ಸಾರಾಂಶ
ಬೈಲಹೊಂಗಲ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕೊಠಡಿಗಳನ್ನು ಜಿಪಂ ಸಿಇಒ ರಾಹುಲ್ ಶಿಂಧೆ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಬೈಲಹೊಂಗಲ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕೊಠಡಿಗಳನ್ನು ಜಿಪಂ ಸಿಇಒ ರಾಹುಲ್ ಶಿಂಧೆ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಸಿಇಟಿ ಮತ್ತು ನೀಟ್ ಪರೀಕ್ಷೆಗಳನ್ನು ಅತ್ಯಂತ ಯಶಸ್ವಿಯಾಗಿ ಆತ್ಮವಿಶ್ವಾಸದಿಂದ ಎದುರಿಸಬೇಕು. ಅದಕ್ಕಾಗಿ ನಿಮಗೆ ಜಿಪಂ ವತಿಯಿಂದ ಅತ್ಯುತ್ತಮ ತರಬೇತಿಯನ್ನು ಪ್ರತಿ ಶನಿವಾರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದರ ಮೂಲಕ ಭಾವಿ ಪರೀಕ್ಷೆಗೆ ತಯಾರಿ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಿ ನಿಮ್ಮ ಭವಿಷ್ಯವನ್ನು ಸುಂದರವಾಗಿ ರೂಪಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಮಾತನಾಡಿದ ಶಾಸಕ ಮಹಾಂತೇಶ ಎಸ್. ಕೌಜಲಗಿ, ಸರ್ಕಾರದ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಸಿಇಟಿ ಮತ್ತು ನೀಟ್ ಪರೀಕ್ಷೆಗಳಲ್ಲಿ ಪರಿಶ್ರಮದಿಂದ ಅಧ್ಯಯನ ಮಾಡಿ ಯಶಸ್ವಿಯಾಗಿ ನಿಮ್ಮ ಭವಿಷ್ಯ ರೂಪಿಸಿಕೊಳ್ಳಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರ ಪ್ರಯತ್ನವನ್ನು ವಿದ್ಯಾರ್ಥಿಗಳು ಸಾರ್ಥಕಪಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ವಿದ್ಯಾರ್ಥಿನಿ ಅನುಶ್ರೀ ಬಿಜ್ಜಣ್ಣವರ ಮಾತನಾಡಿದರು.
ಕಾರ್ಯಪಾಕ ಅಭಿಯಂತರ ಎಸ್.ಬಿ.ಕೋಳಿ(ಪಂಚಾಯತ ರಾಜ್) ಬೆಳಗಾವಿ ವಿಭಾಗ, ಪ್ರಾಚಾರ್ಯ ಬಿ.ಎಂ. ಕೊಳವಿ, ಅಶೋಕ ವಾಲಿ, ಕಾಲೇಜು ಅಭಿವೃದ್ಧಿ ಸಮಿತಿ ಎಲ್ಲ ಸದಸ್ಯರು, ಕಾಲೇಜಿನ ಎಲ್ಲ ಉಪನ್ಯಾಸಕರು ಹಾಗೂ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಇದ್ದರು.