ಸಾರಾಂಶ
ಕನ್ನಡಪ್ರಭ ವಾರ್ತೆ ಹುಣಸೂರುಜಿಪಂ ಸಿಇಒ ಎಸ್. ಯುಕೇಶ್ ಕುಮಾರ್ ಅವರು ಬುಧವಾರ ತಾಲೂಕಿನ ದೊಡ್ಡ ಹೆಜ್ಜೂರು, ಕಿರಂಗೂರು ಹಾಗೂ ಉಮ್ಮತ್ತೂರು ಗ್ರಾಪಂ ವ್ಯಾಪ್ತಿಯ ಹಾಡಿ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು.ಮೊದಲಿಗೆ ದೊಡ್ಡ ಹೆಜ್ಜೂರು ಗ್ರಾಪಂ ಭೇಟಿ ನೀಡಿ, ಪಿಡಿಒ ಹಾಗೂ ಅಧ್ಯಕ್ಷರ ಬಳಿ ಇಂದಿಗೂ ಘನ ತ್ಯಾಜ್ಯ ವಿಲೇವಾರಿ ಘಟಕ ಕಾರ್ಯನಿರ್ವಹಿಸದ ಬಗ್ಗೆ ಪ್ರಶ್ನೆ ಮಾಡಿದರು. ಜೊತೆಗೆ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬೇಡಿಕೆ ಮತ್ತು ವಸೂಲಾತಿ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಂಡರು.ಬಳಿಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ 15ನೇ ಹಣಕಾಸು ಯೋಜನೆಯಡಿ ನಿರ್ಮಾಣಗೊಂಡಿರುವ ಶೌಚಾಲಯ ಕಾಮಗಾರಿ ಪರಿಶೀಲಿಸಿದರು. ಜೊತೆಗೆ ಶಾಲೆಯಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಕಲ್ಪಿಸಿರುವುದರ ಕುರಿತು ಮಾಹಿತಿ ಪಡೆದರು.ಬಳಿಕ ಕಿರಂಗೂರಿನ ಶಂಕರಪುರ ಹಾಡಿಗೆ ತೆರಳಿ ಅಲ್ಲಿನ ಜನರ ಸಮಸ್ಯೆ ಆಲಿಸಿದರು. ಈ ವೇಳೆ ಅಲ್ಲಿನ ಸ್ಥಳೀಯರು ವಸತಿ ಕುರಿತು ಬೇಡಿಕೆ ಸಲ್ಲಿಸಿದ್ದು, ಒಂದೇ ಮನೆಯಲ್ಲಿ ಒಂದೆರಡು ಕುಟುಂಬಗಳು ಹೆಚ್ಚಾಗಿ ವಾಸವಿದ್ದು, ನಿವೇಶನ ವಂಚಿತರಾದವರಿಗೆ ಸೂಕ್ತ ವಸತಿ ಕಲ್ಪಿಸುವಂತೆ ಮನವಿ ಸಲ್ಲಿಸಿದರು.ಬಳಿಕ ಉಮ್ಮತ್ತೂರು ಗ್ರಾಪಂ ನಲ್ಲೂರು ಪಾಲ ಆಶ್ರಮ ಶಾಲೆ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಮಾಡಿದ್ದು, ಇಲ್ಲಿನ ಹಂಗಾಮಿ ಶಿಕ್ಷಕರಿಗೆ ನಿಗತ ಸಮಯಕ್ಕೆ ವೇತನ ಪಾವತಿಯಾಗದಿರುವ ಕುರಿತ ಸಮಸ್ಯೆ ಆಲಿಸಿದರು. ಜೊತೆಗೆ ಶಾಲೆಗಳಲ್ಲಿ ಸಮರ್ಪಕ ಮೂಲಭೂತ ಸೌಕರ್ಯ ಮತ್ತು ಹೊಸದಾಗಿ ಶಾಲಾ ಶೌಚಾಲಯವನ್ನು ಮ-ನರೇಗಾದಿಂದ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪಿಡಿಒ ಅವರಿಗೆ ತಾಕೀತು ಮಾಡಿದರು.ಈ ವೇಳೆ ಕಾರ್ಯನಿರ್ವಾಹಕ ಅಧಿಕಾರಿ ಕೆ. ಹೊಂಗಯ್ಯ, ಎಇಇ ಪುಟ್ಟರಾಜು, ಪಿ.ಆರ್.ಇ.ಡಿ. ಎಂಜಿನಿಯರ್, ಸಿಡಿಪಿಒ ಅಧಿಕಾರಿ ಹರೀಶ್, ಪ.ಪಂಗಡ ಇಲಾಖೆ ಸಹಾಯಕ ನಿರ್ದೇಶಕ ಗಂಗಾಧರ್, ತಾಲೂಕು ಯೋಜನಾಧಿಕಾರಿ ಎಂ.ಎಸ್. ರಾಜೇಶ್, ನರೇಗಾ ಸಹಾಯಕ ನಿರ್ದೇಶಕ ಎಸ್. ಗಿರಿಧರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಮಹದೇವ. ಕೆ.ಟಿ .ಭವ್ಯಾ, ಮ-ನರೇಗಾ ಸಹಾಯಕ ಎಂಜಿನಿಯರ್ ನಂದ ಶ್ರೀನಿವಾಸ್, ಮದನ್, ಅನಿಲ್ ಸೇರಿದಂತೆ ಕಾರ್ಯದರ್ಶಿ ಸಿಬ್ಬಂದಿ ಇದ್ದರು.