕೀಯ ಸೇವೆಗಳನ್ನು ಕುರಿತು ಮಾಹಿತಿ ಪಡೆದುಕೊಂಡರು. ನಂತರ ಹಾವು ಕಡಿತ, ನಾಯಿಗಳ ಕಡಿತ ಕುರಿತು ಔಷಧಿ ಉಪಚಾರಗಳ ಬಗ್ಗೆ ಕೇಳಿದರು.ಈ ವೇಳೆ ತಾಪಂ ಇಒ ರಾಘವೇಂದ್ರ ಕಟ್ಟಿಮನಿ, ಗ್ರಾಮೀಣಾಭಿವೃದ್ಧಿ ಸಹಾಯಕ ನಿರ್ದೇಶಕ ಶ್ರೀನಿವಾಸ ಚಿಗರಡ್ಡಿ, ಪಂಚಾಯತ ರಾಜ್ಯ ಸಹಾಯಕ ನಿರ್ದೇಶಕ ಅಶೋಕ ಹುಕುಮನವರ, ಪಿಡಿಓಗಳಾದ ವಿವೇಕ ಬಿರಾದಾರ, ಶಿವಾನಂದ ನರಸಣ್ಣವರ, ರೊಹಿತ ಇಟಕನ್ನವರ, ಆರೋಗ್ಯ ಕೇಂದ್ರದ ಸಿಬ್ಬಂದಿ ಕಮಲಾ ಲೆಂಕೆಮ್ಮನವರ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.