ಸಾರಾಂಶ
ಮೈಸೂರಿನಲ್ಲಿರುವ ಐನಾಕ್ಸ್ ನ ಮೂರು ಪರದೆಗಳಲ್ಲಿ ಪ್ರದರ್ಶನ
ಕನ್ನಡಪ್ರಭ ವಾರ್ತೆ ಮೈಸೂರು
ದಸರಾ ಚಲನಚಿತ್ರೋತ್ಸವ ಪೋಸ್ಟರ್ ಗಳನ್ನು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಜಿಪಂ ಸಭಾಂಗಣದಲ್ಲಿ ಸೋಮವಾರ ಬಿಡುಗಡೆ ಮಾಡಿದರು. ದಸರಾ ಮಹೋತ್ಸವ ಪ್ರಯುಕ್ತ ಅ.4 ರಿಂದ 10 ರವರೆಗೆ 7 ದಿನ ನಡೆಯಲಿರುವ ದಸರಾ ಚಲನಚಿತ್ರೋತ್ಸವದಲ್ಲಿ 112 ಸಿನಿಮಾಗಳು ಹುಣಸೂರು ರಸ್ತೆಯಲ್ಲಿರುವ ಡಿ.ಆರ್.ಸಿಯ ಒಂದು ಪರದೆ ಮತ್ತು ಮೈಸೂರಿನಲ್ಲಿರುವ ಐನಾಕ್ಸ್ ನ ಮೂರು ಪರದೆಗಳಲ್ಲಿ ಪ್ರದರ್ಶನವಾಗಲಿವೆ.ವಿಧಾನಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ, ಎಂಡಿಎ ಅಧ್ಯಕ್ಷ ಕೆ. ಮರೀಗೌಡ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಕೆ.ಎಂ. ಗಾಯತ್ರಿ, ಎಸ್ಪಿ ಎನ್. ವಿಷ್ಣುವರ್ಧನ್, ಡಿಸಿಎಫ್ ಡಾ.ಕೆ.ಎನ್. ಬಸವರಾಜ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಂಗೇಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ. ಹರೀಶ್ ಮೊದಲಾದವರು ಇದ್ದರು.