ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ-ಮತ್ಯಾಡಿಯ ಸಹಭಾಗಿತ್ವದಲ್ಲಿ ಇತ್ತೀಚೆಗೆ ಕುಂದಾಪುರ ವಲಯ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು.

ಕುಂದಾಪುರ: ಮಕ್ಕಳು ಕೇವಲ ಓದು ಮತ್ತು ಅಂಕಗಳು ಎಂದು ಕಳೆದುಹೋಗದೆ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮದಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳಬೇಕು. ಮಕ್ಕಳ ತಮ್ಮ ಪ್ರತಿಭೆ ಹೊರಹಾಕಲು ಇದೊಂದು ಅತ್ಯುತ್ತಮ ವೇದಿಕೆ ಎಂದು ಶಾಸಕ ಎ. ಕಿರಣ್ ಕುಮಾರ್‌ ಕೊಡ್ಗಿ ಹೇಳಿದ್ದಾರೆ.ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ, ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ-ಮತ್ಯಾಡಿಯ ಸಹಭಾಗಿತ್ವದಲ್ಲಿ ಇತ್ತೀಚೆಗೆ ನಡೆದ ಕುಂದಾಪುರ ವಲಯ ಮಟ್ಟದ ಪ್ರತಿಭಾ ಕಾರಂಜಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಮಾತನಾಡಿ, ಹಿಂದೆ ಪ್ರತಿಭೆ ಇದ್ದರೂ ಅವಕಾಶಗಳು ಸಿಗುತ್ತಿರಲಿಲ್ಲ. ಪ್ರತಿಭಾ ಕಾರಂಜಿಯು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ತೋರಲು ಒಂದು ಅತ್ಯುತ್ತಮ ವೇದಿಕೆ ಎಂದರು.ಕುಂದಾಪುರದ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ ನ ಖಜಾಂಚಿ ಭರತ್ ಶೆಟ್ಟಿ, ಪ್ರಾಂಶುಪಾಲ ರಂಜನ್ ಬಿ.ಶೆಟ್ಟಿ, ಹೊಂಬಾಡಿ-ಮಂಡಾಡಿ ಗ್ರಾ.ಪಂ. ಉಪಾಧ್ಯಕ್ಷ ಬಿ.ಅರುಣ್ ಕುಮಾರ್ ಹೆಗ್ಡೆ, ಕುಂದಾಪುರ ಕ್ಷೇತ್ರ ಸಮನ್ವಯಧಿಕಾರಿಗಳಾದ ಅಶೋಕ್ ನಾಯ್ಕ್, ಅಕ್ಷರದಾಸೋಹ ಸಹಾಯಕ ನಿರ್ದೇಶಕರಾದ ಚಂದ್ರ ನಾಯ್ಕ್, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕುಂದಾಪುರ ಅಧ್ಯಕ್ಷ ಗಣೇಶ್ ಕುಮಾರ್ ಶೆಟ್ಟಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಕುಂದಾಪುರ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಕುಂದಾಪುರ ವಲಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಅನುದಾನಿತ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಕುಂದಾಪುರ ವಲಯ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ನೋಡಲ್ ಜ್ಯೋತಿ ಬಿ. ಮತ್ತು ತಾಲೂಕು ನೊಡೆಲ್ ಶೇಖರ್ ಯು ಉಪಸ್ಥಿತರಿದ್ದರು.ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಶೋಭಾ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ರಜತ್ ಭಟ್ ಸ್ವಾಗತಿಸಿದರು. ಬಿಆರ್ ಪಿ ಸಂತೋಷ್ ಕುಮಾರ್ ಶೆಟ್ಟಿ ನಿರೂಪಿಸಿದರು. ಮುಖ್ಯೋಪಾಧ್ಯಾಯ ಪ್ರದೀಪ್ ಕೆ. ವಂದಿಸಿದರು.